ICC ODI World Cup 2023: ಅಕ್ಟೋಬರ್-ನವೆಂಬರ್ ತಿಂಗಳಿನಲ್ಲಿ ನಡೆಯಲಿರುವ ICC ಏಕದಿನ ವಿಶ್ವಕಪ್ ಪಂದ್ಯವನ್ನು ಅಹಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಆಯೋಜಿಸಲು ಬಿಸಿಸಿಐ ನಿರ್ಧರಿಸಿದೆ. ಭಾರತ ಮತ್ತು ಪಾಕಿಸ್ತಾನ ನಡುವಿನ ಹೈ-ಪ್ರೊಫೈಲ್ ಪಂದ್ಯವನ್ನು ಭಾರತದ ನೆಲದಲ್ಲಿ ನಡೆಸಲು ತೀರ್ಮಾನಿಸಲಾಗಿದೆ.
ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಹಮದಾಬಾದ್ ಸ್ಟೇಡಿಯಂನಲ್ಲಿ ಹೈವೋಲ್ಟೇಜ್ ಪಂದ್ಯವನ್ನು ಆಯೋಜಿಸಲು ನಿರ್ಧರಿಸಿದ್ದು, ಹೆಚ್ಚಿನ ಸಂಖ್ಯೆಯ ಅಭಿಮಾನಿಗಳು ಪಂದ್ಯ ವೀಕ್ಷಣೆ ಮಾಡಲು ಆಗಮಿಸುವ ನಿರೀಕ್ಷೆಯಿದೆ ಎಂದು ತಿಳಿದುಬಂದಿದೆ. 1 ಲಕ್ಷ ಆಸನ ಸಾಮರ್ಥ್ಯವಿರುವ ನರೇಂದ್ರ ಮೋದಿ ಸ್ಟೇಡಿಯಂ ದೇಶದ ಅತಿ ದೊಡ್ಡ ಕ್ರೀಡಾಂಗಣವಾಗಿದೆ ಎಂಬುದನ್ನು ಇಲ್ಲಿ ಉಲ್ಲೇಖಿಸಲೇಬೇಕು.
ಇದನ್ನೂ ಓದಿ: Surya Gochar 2023: ಈ ರಾಶಿಯವರ ಸರ್ವ ಸಮಸ್ಯೆಗೆ ಮುಕ್ತಿ; ಸುಖೀ ಜೀವನದ ಜೊತೆ ಅದೃಷ್ಟ ಕರುಣಿಸಲಿದ್ದಾನೆ ಸೂರ್ಯದೇವ!
ಪ್ರಸ್ತುತ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಮುಗಿದ ನಂತರ ಬಿಸಿಸಿಐ ವಿಶ್ವಕಪ್ ವೇಳಾಪಟ್ಟಿಯನ್ನು ಅದ್ಧೂರಿಯಾಗಿ ಬಿಡುಗಡೆ ಮಾಡಲಿದೆ ಎಂದು ತಿಳಿದುಬಂದಿದೆ.
ಎಲ್ಲವೂ ವೇಳಾಪಟ್ಟಿಯಂತೆ ನಡೆದರೆ, 50 ಓವರ್ ಗಳ ವಿಶ್ವಕಪ್ ಅಕ್ಟೋಬರ್ 5 ರಿಂದ ಪ್ರಾರಂಭವಾಗಲಿದ್ದು, ನಾಗ್ಪುರ, ಬೆಂಗಳೂರು, ತಿರುವನಂತಪುರ, ಮುಂಬೈ, ದೆಹಲಿ, ಲಕ್ನೋ, ಗುವಾಹಟಿ, ಹೈದರಾಬಾದ್, ಕೋಲ್ಕತ್ತಾ, ರಾಜ್ ಕೋಟ್, ಇಂದೋರ್ ಮತ್ತು ಧರ್ಮಶಾಲಾದಲ್ಲಿ ನಡೆಯಲಿವೆ. ಇದರಲ್ಲಿ ಅಭ್ಯಾಸ ಪಂದ್ಯಗಳೂ ಕೂಡ ನಡೆಯಬಹುದು.
ಆದರೆ, ಈ ಸ್ಥಳಗಳಲ್ಲಿ ಏಳು ಮಾತ್ರ ಭಾರತದ ಲೀಗ್ ಪಂದ್ಯಗಳನ್ನು ಆಯೋಜಿಸುತ್ತದೆ. ಒಂದು ವೇಳೆ ಭಾರತ ತಂಡವು ಫೈನಲ್ ಗೆ ಪ್ರವೇಶಿಸಿದರೆ ಒಂದೇ ಸ್ಥಳದಲ್ಲಿ ಎರಡು ಪಂದ್ಯಗಳನ್ನಾಡಿದಂತೆ ಆಗುತ್ತದೆ.
