ರಾಜ್ಯ ಚುನಾವಣಾ ಪ್ರಕ್ರಿಯೆಯಲ್ಲಿ ಅಮಿತ್ ಶಾ ಭಾಗವಹಿಸದಂತೆ ನಿಷೇಧ ಹೇರಬೇಕು-ಡಿ.ಕೆ.ಶಿವಕುಮಾರ್

 ಇದೊಂದು ದೊಡ್ಡ ಪಿತೂರಿಯಾಗಿದ್ದು, ಚುನಾವಣಾ ಆಯೋಗ ರಾಜ್ಯ ಚುನಾವಣಾ ಪ್ರಕ್ರಿಯೆಯಲ್ಲಿ ಅಮಿತ್ ಶಾ ಭಾಗವಹಿಸದಂತೆ ನಿಷೇಧ ಹೇರಬೇಕು. ಈ ವಿಚಾರವಾಗಿ ಎಐಸಿಸಿ ಮೂಲಕ ಕೇಂದ್ರ ಚುನಾವಣಾ ಆಯೋಗಕ್ಕೆ ಮಾಹಿತಿ ನೀಡಿದ್ದು,ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗ್ರಹಿಸಿದರು.

Written by - Zee Kannada News Desk | Last Updated : Apr 27, 2023, 04:02 PM IST
  • ಇದೊಂದು ದೊಡ್ಡ ಪಿತೂರಿಯಾಗಿದ್ದು,
  • ಚುನಾವಣಾ ಆಯೋಗ ರಾಜ್ಯ ಚುನಾವಣಾ ಪ್ರಕ್ರಿಯೆಯಲ್ಲಿ ಅಮಿತ್ ಶಾ ಭಾಗವಹಿಸದಂತೆ ನಿಷೇಧ ಹೇರಬೇಕು
  • ಈ ವಿಚಾರವಾಗಿ ಎಐಸಿಸಿ ಮೂಲಕ ಕೇಂದ್ರ ಚುನಾವಣಾ ಆಯೋಗಕ್ಕೆ ಮಾಹಿತಿ ನೀಡಿದ್ದು, ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕು
ರಾಜ್ಯ ಚುನಾವಣಾ ಪ್ರಕ್ರಿಯೆಯಲ್ಲಿ ಅಮಿತ್ ಶಾ ಭಾಗವಹಿಸದಂತೆ ನಿಷೇಧ ಹೇರಬೇಕು-ಡಿ.ಕೆ.ಶಿವಕುಮಾರ್ title=

ಬೆಂಗಳೂರು: ಇದೊಂದು ದೊಡ್ಡ ಪಿತೂರಿಯಾಗಿದ್ದು, ಚುನಾವಣಾ ಆಯೋಗ ರಾಜ್ಯ ಚುನಾವಣಾ ಪ್ರಕ್ರಿಯೆಯಲ್ಲಿ ಅಮಿತ್ ಶಾ ಭಾಗವಹಿಸದಂತೆ ನಿಷೇಧ ಹೇರಬೇಕು. ಈ ವಿಚಾರವಾಗಿ ಎಐಸಿಸಿ ಮೂಲಕ ಕೇಂದ್ರ ಚುನಾವಣಾ ಆಯೋಗಕ್ಕೆ ಮಾಹಿತಿ ನೀಡಿದ್ದು,ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗ್ರಹಿಸಿದರು.

ಇದು ಅತ್ಯಂತ ಗಂಭೀರವಾದ ಪ್ರಕರಣ.ಕರ್ನಾಟಕ ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟ.ಇದು ಕರ್ನಾಟಕದ ಬದ್ಧತೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕೋಮು ಸಂಘರ್ಷ, ಗಲಭೆಗಳಾಗುತ್ತವೆ ಎಂದು ಕೇಂದ್ರ ಸಚಿವ ಅಮಿತ್ ಶಾ ಆಧಾರ ರಹಿತ ಆರೋಪ ಮಾಡಿ, ಕಾಂಗ್ರೆಸ್ ಗೆ ಯಾರೂ ಮತ ಹಾಕಬಾರದು ಎಂದು ಹೆದರಿಸುವ ಪ್ರಯತ್ನ ಮಾಡಲಾಗಿದೆ ಎಂದು ಹೇಳಿದರು.

