ಬೆಂಗಳೂರು: ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆ-2023ರ ಅಂಗವಾಗಿ ಚುನಾವಣಾ ಆಯೋಗವು ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆಯನ್ನು ಏರ್ಪಡಿಸಿದೆ.
ಸಾರ್ವತ್ರಿಕ ಚುನಾವಣೆ ಕರ್ನಾಟಕ ವಿಧಾನಸಭೆ 2023ರ ಮತದಾನ ಮೇ 10 ರಂದು ನಿಗದಿಯಾಗಿದ್ದು, ಕರ್ನಾಟಕದಲ್ಲಿ ಚುನಾವಣೆಯನ್ನು 'ಪುಜಾಪ್ರಭುತ್ವದ ಹಬ್ಬ'ದಂತೆ ಆಚರಿಸಲಾಗುತ್ತಿದೆ. ಕಳೆದ ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಹಮ್ಮಿಕೊಳ್ಳಲಾದ ಮಾದರಿಯಲ್ಲಿ ಈ ಬಾರಿಯು ಸಹ ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆ-2023ರ ಅಂಗವಾಗಿ ಮಾಧ್ಯಮಗಳಲ್ಲಿ ಕಾರ್ಯನಿವರ್ಹಿಸುತ್ತಿರುವ ಮತ್ತು ಹವ್ಯಾಸಿ ಪತ್ರಿಕಾ ಛಾಯಾಗ್ರಹಕರಿಗಾಗಿ ಮತದಾನದ ವಿಷಯದ ಬಗ್ಗೆ ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ.
ಇದನ್ನೂ ಓದಿ: ಭಜರಂಗದಳ ನಿಷೇಧ: ಕಾಂಗ್ರೆಸ್‍ಗೆ ತಕ್ಕ ಪಾಠ ಕಲಿಸುತ್ತೇವೆಂದ ಶ್ರೀರಾಮಸೇನೆ
ಲೋಕಸಭಾ ಚುನಾವಣೆ-2019ರಲ್ಲಿ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆಯ ಮೂಲಕ ಚುನಾವಣಾ ಸಂಬಂಧಿತ ಅತ್ಯುತ್ತಮ ಹಾಗೂ ಸಂಗ್ರಹಯೋಗ್ಯ ಛಾಯಾಚಿತ್ರಗಳನ್ನು ಕೇಂದ್ರ ಚುನಾವಣಾ ಆಯೋಗ ಪ್ರಶಂಸಿವುದರ ಜೊತೆಗೆ, ತನ್ನ ವರದಿ ಹಾಗೂ ಪುಸ್ತಕಗಳ ಮುಖಪುಟಗಳಲ್ಲಿ ಬಳಸಿಕೊಂಡಿದೆ.
ಈ ಹಿನ್ನೆಲೆಯಲ್ಲಿ ಪ್ರಸ್ತುತ ನಡೆಯುತ್ತಿರುವ ವಿಧಾನಸಭೆ ಸಾರ್ವತ್ರಿಕ ಚುನಾವಣೆ ನಿಮಿತ್ತ ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆಯನ್ನು ಏರ್ಪಡಿಸಿ, ಅತ್ಯುತ್ತಮ ಛಾಯಾಚಿತ್ರ ತೆಗೆದ ಛಾಯಾಗ್ರಾಹಕರಿಗೆ ಪಮಾಣ ಪತ್ರ ಹಾಗೂ ನಗದು ಬಹುಮಾನವನ್ನು ನೀಡಲಾಗುತ್ತಿದೆ.
*ಬಹುಮಾನಗಳ ವಿವರ:* ಪಥಮ ಬಹುಮಾನ 25,000 ರೂ.,ದ್ವಿತೀಯ ಬಹುಮಾನ 15,000 ರೂ., ತೃತೀಯ ಬಹುಮಾನ 10,000 ರೂ., ಸಮಾಧಾನಕರ ಬಹುಮಾನ 6,000 ರೂ ಹಾಗೂ ವಿಶೇಷ ಬಹುಮಾನ 5,000 ರೂ.ಗಳನ್ನು ನೀಡಲಾಗುತ್ತಿದೆ.
ಇದನ್ನೂ ಓದಿ: Crime News: ಸಹಪಾಠಿ ವಿದ್ಯಾರ್ಥಿನಿ ಜೊತೆ ಮುಸ್ಲಿಂ ವಿದ್ಯಾರ್ಥಿ ಜೊತೆಯಾಗಿ ಜ್ಯೂಸ್ ಕುಡಿದಿದ್ದಕ್ಕೆ ಹಲ್ಲೆ
ಸ್ಪರ್ಧೆಯಲ್ಲಿ ಭಾಗವಹಿಸಲಿಚ್ಛಿಸುವ ಪತ್ರಿಕಾ ಛಾಯಾಗ್ರಾಹಕರು/ಹವ್ಯಾಸಿ ಛಾಯಾಗ್ರಹಕರು ತಾವು ತೆಗೆದ ಗರಿಷ್ಠ 5 ಅತ್ಯುತ್ತಮ ಛಾಯಾಚಿತ್ರಗಳನ್ನು ಸೂಕ್ತ ಶೀರ್ಷಿಕೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನೀಡಿರುವ ಅಕ್ರಿಡಿಟೇಷನ್ ಕಾರ್ಡ್ ಅಥವಾ ತಮ್ಮ ಮಾಧ್ಯಮ ಕಚೇರಿ ನೀಡಿರುವ ಗುರುತಿನ ಚೀಟಿ ಅಥವಾ ಆಧಾರ್ ಕಾರ್ಡ್ ಹಾಗೂ ಮನೆ ವಿಳಾಸ, ಮೋಬೈಲ್ ಸಂಖ್ಯೆ ಸೇರಿದಂತೆ ಮತ್ತಿತರ ವಿವರಗಳನ್ನು ಇ-ಮೇಲ್ ಐಡಿ : ktkceomedia2023@gmail.com ಗೆ ಮೇ 20ರ ಶನಿವಾರ ಸಂಜೆ 5 ಗಂಟೆಯೊಳಗೆ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.