ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್ ರಾಜಕೀಯಕ್ಕೆ ರೀ ಎಂಟ್ರಿಯಾಗಿದ್ದಾರೆ. ಕಾಂಗ್ರೆಸ್ ಪಕ್ಷದ ಮೂಲಕ ರಾಜಕೀಯಕ್ಕೆ ಗೀತಾ ಅವರು ಮತ್ತೆ ರೀ ಎಂಟ್ರಿಯಾಗಿದ್ದಾರೆ. ಶುಕ್ರವಾರ ಅಧಿಕೃತವಾಗಿ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಶುಕ್ರವಾರ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಗೀತಾ ಶಿವರಾಜಕುಮಾರ್ ತಮ್ಮ ಬೆಂಬಲಿಗರ ಜೊತೆಗೆ ಕಾಂಗ್ರೆಸ್ ಬಾವುಟ ಹಿಡಿದು ಸೇರ್ಪಡೆಯಾಗಿದ್ದಾರೆ. ಸಹೋದರ ಮಧು ಬಂಗಾರಪ್ಪ ಒತ್ತಾಸಯಂತೆ ಗೀತಾ ಶಿವರಾಜಕುಮಾರ್ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಈಗಾಗಲೇ ಜೆಡಿಎಸ್ ತೊರೆದಿರುವ ಮಧು ಬಂಗಾರಪ್ಪ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ. ಇದೀಗ ಸಹೋದರಿಯನ್ನು ಮತ್ತೆ ರಾಜಕೀಯಕ್ಕೆ ಮಧು ಬಂಗಾರಪ್ಪ ಕರೆತಂದಿದ್ದಾರೆ.
ಇದನ್ನೂ ಓದಿ: ರಾಜ್ಯ ವಿಧಾನಸಭೆಗೆ ನಾಳೆಯಿಂದಲೇ ಮತದಾನ ಶುರು ! ಬ್ಯಾಲೇಟ್ ಪೇಪರ್ ವೋಟಿಂಗ್ ಗೆ ಅವಕಾಶ
2014ರಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಲೋಕಸಭಾ ಚುನಾವಣೆಯಲ್ಲಿ ಗೀತಾ ಶಿವರಾಜಕುಮಾರ್ ಸ್ಫರ್ಧೆ ಮಾಡಿದ್ದರು. ಜೆಡಿಎಸ್ ಪಕ್ಷದಿಂದ ಸ್ಪರ್ಧಿಸಿದ್ದ ಅವರು ಚುನಾವಣೆಯಲ್ಲಿ ಸೋತ ಬಳಿಕ ರಾಜಕೀಯದಿಂದ ದೂರ ಉಳಿದಿದ್ದರು. ಇದೀಗ ಮತ್ತೆ ಸಹೋದರ ಮಧು ಪರವಾಗಿ ಪ್ರಚಾರ ಆರಂಭಿಸಿದ್ದಾರೆ.
ಸೊರಬ ಕ್ಷೇತ್ರದಲ್ಲಿ ಗೀತಾ ಶಿವರಾಜಕುಮಾರ್ ಪ್ರಚಾರ ನಡೆಸಿದ್ದಾರೆ. ಇದರ ನಡುವೆ ಅಧಿಕೃತವಾಗಿ ರಾಜಕೀಯಕ್ಕೆ ರೀ ಎಂಟ್ರಿ ಕೊಟ್ಟಿದ್ದಾರೆ. ಮುಂದಿನ ಲೋಕಸಭಾ ಚುನಾವಣಾ ದೃಷ್ಟಿಯಿಂದ ಗೀತಾ ಶಿವರಾಜಕುಮಾರ್ ರೀ ಎಂಟ್ರಿ ಕೊಟ್ಟಿದ್ದಾರೆ. 2023ರ ಕಾಂಗ್ರೆಸ್ ಅಭ್ಯರ್ಥಿಯಾಗಲು ಸಿದ್ಧತೆ ನಡೆಸಿದ್ದಾರೆ. ಗೀತಾ ಶಿವರಾಜಕುಮಾರ್ ಮತ್ತೆ ಶಿವಮೊಗ್ಗದಿಂದ ಅಖಾಡಕ್ಕೆ ಇಳಿಯುವ ಸಾಧ್ಯತೆ ಇದ್ದು, ಈಗಿನಿಂದಲೇ ವೇದಿಕೆ ಸಿದ್ಧ ಮಾಡಿಕೊಳ್ಳುತ್ತಿದ್ದಾರೆ.
ಇದನ್ನೂ ಓದಿ: ಅಖಾಡಕ್ಕಿಳಿದ ಫ್ಯಾಮಿಲಿ: ಅಭ್ಯರ್ಥಿಗಳ ಪರ ಕುಟುಂಬಸ್ಥರ ಮತಬೇಟೆ!
ಸೊರಬ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಸಿಎಂ ದಿವಂಗತ ಬಂಗಾರಪ್ಪ ಅವರ ಪುತ್ರರ ನಡುವೆ ಕದನ ಏರ್ಪಟ್ಟಿದೆ. ಕಾಂಗ್ರೆಸ್‍ನಿಂದ ಮಧು ಬಂಗಾರಪ್ಪ ಸರ್ಧೆ ಮಾಡಿದ್ರೆ, ಅತ್ತ ಬಿಜೆಪಿಯಿಂದ ಕುಮಾರ್ ಬಂಗಾರಪ್ಪ ಕಣಕ್ಕೆ ಇಳಿದಿದ್ದಾರೆ. ಹೀಗಾಗಿ ಸೋಹೋದರರ ಸವಾಲ್‍ನಲ್ಲಿ ಇದೀಗ ಸಹೋದರಿಯ ಎಂಟ್ರಿಯಾಗಿದೆ. ಇಬ್ಬರ ಪೈಕಿ ಗೀತಾ ಶಿವರಾಜಕುಮಾರ್ ಕಾಂಗ್ರೆಸ್‍ನ ಮಧು ಬಂಗಾರಪ್ಪ ಪರ ಅದ್ದೂರಿ ಪ್ರಚಾರ ನಡೆಸುತ್ತಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.