ಅಮಿತ್ ಶಾ ಅವರು ದೇಶದ ಅತ್ಯುನ್ನತ ಸ್ಥಾನದಲ್ಲಿದ್ದು, ಒಂದು ರಾಜ್ಯದ ಜನರಿಗೆ ಈ ರೀತಿ ಬೆದರಿಕೆ ಹಾಕುವುದು ಎಷ್ಟು ಸರಿ? ಇದು ಯಾವ ರೀತಿಯ ಪ್ರಜಾಪ್ರಭುತ್ವ? ಹೀಗಾಗಿ ಅವರ ವಿರುದ್ಧ ಐಪಿಸಿ ಸೆಕ್ಷನ್ 153, 153ಎ, 171ಜಿ, 505, 120ಬಿ, 123 ಅಡಿಯಲ್ಲಿ ದೂರು ದಾಖಲಿಸಿದ್ದೇವೆ ಎಂದು ಹೇಳಿದರು.

ಇದನ್ನೂ ಓದಿ: ಮಾಜಿ ಎಎಸ್ಐ ಅಧಿಕಾರಿಗೆ 5 ವರ್ಷ ಜೈಲು ಶಿಕ್ಷೆ, 3.5 ಕೋಟಿ ರೂ.ದಂಡ ವಿಧಿಸಿದ ಬೆಂಗಳೂರು ಕೋರ್ಟ್ 

ಇದೊಂದು ದೊಡ್ಡ ಪಿತೂರಿಯಾಗಿದ್ದು, ಚುನಾವಣಾ ಆಯೋಗ ರಾಜ್ಯ ಚುನಾವಣಾ ಪ್ರಕ್ರಿಯೆಯಲ್ಲಿ ಅಮಿತ್ ಶಾ ಭಾಗವಹಿಸದಂತೆ ನಿಷೇಧ ಹೇರಬೇಕು.ಈ ವಿಚಾರವಾಗಿ ಎಐಸಿಸಿ ಮೂಲಕ ಕೇಂದ್ರ ಚುನಾವಣಾ ಆಯೋಗಕ್ಕೆ ಮಾಹಿತಿ ನೀಡಿದ್ದು,ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕು.ಜನಸಾಮಾನ್ಯರು ಸಾಮಾಜಿಕ ಜಾಲತಾಣಗಳಲ್ಲಿ ಒಂದು ಸಣ್ಣ ಪೋಸ್ಟ್ ಹಾಕಿದ್ದರೆ ಬಂಧಿಸಲಾಗುತ್ತಿತ್ತು.ನಾವು ಪೇಸಿಎಂ ಪೋಸ್ಟರ್ ಅಂಟಿಸಲು ಮುಂದಾದರೆ ನಮ್ಮ ಮೇಲೆ ಪ್ರಕರಣ ದಾಖಲಿಸಿದ್ದರು. ಆದರೆ ದೇಶದ ಗೃಹ ಸಚಿವರು ರಾಜ್ಯದ ಕಾಂಗ್ರೆಸ್ ಮತದಾರರಿಗೆ ಬೆದರಿಕೆ ಹಾಕಿದರೆ ಯಾಕೆ ಪ್ರಕರಣ ದಾಖಲಿಸಬಾರದು? ಎಂದು ಪ್ರಶ್ನಿಸಿದರು.

ಇದನ್ನೂ ಓದಿ: "ಸವದಿ ಸೋಲಿಸುವ ಜವಾಬ್ದಾರಿ ನೀವು ತಗೋಳಿ" : ಬಿಎಸ್‌ವೈ

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇಂತಹ ಭಾಷಣಗಳಿಗೆ ಅವಕಾಶವಿಲ್ಲ.ಇದು ದೊಡ್ಡ ಪ್ರಕರಣವಾಗಿದ್ದು,ಇದಕ್ಕೆ ಸಂಬಂಧಿಸಿದ ಸಾಕ್ಷಿಗಳು ಮಾಧ್ಯಮಗಳಲ್ಲಿದ್ದು, ಈ ನೆಲದ ಕಾನೂನಿನಂತೆ ಈ ಪ್ರಕರಣದಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.  

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

 

Trending News