ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಹೊಸ ಮೈಲಿಗಲ್ಲು ಸೃಷ್ಟಿಸಿದ ಸಿನಿಮಾ ನಾಗರಹಾವು. ಈ ಚಿತ್ರದ ರಾಮಾಚಾರಿ ಹಾಗೂ ಮಾರ್ಗರೇಟ್ ಪಾತ್ರಗಳು ಇಂದಿಗೂ ಪ್ರೇಕ್ಷಕರ ಅಚ್ಚುಮೆಚ್ಚು. ಇದೇ ಚಿತ್ರದ ಪಾತ್ರಗಳನ್ನು ಇಟ್ಕೊಂಡು ಬಂದ ರಾಮಾಚಾರಿ ಮತ್ತು ಮಿಸ್ಟರ್ ಅಂಡ್ ಮಿಸೆಸ್ ರಾಮಾಚಾರಿ ಸಿನಿಮಾ ಸೂಪರ್ ಸಕ್ಸಸ್ ಕಂಡಿದೆ. ಇದೇ ನಾಗರಹಾವು ಸಿನಿಮಾದ ಪಾತ್ರಗಳ ಸ್ಫೂರ್ತಿ ಪಡೆದು ಹೊಸ ಸಿನಿಮಾವೊಂದು ಬರ್ತಿದೆ.
ಆ ಚಿತ್ರಕ್ಕೆ ಮಾರ್ಗರೇಟ್ ಲವರ್ ಆಫ್ ರಾಮಾಚಾರಿ ಎಂದು ಟೈಟಲ್ ಇಡಲಾಗಿದೆ. ಯುವ ಪ್ರತಿಭೆ ಅಭಿಲಾಶ್ ನಾಯಕನಾಗಿ ಹಾಗೂ ಸೋನಲ್ ಮೊಂಥೆರೋ ನಾಯಕಿಯಾಗಿ ನಟಿಸುತ್ತಿರುವ ಮಾರ್ಗರೇಟ್ ಲವರ್ ಆಫ್ ರಾಮಾಚಾರಿ ಚಿತ್ರದ ಮುಹೂರ್ತ ಸಮಾರಂಭವಿಂದು ಬೆಂಗಳೂರಿನ ಬಂಡೇ ಮಹಾಕಾಳಿ ಸನ್ನಿಧಿಯಲ್ಲಿ ನೆರವೇರಿತು. ನಟರಾಕ್ಷಸ ಡಾಲಿ ಧನಂಜಯ್ ಹೊಸ ತಂಡಕ್ಕೆ ಶುಭ ಹಾರೈಸಿದರು.
ಇದನ್ನೂ ಓದಿ: Yash - Hardik Pandya: ರಾಕಿ ಭಾಯ್ ಜೊತೆ ಭರ್ಜರಿ ಸ್ಟೆಪ್ಸ್ ಹಾಕಿದ ಹಾರ್ದಿಕ್ ಪಾಂಡ್ಯ... ಫ್ಯಾನ್ಸ್ ಫುಲ್ ಫಿದಾ!
