ದಲಿತರು, ಹಿಂದುಳಿದವರು ಭಿಕ್ಷುಕರೇ?: ಡಿಕೆಶಿ ಹೇಳಿಕೆಗೆ ಸಿಎಂ ಬೊಮ್ಮಾಯಿ ತಿರುಗೇಟು

Karnataka Assembly Election 2023: ಶುಕ್ರವಾರ ಸೇಡಂ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜಕುಮಾರ್  ಪಾಟೀಲ್ ಸೇಡಂ ಪರವಾಗಿ ರೋಡ್ ಶೋ ನಡೆಸಿ ಮಾತನಾಡಿದ ಅವರು, ‘ಲಿಂಗಾಯತರು, ಒಕ್ಕಲಿಗರು ಭಿಕ್ಷುಕರಲ್ಲ ಎಂಬ ಡಿಕೆಶಿ ಹೇಳಿಕೆಗೆ ತಿರುಗೇಟು ನೀಡಿದರು.

Written by - Prashobh Devanahalli | Edited by - Puttaraj K Alur | Last Updated : Apr 28, 2023, 04:07 PM IST
  • ಲಿಂಗಾಯತರು, ಒಕ್ಕಲಿಗರು ಭಿಕ್ಷುಕರಲ್ಲವೆಂಬ ಡಿಕೆಶಿ ಹೇಳಿಕೆಗೆ ಸಿಎಂ ಬೊಮ್ಮಾಯಿ ತಿರುಗೇಟು
  • ಸೇಡಂನಲ್ಲಿ ಬಿಜೆಪಿ ಅಭ್ಯರ್ಥಿ ತೇಲ್ಕೂರು ಗೆದ್ದರೆ ರಾಜ್ಯದಲ್ಲಿ ಬಿಜೆಪಿ ಜನಪರ ಸರ್ಕಾರ ಅಧಿಕಾರಕ್ಕೆ ಬರುತ್ತದೆ
  • ಮುಂದಿನ ಬಾರಿ ಅಧಿಕಾರಕ್ಕೆ ಬಂದು ರಾಜ್ಯವನ್ನು ನಂ.1 ರಾಜ್ಯ ಮಾಡುತ್ತೇವೆಂದ ಸಿಎಂ ಬೊಮ್ಮಾಯಿ
ದಲಿತರು, ಹಿಂದುಳಿದವರು ಭಿಕ್ಷುಕರೇ?: ಡಿಕೆಶಿ ಹೇಳಿಕೆಗೆ ಸಿಎಂ ಬೊಮ್ಮಾಯಿ ತಿರುಗೇಟು title=
ಡಿಕೆಶಿ ಹೇಳಿಕೆಗೆ ಸಿಎಂ ಬೊಮ್ಮಾಯಿ ತಿರುಗೇಟು

ಕಲಬುರಗಿ: ಹಿಂದುಳಿದವರು ಮತ್ತು ದಲಿತರು ಭಿಕ್ಷುಕರೇ? ಎಂದು ಪ್ರಶ್ನಿಸಿರುವ   ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‍ಗೆ ತಿರುಗೇಟು ನೀಡಿದ್ದಾರೆ. ಶುಕ್ರವಾರ ಸೇಡಂ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜಕುಮಾರ್  ಪಾಟೀಲ್ ಸೇಡಂ ಪರವಾಗಿ ರೋಡ್ ಶೋ ನಡೆಸಿ ಮಾತನಾಡಿದರು.

ಲಿಂಗಾಯತರು, ಒಕ್ಕಲಿಗರು ಭಿಕ್ಷುಕರಲ್ಲ ಎಂಬ ಡಿಕೆಶಿ ಹೇಳಿಕೆಗೆ ಪ್ರತಿಕ್ರಿಯಿಸಿದರು. ಅನೇಕ ವರ್ಷದಿಂದ ದಲಿತರನ್ನು ಬಾವಿಯಲ್ಲಿ ಬಿಟ್ಟು ಮತ ಹಾಕಿಸಿಕೊಂಡು ಮತ್ತೆ ಬಾವಿಗೆ ಬಿಡುವ ಕೆಲಸ ಮಾಡಲಾಗಿದೆ. ಆದರೆ ಬೊಮ್ಮಾಯಿ ಸಿಎಂ ಆಗಿ ಬರಬಹುದು  ಎಂದು ಅವರು ಅಂದುಕೊಂಡಿರಲಿಲ್ಲ‌.  ನಾನು ಸಿಎಂ ಆಗಿ ಮಿಸಲಾತಿ ಜಾರಿಗೆ ತಂದ ಮೇಲೆ ಈಗ ಅವರಿಗೆ ಭಯ ಶುರುವಾಗಿದೆ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: Geetha Shivarajkumar Joins Congress: ಗೀತಾ ಶಿವರಾಜ್ ಕುಮಾರ್ ಕಾಂಗ್ರೆಸ್​ಗೆ ಸೇರ್ಪಡೆ..!

