BCCIನಿಂದ ಮಹಾಪ್ರಮಾದ! WTC ಫೈನಲ್’ನಲ್ಲಿ ಈ ಫ್ಲಾಪ್ ಆಟಗಾರನಿಗೆ ಸ್ಥಾನ: ತಂಡಕ್ಕೆ ಮುಳುವಾಗುತ್ತಾ ಈತನ ಆಯ್ಕೆ?

India vs Australia: ಪ್ರಸಕ್ತ ಐಪಿಎಲ್‌ ನಲ್ಲಿ ಸತತ ಸೋಲು ಕಾಣುತ್ತಿರುವ ಆಲ್‌ ರೌಂಡರ್‌ ಗೆ ತಂಡದಲ್ಲಿ ಸ್ಥಾನ ಲಭಿಸಿದೆ. ಡಬ್ಲ್ಯುಟಿಸಿ ಅಂತಿಮ ತಂಡದಲ್ಲಿ ಸ್ಥಾನ ಪಡೆದಿರುವ ಆಲ್ ರೌಂಡರ್ ಬೇರೆ ಯಾರು ಅಲ್ಲ. ಅವೆರೇ ಶಾರ್ದೂಲ್ ಠಾಕೂರ್. ಈ ಬಾರಿಯ ಐಪಿಎಲ್ ನಲ್ಲಿ ಇದುವರೆಗೆ ಕಳಪೆ ಪ್ರದರ್ಶನ ತೋರಿದ್ದಾರೆ.

Written by - Bhavishya Shetty | Last Updated : Apr 29, 2023, 12:07 PM IST
    • ಎರಡೂ ಕ್ರಿಕೆಟ್ ಮಂಡಳಿಗಳು ತಮ್ಮ ತಮ್ಮ ತಂಡಗಳನ್ನು ಪ್ರಕಟಿಸಿವೆ.
    • ಬಿಸಿಸಿಐ ಭಾರತ ತಂಡದಲ್ಲಿ 15 ಆಟಗಾರರಿಗೆ ಅವಕಾಶ ನೀಡಿದೆ
    • ಇದರ ಜೊತೆಗೆ ಮಹಾ ಪ್ರಮಾದವೊಂದನ್ನು ಎಸಗಿದೆ ಎಂದು ಹೇಳಲಾಗುತ್ತಿದೆ.
BCCIನಿಂದ ಮಹಾಪ್ರಮಾದ! WTC ಫೈನಲ್’ನಲ್ಲಿ ಈ ಫ್ಲಾಪ್ ಆಟಗಾರನಿಗೆ ಸ್ಥಾನ: ತಂಡಕ್ಕೆ ಮುಳುವಾಗುತ್ತಾ ಈತನ ಆಯ್ಕೆ? title=
Shardul Thakur

India vs Australia: ವಿಶ್ವ ಟೆಸ್ಟ್ ಚಾಂಪಿಯನ್‌ ಶಿಪ್‌ನ ಎರಡನೇ ಆವೃತ್ತಿಯ ಅಂತಿಮ ಪಂದ್ಯವು ಜೂನ್ 7 ರಿಂದ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯಲಿದೆ. ಈ ಪಂದ್ಯ ಲಂಡನ್‌ ನ ಓವಲ್‌ ಕ್ರಿಕೆಟ್‌ ಮೈದಾನದಲ್ಲಿ ನಡೆಯಲಿದೆ. ಜೂನ್ 7 ರಿಂದ 11 ರವರೆಗೆ ಎರಡೂ ತಂಡಗಳು ಮುಖಾಮುಖಿಯಾಗಲಿವೆ. ಈ ಮಧ್ಯೆ, ಎರಡೂ ಕ್ರಿಕೆಟ್ ಮಂಡಳಿಗಳು ತಮ್ಮ ತಮ್ಮ ತಂಡಗಳನ್ನು ಪ್ರಕಟಿಸಿವೆ. ಬಿಸಿಸಿಐ ಭಾರತ ತಂಡದಲ್ಲಿ 15 ಆಟಗಾರರಿಗೆ ಅವಕಾಶ ನೀಡಿದ್ದು, ಇದರ ಜೊತೆಗೆ ಮಹಾ ಪ್ರಮಾದವೊಂದನ್ನು ಎಸಗಿದೆ ಎಂದು ಹೇಳಲಾಗುತ್ತಿದೆ.

ಬಿಸಿಸಿಐ ತಪ್ಪೇನು?