ನಿರ್ದೇಶಕ ಗಿರಿಧರ್ ಕುಂಬಾರ್ ಮಾತನಾಡಿ, ಈ ಚಿತ್ರದ ಮೂಲಕ ಇವತ್ತಿನ ಸಮಾಜಕ್ಕೆ ಬೇಕಿರುವ ಸಂದೇಶ ಕೊಡುತ್ತೇವೆ. ನಾಗರಹಾವು ಸಿನಿಮಾದ ಪಾತ್ರಗಳು ಲೆಜೆಂಡ್ ಪಾತ್ರಗಳು. ಅವುಗಳನ್ನು ನಾವು ಮುಟ್ಟಲಾಗುವುದಿಲ್ಲ. ಒಬ್ಬ ಸಾಮಾನ್ಯ ಹುಡುಗನಿಗೆ ಶ್ರೀಮಂತ ಹುಡುಗಿ ಸಿಕ್ಕಾಗ ಏನಾಗುತ್ತದೆ ಅನ್ನೋದೆ ಕಥೆ. ಮೇ 15ರಂದು ಶೂಟಿಂಗ್ ಶುರುವಾಗಲಿದೆ ಎಂದರು.ನಟ ಅಭಿಲಾಷ್, ತುಂಬಾ ಎಮೋಷನಲ್ ಮೂಮೆಂಟ್. ಇವತ್ತು ಕಷ್ಟಪಟ್ಟು ಇಲ್ಲಿ ಕೂತಿದ್ದೇನೆ. ಇದಕ್ಕೆ ಮೂಲ ಕಾರಣ ನಿರ್ಮಾಪಕರು. ನನ್ನ ಒದ್ದಾಟಗಳನ್ನು ಬಹಳ ಹತ್ತಿರದಿದ್ದ ನೋಡಿದ್ದಾರೆ. ಇವರೇ ನನ್ನ ಅನ್ನದಾತರು. ಧನಂಜಯ್ ಅಣ್ಣ ಹೇಳಿಕೊಟ್ಟ ಮಾರ್ಗದರ್ಶನಲ್ಲಿ ನಾನು ನಡೆಯುತ್ತಿದ್ದೇವೆ. ಈಗ ಅವರು ನನ್ನ ಚಿತ್ರಕ್ಕೆ ಹಾರೈಸಿರುವುದು ಖುಷಿಕೊಟ್ಟಿದೆ ಎಂದರು.
ಇದನ್ನೂ ಓದಿ: Shiva Shetty: ಕಟೀಲು ದೇವಾಸ್ಥಾನಕ್ಕೆ ಶಿಲ್ಪಾ ಶೆಟ್ಟಿ ಭೇಟಿ, ಹರಕೆ ಸಲ್ಲಿಸಿದ ತೀರಿಸಿದ ಕರುನಾಡ ಕುವರಿ
ರಂಗಭೂಮಿ ಹಿನ್ನೆಲೆ ಹೊಂದಿರುವ ನಟ ಅಭಿಲಾಶ್ ‘ಮಾರ್ಗರೇಟ್ ಲವರ್ ಆಫ್ ರಾಮಾಚಾರಿ’ ಸಿನಿಮಾ ಮೂಲಕ ಹೀರೋ ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ. ‘ಕೆಜಿಎಫ್’, ‘ಲವ್ ಮಾಕ್ಟೇಲ್’, ‘ಬಡವ ರಾಸ್ಕಲ್’, ‘ಗುರುದೇವ್ ಹೊಯ್ಸಳ’ ಮುಂತಾದ ಸಿನಿಮಾಗಳಲ್ಲಿ ಅಭಿಲಾಶ್ ಗುರುತಿಸಿಕೊಂಡಿದ್ದಾರೆ. ನಾಗರಹಾವು ಸಿನಿಮಾದಲ್ಲಿ ಪಾತ್ರಗಳನ್ನು ಹೋಲುವ ರೀತಿಯ ಹೆಸರುಗಳನ್ನೇ ‘ಮಾರ್ಗರೇಟ್ ಲವರ್ ಆಫ್ ರಾಮಾಚಾರಿ’ ಸಿನಿಮಾದಲ್ಲಿಯೂ ಇಡಲಾಗಿದೆ.
ಅಭಿಲಾಶ್ ರಾಮಾಚಾರಿ ಅಲಿಯಾಸ್ ರಾಮು ಎಂಬ ಪಾತ್ರ ಮಾಡಲಿದ್ದಾರೆ. ನಟಿ ಸೋನಲ್ ಮೊಂಥೆರೋ ಮೀರಾ ರಾಘವ್ ರಾಮ್ ಅಲಿಯಾಸ್ ಮ್ಯಾಗಿ ಎಂಬ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಯಶ್ ಶೆಟ್ಟಿ ಜಯಂತ್ ಅಲಿಯಾಸ್ ಜಲೀಲಾಗಿ ಕಾಣಿಸಿಕೊಳ್ಳಲಿದ್ದಾರೆ. ಅನುಭವಿ ನಟರಾದ ಅವಿನಾಶ್ ಮತ್ತು ರವಿಶಂಕರ್ ಮುಂತಾದವರು ಕೂಡ ನಟಿಸುತ್ತಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.