ಬೆಂಗಳೂರು: ಟಾಲಿವುಡ್‌ನ ಹಿರಿಯ ನಟ ಶರತ್ ಬಾಬು ಅವರು ಹೈದರಾಬಾದ್‌ನ ಎಐಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಎಲ್ಲರಿಗೂ ತಿಳಿದಿರುವ ವಿಷಯ. ಆದರೆ ಇದ್ದಕ್ಕಿದ್ದಂತೆ ಅವರ ಸಾವಿನ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಡಲು ಪ್ರಾರಂಭಿಸಿತು. ಖ್ಯಾತ ನಟಿ ಖುಷ್ಬು ಸುಂದರ್ ಕೂಡ ತಮ್ಮ ಟ್ವಿಟ್ಟರ್ ಪುಟದಲ್ಲಿ ಸಂತಾಪವನ್ನು ಸೂಚಿಸಿದ್ದಾರೆ.ಆದರೆ ಈಗ ಶರತ್ ಬಾಬು ಅವರ ಸಹೋದರಿ ಅವರು ಆರೋಗ್ಯವಾಗಿದ್ದಾರೆ ಎಂದು ಅಧಿಕೃತ ಹೇಳಿಕೆಯನ್ನು ನೀಡಿದ್ದಾರೆ ಮತ್ತು ಈಗ ಅವರನ್ನು ಸಾಮಾನ್ಯ ಕೋಣೆಗೆ ಸ್ಥಳಾಂತರಿಸಲಾಗಿದೆ ಎನ್ನಲಾಗಿದೆ.
ಇದನ್ನೂ ಓದಿ: "ಕಷ್ಟ ಬಂದಾಗ ಮೋದಿ ಕರ್ನಾಟಕಕ್ಕೆ ಬರಲ್ಲ, ಚುನಾವಣೆ ಬಂದಾಗ ಬರುತ್ತಾರೆ"
ಇತ್ತೀಚೆಗೆ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆದಿದ್ದರು.ಆದರೆ, ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದ್ದರಿಂದ ಉತ್ತಮ ಚಿಕಿತ್ಸೆಗಾಗಿ ಕುಟುಂಬಸ್ಥರು ಹೈದರಾಬಾದ್‌ನ ಎಐಜಿ ಆಸ್ಪತ್ರೆಗೆ ದಾಖಲಿಸಲಾಗಿದೆ.ತೆಲುಗು ಚಿತ್ರರಂಗದಲ್ಲಿ ವಿಭಿನ್ನ ನಟನೆ ಮೂಲಕ ಹೆಸರು ಗಳಿಸಿರುವ ಶರತ್ ಬಾಬು ತಮಿಳು, ತೆಲುಗು ಹಾಗೂ ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ.1973ರಲ್ಲಿ ‘ರಾಮ ರಾಜ್ಯ’ ಸಿನಿಮಾ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ಶರತ್ ಬಾಬು ಇಲ್ಲಿಯವರೆಗೆ 220ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿ ಪ್ರೇಕ್ಷಕರ ಮನಗೆದ್ದಿದ್ದಾರೆ.
ಇದನ್ನೂ ಓದಿ: ತಮ್ಮ ಕಚೇರಿಯಲ್ಲಿರುವ ಪ್ರಧಾನಿ ಮೋದಿ ,ಶಾ ಫೋಟೋ ತೆಗೆಯಲ್ಲ ಎಂದ ಜಗದೀಶ್ ಶೆಟ್ಟರ್
1981, 1988, 1989 ರಲ್ಲಿ ಮೂರು ಬಾರಿ ಅತ್ಯುತ್ತಮ ಪೋಷಕ ನಟ ನಂದಿ ಪ್ರಶಸ್ತಿ ಪಡೆದ ಅವರು ಕನ್ನೆವಯಸು, ತಿರುಮುಳ್ಳ ಬಂಧಂ, ಸೀತಕೋಕ ಚಿಲುಕ, ಸಂಸಾರ ಸರಿ ಚದರಂಗಂ, ಅಣ್ಣಯ್ಯ, ಆಪದ್ಭಾಂದವುಡು ಮುಂತಾದ ಹಲವು ಸೂಪರ್ ಡೂಪರ್ ಹಿಟ್ ಸಿನಿಮಾಗಳಲ್ಲಿ ನಟಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.