ಭದ್ರತಾ ಕಾರಣಗಳಿಂದಾಗಿ ಪಾಕಿಸ್ತಾನವು ತನ್ನ ಬಹುತೇಕ ಪಂದ್ಯಗಳನ್ನು ಚೆನ್ನೈ ಮತ್ತು ಬೆಂಗಳೂರಿನಲ್ಲಿ ಆಡುತ್ತದೆ ಎಂದು ಹೇಳಲಾಗುತ್ತಿದೆ. ಇನ್ನೊಂದೆಡೆ ಬಾಂಗ್ಲಾದೇಶವು ತಮ್ಮ ಹೆಚ್ಚಿನ ಪಂದ್ಯಗಳನ್ನು ಕೋಲ್ಕತ್ತಾ ಮತ್ತು ಗುವಾಹಟಿಯಲ್ಲಿ ಆಡಬಹುದು. ಏಕೆಂದರೆ ಇದು ನೆರೆಯ ದೇಶದ ಅಭಿಮಾನಿಗಳಿಗೆ ಪ್ರಯಾಣದ ದೂರವನ್ನು ಕಡಿಮೆ ಮಾಡುತ್ತದೆ.
ಅಕ್ಟೋಬರ್-ನವೆಂಬರ್ ಮಾನ್ಸೂನ್ ಸೀಸನ್ ಆಗಿರುವುದರಿಂದ, ನವೆಂಬರ್ ಮೊದಲ ವಾರಕ್ಕೂ ಮೊದಲು ದೇಶದ ದಕ್ಷಿಣ ಭಾಗಗಳಲ್ಲಿ ಪಂದ್ಯಗಳನ್ನು ಪೂರ್ಣಗೊಳಿಸಲು ಬಿಸಿಸಿಐ ಯೋಜಿಸುತ್ತಿದೆ. ಬಿಸಿಸಿಐ ಕೂಡ ಭಾರತೀಯ ತಂಡದ ಮ್ಯಾನೇಜ್ಮೆಂಟ್ನೊಂದಿಗೆ ಸಮಾಲೋಚನೆ ನಡೆಸಿದೆ.
ಆಸ್ಟ್ರೇಲಿಯಾ, ಇಂಗ್ಲೆಂಡ್, ನ್ಯೂಜಿಲೆಂಡ್ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯಗಳನ್ನು ಸ್ಪಿನ್ನರ್ ಗಳಿಗೆ ಸಹಾಯ ಮಾಡುವ ಸ್ಥಳಗಳಿಗೆ ನಿಗದಿಪಡಿಸುವಂತೆ ಭಾರತೀಯ ತಂಡವು ಬಿಸಿಸಿಐಗೆ ಮನವಿ ಮಾಡಿದೆ ಎಂದು ಮೂಲಗಳು ತಿಳಿಸಿವೆ.
ರಾಜ್ಯ ಘಟಕಗಳು ಈಗಾಗಲೇ ಬಿಸಿಸಿಐಗೆ ತಮ್ಮ ಇಚ್ಛೆಯ ಪಟ್ಟಿಯನ್ನು ನೀಡಿವೆ ಎಂದು ಮೂಲಗಳು ತಿಳಿಸಿವೆ. ಆದರೆ ಪಂದ್ಯಗಳನ್ನು ಯಾವ ಯಾವ ಪ್ರದೇಶಗಳಿಗೆ ಸೀಮಿತಗೊಳಿಸಬೇಕು ಎಂಬುದರ ನಿರ್ಧಾರವನ್ನು ಬಿಸಿಸಿಐ ಮಾತ್ರ ತೆಗೆದುಕೊಳ್ಳುತ್ತದೆ. ಆದರೆ ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಭಾರತದ ಪಂದ್ಯವನ್ನು ಆಯೋಜಿಸಲಾಗುವುದು ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ: ಖಾಲಿ ಹೊಟ್ಟೆ ಬೆಳ್ಳುಳ್ಳಿಯ ಜೊತೆಗೆ ಈ ಪದಾರ್ಥ ಸೇವಿಸಿದರೆ ಆರೋಗ್ಯಕ್ಕೆ ಹಲವು ಲಾಭಗಲಾಗುತ್ತವೆ!
ಇನ್ನು 50 ಓವರ್ ಗಳ ವಿಶ್ವಕಪ್ ಗೆ ಮುನ್ನ ಬಿಸಿಸಿಐ ದೇಶಾದ್ಯಂತ ಕ್ರೀಡಾಂಗಣಗಳನ್ನು ನವೀಕರಿಸಲು 500 ಕೋಟಿ ರೂ.ಖ ಖರ್ಚು ಮಾಡುತ್ತಿದೆ. ಕ್ರೀಡಾಂಗಣಗಳ ಸ್ಥಿತಿಯ ಬಗ್ಗೆ ಇತ್ತೀಚಿನ ದಿನಗಳಲ್ಲಿ ಭಾರೀ ದೂರುಗಳು ಕೇಳಿಬಂದಿತ್ತು. ಈ ಕಾರಣದಿಂದ ಸ್ವಚ್ಛ ಶೌಚಾಲಯಗಳು, ಸುಲಭ ಪ್ರವೇಶ ಮತ್ತು ಕ್ಲೀನ್ ಸೀಟ್ ಗಳಿಗೆ ಪ್ರಮುಖ ಆದ್ಯತೆ ನೀಡಲಿದ್ದೇವೆ ಎಂದು ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಈ ಹಿಂದೆ ಹೇಳಿಕೆ ನೀಡಿದ್ದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.