Weather Latest News : ಬಿಸಿಲಿನಿಂದ ತತ್ತರಿಸಿರುವ ಉತ್ತರದ ರಾಜ್ಯಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಮುಂದಿನ 4-5 ದಿನಗಳ ಕಾಲ ಬಿಸಿಗಾಳಿ ಏಳುವುದಿಲ್ಲ ಎನ್ನಲಾಗಿದೆ. ಇದಲ್ಲದೆ, ಗರಿಷ್ಠ ತಾಪಮಾನದಲ್ಲಿಯೂ ಕುಸಿತ ಕಾಣಲಿದೆ. ಇಂದು ದೆಹಲಿ ಎನ್‌ಸಿಆರ್‌ನಲ್ಲಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಕೆಲವು ಪ್ರದೇಶಗಳಲ್ಲಿ ಗುಡುಗು ಸಹಿತ ಮೋಡ ಕವಿದ ವಾತಾವರಣ ಇರಲಿದೆ.
ಕಡಿಮೆಯಾಗಲಿರುವ ತಾಪಮಾನ :
ಹವಾಮಾನ ಇಲಾಖೆ ಪ್ರಕಾರ, ಇಂದು ದೆಹಲಿಯಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ಆಗುವ ಸಾಧ್ಯತೆಯಿದೆ. ಇದಲ್ಲದೆ, ಯುಪಿಯ ಲಕ್ನೋದಲ್ಲಿ ಗರಿಷ್ಠ ತಾಪಮಾನವು 37 ಡಿಗ್ರಿ ಸೆಲ್ಸಿಯಸ್‌ಗೆ ಏರಬಹುದು. ಘಾಜಿಯಾಬಾದ್‌ನಲ್ಲಿ ಧೂಳಿನ ಬಿರುಗಾಳಿ ಬೀಸುವ ಸಾಧ್ಯತೆಯಿದೆ.
ಇದನ್ನೂ ಓದಿ : Atiq Ahmad Murder Case: ಅತೀಕ್ ಅಹ್ಮದ್ ಮತ್ತು ಅಶ್ರಫ್ ಹತ್ಯೆಯ ಕಾರಣ ಬಹಿರಂಗ!
ಈ ರಾಜ್ಯಗಳಲ್ಲಿ ಮಳೆಯಾಗುವ ಸಾಧ್ಯತೆ :
ವರದಿಯ ಪ್ರಕಾರ ಮುಂದಿನ 24 ಗಂಟೆಗಳಲ್ಲಿ ದಕ್ಷಿಣ ಭಾರತದಲ್ಲೂ ಮಳೆಯಾಗಲಿದೆ. ಕೇರಳ, ತಮಿಳುನಾಡು ಮತ್ತು ಆಂಧ್ರಪ್ರದೇಶದಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ಇದಲ್ಲದೆ, ಒಡಿಶಾ, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನ ಕೆಲವು ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ತೆಲಂಗಾಣದ ಕೆಲವು ಪ್ರದೇಶಗಳಲ್ಲಿಯೂ ಮಳೆಯ ಮುನ್ಸೂಚನೆ ನೀಡಲಾಗಿದೆ.
ಬಿಸಿಲಿನಿಂದ ಸಿಗಲಿದೆ ಪರಿಹಾರ :
ಇದಲ್ಲದೆ, ಬಿಹಾರ, ಜಾರ್ಖಂಡ್, ಮಧ್ಯಪ್ರದೇಶ, ಉತ್ತರ ಪ್ರದೇಶ, ಹರಿಯಾಣ ಮತ್ತು ಛತ್ತೀಸ್‌ಗಢದ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಈಶಾನ್ಯ ರಾಜಸ್ಥಾನದಲ್ಲಿ ತುಂತುರು ಮಳೆಯಾಗಬಹುದು. ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶದಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ. ಮಳೆಯ ಕಾರಣದಿಂದ ಸುಡು ಬಿಸಿಲಿನಿಂದ ಸ್ವಲ್ಪ ಮಟ್ಟಿನ ಪರಿಹಾರ ಸಿಗಬಹುದು.
ಇದನ್ನೂ ಓದಿ : ಎನ್‌ಕೌಂಟರ್‌ನಲ್ಲಿ ದರೋಡೆಕೋರ ಅತೀಕ್ ಅಹ್ಮದ್, ಸಹೋದರ ಅಶ್ರಫ್ ಹತ್ಯೆ
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.