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ವಿಶ್ವ ಟೆಸ್ಟ್ ಚಾಂಪಿಯನ್‌ ಶಿಪ್‌ನ ಫೈನಲ್‌ ಗೆ 15 ಸದಸ್ಯರ ಭಾರತ ತಂಡವನ್ನು ಪ್ರಕಟಿಸಿದೆ. ಪ್ರಸಕ್ತ ಐಪಿಎಲ್‌ ನಲ್ಲಿ ಸತತ ಸೋಲು ಕಾಣುತ್ತಿರುವ ಆಲ್‌ ರೌಂಡರ್‌ ಗೆ ತಂಡದಲ್ಲಿ ಸ್ಥಾನ ಲಭಿಸಿದೆ. ಡಬ್ಲ್ಯುಟಿಸಿ ಅಂತಿಮ ತಂಡದಲ್ಲಿ ಸ್ಥಾನ ಪಡೆದಿರುವ ಆಲ್ ರೌಂಡರ್ ಬೇರೆ ಯಾರು ಅಲ್ಲ. ಅವೆರೇ ಶಾರ್ದೂಲ್ ಠಾಕೂರ್. ಈ ಬಾರಿಯ ಐಪಿಎಲ್ ನಲ್ಲಿ ಇದುವರೆಗೆ ಕಳಪೆ ಪ್ರದರ್ಶನ ತೋರಿದ್ದಾರೆ.

ಪ್ರಸಕ್ತ ಐಪಿಎಲ್ ಋತುವಿನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಪರ ಆಡುತ್ತಿರುವ ಶಾರ್ದೂಲ್ ಠಾಕೂರ್ ಬ್ಯಾಟಿಂಗ್ ಮತ್ತು ಬಾಲಿಂಗ್ ಎರಡರಲ್ಲೂ ನಿರಾಶಾದಾಯಕ ಪ್ರದರ್ಶನ ನೀಡಿದ್ದಾರೆ. ಶಾರ್ದೂಲ್ ಐಪಿಎಲ್ 2023 ರಲ್ಲಿ ಇದುವರೆಗೆ 5 ಪಂದ್ಯಗಳನ್ನು ಆಡಿದ್ದು, ಇದರಲ್ಲಿ ಬೌಲಿಂಗ್ ಮಾಡುವಾಗ ಕೇವಲ 2 ವಿಕೆಟ್‌ಗಳನ್ನು ಪಡೆದಿದ್ದಾರೆ. ಇದಲ್ಲದೇ ಇಷ್ಟೇ ಪಂದ್ಯಗಳಲ್ಲಿ 101 ರನ್‌ ಗಳು ಅವರ ಬ್ಯಾಟ್‌ ನಿಂದ ಹೊರಬಂದಿವೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಮಾತ್ರ 68 ರನ್‌ ಗಳ ಅತ್ಯುತ್ತಮ ಇನ್ನಿಂಗ್ಸ್ ಅನ್ನು ಸಹ ಆಡಿದ್ದರು. ಇದನ್ನು ಹೊರತುಪಡಿಸಿ ಅವರಿಗೆ ಹೆಚ್ಚಿನ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ.

ಎರಡೂ ತಂಡಗಳ WTC ಅಂತಿಮ ತಂಡ

ಟೀಮ್ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಕೆಎಲ್ ರಾಹುಲ್, ಕೆಎಸ್ ಭರತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್ , ಜಯದೇವ್ ಉನದ್ಕತ್.

ಆಸ್ಟ್ರೇಲಿಯಾ ತಂಡ: ಪ್ಯಾಟ್ ಕಮ್ಮಿನ್ಸ್ (ನಾಯಕ), ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಕ್ಯಾಮೆರಾನ್ ಗ್ರೀನ್, ಮಾರ್ಕಸ್ ಹ್ಯಾರಿಸ್, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಸ್‌ಚಾಗ್ನೆ, ನಾಥನ್ ಲಿಯಾನ್, ಮಿಚೆಲ್ ಮಾರ್ಷ್, ಟಾಡ್ ಮರ್ಫಿ , ಮ್ಯಾಥ್ಯೂ ರೆನ್ಶಾ , ಸ್ಟೀವ್ ಸ್ಮಿತ್ (ವಿಕೆಟ್ ಕೀಪರ್), ಮಿಚೆಲ್ ಸ್ಟಾರ್ಕ್, ಡೇವಿಡ್ ವಾರ್ನರ್.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3Lw

Trending News