ಮೇ.10 ರಂದು ಮತದಾನ ಮಾಡಲು ಕಾರ್ಮಿಕರಿಗೆ ವೇತನ ಸಹಿತ ರಜೆ

ಭಾರತ ಚುನಾವಣಾ ಆಯೋಗವು ಮೇ.10 ಬುಧವಾರದಂದು ಕರ್ನಾಟಕ ವಿಧಾನ ಸಭೆ ಸಾರ್ವತ್ರಿಕ ಚುನಾವಣೆಯ ಮತದಾನಕ್ಕೆ ನಿಗಧಿಪಡಿಸಿದೆ.

Written by - Zee Kannada News Desk | Last Updated : Apr 28, 2023, 04:10 PM IST
  • ಮೇ.10 ಬುಧವಾರದಂದು ಕರ್ನಾಟಕ ವಿಧಾನ ಸಭೆ ಸಾರ್ವತ್ರಿಕ ಚುನಾವಣೆಯ ಮತದಾನಕ್ಕೆ ನಿಗಧಿಪಡಿಸಿದೆ.
  • ಸಂವಿಧಾನಾತ್ಮಕ ಹಕ್ಕಾದ ಮತವನ್ನು ಚಲಾಯಿಸುವುದಕ್ಕಾಗಿ ಎಲ್ಲಾ ಮಾಲೀಕರು, ನಿಯೋಜಕರು ಅನುವು ಮಾಡಿ ಕೊಡಬೇಕಾಗುತ್ತದೆ.
ಮೇ.10 ರಂದು ಮತದಾನ ಮಾಡಲು ಕಾರ್ಮಿಕರಿಗೆ ವೇತನ ಸಹಿತ ರಜೆ title=
ಸಾಂದರ್ಭಿಕ ಚಿತ್ರ

ಬೆಂಗಳೂರು: ಭಾರತ ಚುನಾವಣಾ ಆಯೋಗವು ಮೇ.10 ಬುಧವಾರದಂದು ಕರ್ನಾಟಕ ವಿಧಾನ ಸಭೆ ಸಾರ್ವತ್ರಿಕ ಚುನಾವಣೆಯ ಮತದಾನಕ್ಕೆ ನಿಗಧಿಪಡಿಸಿದೆ.

ಸದರಿ ದಿನದಂದು ರಾಜ್ಯಾದ್ಯಂತ ಎಲ್ಲಾ ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ 1951ರ ಪ್ರಜಾ ಪ್ರತಿನಿಧಿ ಕಾಯ್ದೆ, ಸೆಕ್ಷನ್ 135 (ಬಿ) ರಡಿ ಹಾಗೂ ಕೈಗಾರಿಕಾ ಸಂಸ್ಥೆಗಳ (ರಾಷ್ಟ್ರೀಯ ಮತ್ತು ಹಬ್ಬದ ರಜೆಗಳು) ಕಾಯ್ದೆ-1963 ಕಲಂ 3 (ಎ)ರನ್ವಯ ಅರ್ಹ ಮತದಾರರಿಗೆ ವೇತನ ಸಹಿತ ರಜೆ ಘೋಷಿಸಿ ಸಂವಿಧಾನಾತ್ಮಕ ಹಕ್ಕಾದ ಮತವನ್ನು ಚಲಾಯಿಸುವುದಕ್ಕಾಗಿ ಎಲ್ಲಾ ಮಾಲೀಕರು, ನಿಯೋಜಕರು ಅನುವು ಮಾಡಿ ಕೊಡಬೇಕಾಗುತ್ತದೆ.

ಇದನ್ನೂ ಓದಿ: ಬಿಜೆಪಿ ಪರ ರೋಡ್ ಶೋನಲ್ಲಿ ಶೆಟ್ಟರ್ ಫೋಟೋ ಪ್ರದರ್ಶನ

ಆದ್ದರಿಂದ ಚುನಾವಣೆ ನಡೆಯುವ ಕ್ಷೇತ್ರಗಳ ವ್ಯಾಪ್ತಿಯ ಎಲ್ಲಾ ಕಾರ್ಖಾನೆಗಳು, ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಮಾಲೀಕರು ಮೇ.10 ರಂದು ಕಾಯ್ದೆಯನ್ವಯ ಅರ್ಹ ಕಾರ್ಮಿಕರು ಮತದಾನ ಮಾಡಲು ಅನುಕೂಲವಾಗುವಂತೆ ವೇತನ ಸಹಿತ ರಜೆ ನೀಡುವಂತೆ ತಿಳಿಸಲಾಗಿದೆ.ತಪ್ಪಿದಲ್ಲಿ ಸಂಬಂಧಪಟ್ಟ ಸಂಸ್ಥೆ, ನಿಯೋಜಕರ ವಿರುದ್ಧ ನಿಯಮಾನುಸಾರ ಕಾನೂನು ಕ್ರಮ ಜರುಗಿಸಲಾಗುವುದೆಂದು ಕಾರ್ಮಿಕ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3Lw

 

Trending News