Karnataka Election 2023: ಎಪ್ರಿಲ್ 29ಕ್ಕೆ ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ರೋಡ್ ಶೋ!

Karnataka Assembly Election 2023: ಎಪ್ರಿಲ್ 29ರಂದು ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನ ಮಾಗಡಿ ರಸ್ತೆ ನೈಸ್ ಜಂಕ್ಷನ್‍ನಿಂದ ಸುಂಕದಕಟ್ಟೆವರೆಗೂ ರೋಡ್ ಶೋ ನಡೆಸಲಿದ್ದಾರೆ.

Written by - Puttaraj K Alur | Last Updated : Apr 24, 2023, 03:20 PM IST
  • ಎಪ್ರಿಲ್ 29ರಂದು ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ
  • ಮಾಗಡಿ ರಸ್ತೆ ನೈಸ್ ಜಂಕ್ಷನ್‍ನಿಂದ ಸುಂಕದಕಟ್ಟೆವರೆಗೂ ಮೋದಿ ರೋಡ್ ಶೋ ನಡೆಸಲಿದ್ದಾರೆ
  • ಏಪ್ರಿಲ್ 30ರಂದು ಕೋಲಾರ, ಚನ್ನಪಟ್ಟಣ ಹಾಗೂ ಮೈಸೂರಿನಲ್ಲಿ ಪ್ರಧಾನಿ ಮೋದಿ ಸಮಾವೇಶ
Karnataka Election 2023: ಎಪ್ರಿಲ್ 29ಕ್ಕೆ ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ರೋಡ್ ಶೋ! title=
ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ರೋಡ್ ಶೋ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಮತಬೇಟೆ ನಡೆಸಲು ಬಿಜೆಪಿ ಅಬ್ಬರ ಪ್ರಚಾರ ಶುರು ಮಾಡಿದೆ. ಈಗಾಗಲೇ ರಾಜ್ಯಕ್ಕೆ ಆಗಮಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಭರ್ಜರಿ ರೋಡ್ ಶೋ ನಡೆಸಿದ್ದಾರೆ.

ನಾಳೆ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಕ್ಕರೆನಾಡು ಮಂಡ್ಯಕ್ಕೆ ಆಗಮಿಸಲಿದ್ದು ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಲಿದ್ದಾರೆ. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನಲ್ಲಿರುವ ಆದಿಚುಂಚನಗಿರಿ ಮಠಕ್ಕೆ ಯೋಗಿ ಆದಿತ್ಯನಾಥ್ ಭೇಟಿ ನೀಡಲಿದ್ದಾರೆ.

ಇದನ್ನೂ ಓದಿ: ವರುಣದಲ್ಲಿ ಸೋಮಣ್ಣ ಪ್ರಚಾರಕ್ಕೆ ಅಡ್ಡಿಪಡಿಸಿದ್ದು ಸರಿಯಲ್ಲ: ಸಿದ್ದರಾಮಯ್ಯ

ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ರೋಡ್ ಶೋ

ಎಪ್ರಿಲ್ 29ರಂದು ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ನಡೆಸಲಿದ್ದಾರೆ. ಬೆಂಗಳೂರಿನ ಮಾಗಡಿ ರಸ್ತೆ ನೈಸ್ ಜಂಕ್ಷನ್‍ನಿಂದ ಸುಂಕದಕಟ್ಟೆವರೆಗೂ ಮೋದಿ ರೋಡ್ ಶೋ ನಡೆಸಲಿದ್ದಾರೆ. ಅಂದು ರಾತ್ರಿ ರಾಜಭವನದಲ್ಲಿ ಅವರು ವಾಸ್ತವ್ಯ ಹೂಡಲಿದ್ದಾರೆ.

ಮರುದಿನ ಅಂದರೆ ಏಪ್ರಿಲ್ 30ಕ್ಕೆ 3 ಕಡೆ ಸಮಾವೇಶದಲ್ಲಿ ಪ್ರಧಾನಿ ಮೋದಿ ಭಾಗಿಯಾಗಲಿದ್ದಾರೆ. ಕೋಲಾರ, ಚನ್ನಪಟ್ಟಣ ಹಾಗೂ ಮೈಸೂರಿನಲ್ಲಿ ನಡೆಯಲಿರುವ ಸಮಾವೇಶದಲ್ಲಿ ಮೋದಿ ಭಾಗಿಯಾಗಲಿದ್ದು, ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ.

ಇದನ್ನೂ ಓದಿ: ರಾಹುಲ್ ಗಾಂಧಿ ತೋರಿಕೆಗೆ ಲಿಂಗಾಯತ ಮಠಗಳಿಗೆ ಭೇಟಿ: ಸಿಎಂ ಬಸವರಾಜ ಬೊಮ್ಮಾಯಿ

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News