ಕಾಂಗ್ರೆಸ್ ಅಧ್ಯಕ್ಷ ಮರ್ಲಿಕಾರ್ಜುನ್ ಖರ್ಗೆ ಪ್ರಧಾನಿ ಮೋದಿಯವರ ಬಗ್ಗೆ ಮಾತನಾಡಿದ್ದಾರೆ. ಮೋದಿವರು ಎಲ್ಲಾ ಟೀಕೆಗಳನ್ನು ನುಂಗಿ ನಂಜುಂಡ ಆಗಿದ್ದಾರೆ ಎಂದು ಹೇಳಿದರು. ಸೇಡಂನಲ್ಲಿ ಬಿಜೆಪಿ ಅಭ್ಯರ್ಥಿ ತೇಲ್ಕೂರು ಗೆದ್ದರೆ ರಾಜ್ಯದಲ್ಲಿ ಬಿಜೆಪಿ ಜನಪರ ಸರ್ಕಾರ ಅಧಿಕಾರಕ್ಕೆ ಬರುತ್ತದೆ. ಅವರು ಎಲ್ಲಿ ಹೋಗಿದ್ದಾರೋ ಆ ರಾಜ್ಯಗಳಲ್ಲಿ ‌ಬಿಜೆಪಿ ಗೆದ್ದಿದೆ. ಗುಜರಾತ್, ಉತ್ತರ ಪ್ರದೇಶ, ಉತ್ತರಾಖಾಂಡ್ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಕರ್ನಾಟಕದಲ್ಲಿಯೂ ಬಿಜೆಪಿ ಅಧಿಕಾರಕ್ಕೆ ಬರುತ್ತದೆ. ಅದಕ್ಕೆ ಕಾಂಗ್ರೆಸ್‍ನವರಿಗೆ ಭಯ ಶುರುವಾಗಿದೆ. ಹೀಗಾಗಿ ಮೋದಿಯವರ ವಿರುದ್ಧ ಹತಾಶರಾಗಿ ಮಾತನಾಡುತ್ತಿದ್ದಾರೆ ಎಂದು ಟೀಕಿಸಿದರು.

ನಂ.1 ರಾಜ್ಯ ಮಾಡುತ್ತೇವೆ

ಕಾಂಗ್ರೆಸ್‍ನವರು  ಗ್ಯಾರೆಂಟಿಗಳು ಕೊಡುತ್ತಿದ್ದಾರೆ. ಮಹಿಳೆಯರಿಗೆ ಉಚಿತ ಬಸ್ ವ್ಯವಸ್ಥೆ ಮಾಡುವುದಾಗಿ ಹೇಳಿದ್ದಾರೆ. ನಾವು ಅದನ್ನು ಈಗಾಗಲೇ ಬಜೆಟ್ ನಲ್ಲಿ ಘೋಷಣೆ ಮಾಡಿದ್ದೇವೆ. ರಾಹುಲ್ ಗಾಂಧಿಗೆ ಇವರು ಹೇಳುವುದು ಅರ್ಥವಾಗುವುದಿಲ್ಲ. ಅವನು ಘೋಷಣೆ ಮಾಡುತ್ತಾನೆ. ನಮ್ಮದು ಡಬಲ್ ಎಂಜಿನ್ ಸರ್ಕಾರ, ಕಲ್ಯಾಣ ಕರ್ನಾಟಕದ ಕಲ್ಯಾಣ ಮಾಡುತ್ತೇವೆ. ಮುಂದಿನ ಬಾರಿ ಅಧಿಕಾರಕ್ಕೆ ಬಂದು ರಾಜ್ಯವನ್ನು ನಂ.1 ರಾಜ್ಯ ಮಾಡುತ್ತೇವೆ ಎಂದು ಹೇಳಿದರು.

ಇದನ್ನೂ ಓದಿ: ಯತ್ನಾಳ್ ಹೇಳಿಕೆಗೆ ಪ್ರಧಾನಿ ಮೋದಿ, ಸಿಎಂ ಬೊಮ್ಮಾಯಿ ಕ್ಷಮೆಯಾಚಿಸಬೇಕು: ಡಿ.ಕೆ. ಶಿವಕುಮಾರ್ ಆಗ್ರಹ

ರಾಜಕುಮಾರ್ ಪಾಟೀಲ್ ತೇಲ್ಕೂರು ಅವರು ಹಠ ಹಿಡಿದು ಕೆಲಸ ಮಾಡುತ್ತಾರೆ‌. ಅವರು ಗುಲಬರ್ಗಾ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನ ಪಡೆದು 4 ಲಕ್ಷ ರೈತರಿಗೆ 1,100 ಕೋಟಿ ರೂ. ಸಾಲ ನೀಡಿದ್ದಾರೆ. ನೀವು ಅವರನ್ನು ಗೆಲ್ಲಿಸಿ ಸುಭದ್ರ ಸರ್ಕಾರ ರಚನೆಗೆ ಆಶೀರ್ವದಿಸಿ ಎಂದು ಇದೇ ವೇಳೆ ಸಿಎಂ ಬೊಮ್ಮಾಯಿ ಮನವಿ ಮಾಡಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News