ಬೆಂಗಳೂರು: ಕಳೆದ ನಾಲ್ಕೈದು ದಿನಗಳಿಂದ ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ವರುಣ ತಂಪೆರೆದಿದ್ದಾನೆ. ಆದರೆ, ನಿನ್ನೆ ರಾತ್ರಿ ಬೆಂಗಳೂರಿನಲ್ಲಿ ಸುರಿದ ಭಾರೀ ಮಳೆಯಿಂದಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ನಿಲ್ದಾಣ ಕೆರೆಯಂತಾಗಿದೆ. ಈ ಕುರಿತಂತೆ ಪ್ರಯಾಣಿಕರು ಸಾಮಾಜಿಕ ಜಾಲತಾಣದಲ್ಲಿ ಫೋಟೋ ವಿಡಿಯೋಗಳನ್ನು ಶೇರ್ ಮಾಡಿದ್ದಾರೆ.
Looks all fancy but can’t withstand Bangalore rains. #terminal2 #bengalururains #kempegowdainternationalairport pic.twitter.com/P3XNQm4LmH
— Pragna L Krupa (@pragnalkrupa) May 2, 2023
Will it turn into a pool during heavy rains? #bengaluru #bengaluruairport pic.twitter.com/zPMs76I8oX
— Pragna L Krupa (@pragnalkrupa) May 2, 2023
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಕಳೆದ ನಾಲ್ಕೈದು ದಿನಗಳಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮಳೆಯ ಅಬ್ಬರ ಜೋರಾಗಿದೆ. ಒಂದೆಡೆ ಬಿಸಿಲಿನ ಬೇಗೆಯಿಂದ ಬೇಯುತ್ತಿದ್ದ ಸಿಲಿಕಾನ್ ಸಿಟಿಯ ಜನರಿಗೆ ಮಳೆರಾಯ ತಂಪೆರೆದಿದ್ದರೆ, ಮಂಗಳವಾರ (02 ಮೇ 2023) ರಾತ್ರಿ ಸುರಿದ ಮಳೆಯಿಂದಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೋರಿಕೆ ಕಂಡು ಬಂದಿದೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ನಲ್ಲಿ ಮೇಲ್ಚಾವಣಿ ಸೋರುತ್ತಿದ್ದು ಸಿಬ್ಬಂದಿ ಮತ್ತು ಪ್ರಯಾಣಿಕರು ಸಮಸ್ಯೆ ಎದುರಿಸುವಂತಾಗಿದೆ.
ವಿಮಾನ ನಿಲ್ದಾಣದಲ್ಲಿ ನಿಂತಿದ್ದ ಮಳೆ ನೀರನ್ನು ವಿಮಾನ ನಿಲ್ದಾಣದ ಸಿಬ್ಬಂದಿ ಸ್ವಚ್ಛಗೊಳಿಸುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.