IPL 2023 Playoffs: ಪಂದ್ಯಾವಳಿ ಮಾರ್ಚ್ 31, 2023 ರಂದು ಆರಂಭಗೊಂಡಿದೆ ಮತ್ತು ಪಂದ್ಯಾವಳಿಯ ಅಂತಿಮ ಪಂದ್ಯ ಮೇ 28 ರಂದು ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ. ಇದುವರೆಗೆ ಐಪಿಎಲ್ನಲ್ಲಿ 28 ಪಂದ್ಯಗಳು ನಡೆದಿದ್ದು, ಪ್ರತಿ ಪಂದ್ಯ ಒಂದಕ್ಕಿಂತ ಒಂದು ರೋಚಕವಾಗಿ ಅಂತ್ಯಕಂಡಿವೆ. ಈ ನಡುವೆ ಬಿಸಿಸಿಐ ಪ್ಲೇಆಫ್ ಪಂದ್ಯಗಳ ವೇಳಾಪಟ್ಟಿಯನ್ನು ಸಹ ಬಿಡುಗಡೆ ಮಾಡಿದೆ.
ಪ್ಲೇ ಆಫ್ ವೇಳಾಪಟ್ಟಿ ಘೋಷಿಸಿದ ಬಿಸಿಸಿಐ
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಶುಕ್ರವಾರ ಟಾಟಾ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2023 ರ ಪ್ಲೇಆಫ್ ಮತ್ತು ಫೈನಲ್ಗಳ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಪ್ಲೇಆಫ್ಗಳು ಮತ್ತು ಫೈನಲ್ಗಳು 23 ಮೇ ನಿಂದ 28 ಮೇ 2023 ರವರೆಗೆ ಚೆನ್ನೈ ಮತ್ತು ಅಹಮದಾಬಾದ್ನಲ್ಲಿ ನಡೆಯಲಿವೆ. ಮೊದಲ ಕ್ವಾಲಿಫೈಯರ್ ಪಂದ್ಯ ಮೇ 23 ರಂದು ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿದೆ. ನಂತರ ಎಲಿಮಿನೇಟರ್ ಮೇ 24 ರಂದು ನಡೆಯಲಿದೆ. ಮೇ 26 ರಂದು ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಎರಡನೇ ಕ್ವಾಲಿಫೈಯರ್ ಪಂದ್ಯ ನಡೆಯಲಿದ್ದು, ಮೇ 28 ರಂದು ಐಪಿಎಲ್ 2023 ರ ಫೈನಲ್ ಪಂದ್ಯವೂ ಇದೇ ಮೈದಾನದಲ್ಲಿ ನಡೆಯಲಿದೆ.
ಇದುವರೆಗೆ 28 ಪಂದ್ಯಗಳು ನಡೆದಿವೆ
ಐಪಿಎಲ್ 2023 ರಲ್ಲಿ ಸುದ್ದಿ ಪ್ರಕಟಗೊಳ್ಳುವವರೆಗೆ 28 ಪಂದ್ಯಗಳನ್ನು ಆಡಲಾಗಿದೆ. ಈ ಪಂದ್ಯಗಳಲ್ಲಿ ರಾಜಸ್ಥಾನ್ ರಾಯಲ್ಸ್ (8 ಅಂಕ) ತಂಡ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದರೆ, ಡೆಲ್ಲಿ ಕ್ಯಾಪಿಟಲ್ಸ್ (2 ಅಂಕ) ಕೊನೆಯ ಸ್ಥಾನದಲ್ಲಿದೆ. ಇದಲ್ಲದೇ ಲಕ್ನೋ ಸೂಪರ್ ಜೈಂಟ್ಸ್ ತಂಡ 8 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದರೆ, ಚೆನ್ನೈ ಸೂಪರ್ ಕಿಂಗ್ಸ್ 6 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದೆ. ಗುಜರಾತ್ ಟೈಟಾನ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು, ಮುಂಬೈ ಇಂಡಿಯನ್ಸ್ ಮತ್ತು ಪಂಜಾಬ್ ಕಿಂಗ್ಸ್ ಕ್ರಮವಾಗಿ 6 ಅಂಕಗಳೊಂದಿಗೆ (ಎಲ್ಲಾ ನಾಲ್ಕು ತಂಡಗಳು) ನಾಲ್ಕು, ಐದನೇ, ಆರನೇ ಮತ್ತು ಏಳನೇ ಸ್ಥಾನದಲ್ಲಿವೆ. ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ಎಂಟು ಮತ್ತು ಒಂಬತ್ತನೇ ಸ್ಥಾನದಲ್ಲಿದ್ದು, ಎರಡೂ ತಂಡಗಳು 4-4 ಅಂಕಗಳನ್ನು ಪಡೆದುಕೊಂಡಿವೆ.
ಇದನ್ನೂ ಓದಿ-Girls Behaviour On Google: ವಿವಾಹಕ್ಕೂ ಮುನ್ನ ಗೂಗಲ್ ನಲ್ಲಿ ಹುಡ್ಗೀರು ಸರ್ಚ್ ಮಾಡುವುದು ಏನು ಗೊತ್ತಾ?
ಅಹಮದಾಬಾದ್ನಲ್ಲಿ ಗ್ರ್ಯಾಂಡ್ ಫೈನಲ್ ಮ್ಯಾಚ್ ನಡೆಯಲಿದೆ
ಐಪಿಎಲ್ 2022 ರ ಫೈನಲ್ನಂತೆ, ಈ ಸೀಸನ್ನಲ್ಲಿಯೂ ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಟೂರ್ನಿಯ ಗ್ರ್ಯಾಂಡ್ ಫೈನಲ್ ಪಂದ್ಯ ನಡೆಯಲಿದೆ. ಈ ಕ್ರೀಡಾಂಗಣವು ಒಂದು ಲಕ್ಷಕ್ಕೂ ಹೆಚ್ಚು ಪ್ರೇಕ್ಷಕರು ಕುಳಿತುಕೊಳ್ಳುವ ಸಾಮರ್ಥ್ಯವನ್ನು ಹೊಂದಿದೆ, ಕಳೆದ ಋತುವಿನ ಫೈನಲ್ನಲ್ಲಿ ಆತಿಥೇಯ ಗುಜರಾತ್ ಟೈಟಾನ್ಸ್ ರಾಜಸ್ಥಾನ್ ರಾಯಲ್ಸ್ ತಂಡವನ್ನು ಸೋಲಿಸಿ ಟ್ರೋಫಿಯನ್ನು ವಶಪಡಿಸಿಕೊಂಡಿತ್ತು. ಐಪಿಎಲ್ 2023 ರ ಆರಂಭಿಕ ಪಂದ್ಯವೂ ಇದೇ ಮೈದಾನದಲ್ಲಿ ನಡೆದಿತ್ತು ಎಂಬುದು ಇಲ್ಲಿ ಉಲ್ಲೇಖನೀಯ.
ಇದನ್ನೂ ನೋಡಿ-
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.