ಬಂಡೀಪುರದಲ್ಲಿ ಕಾಡ್ಗಿಚ್ಚು: ಸುಟ್ಟು ಕರಕಲಾದ ಸಾವಿರಾರು ಎಕರೆ ಅರಣ್ಯ!

ಶನಿವಾರ ರಾತ್ರಿ ಅತಿ ವೇಗವಾಗಿ ಗಾಳಿ ಬೀಸಿದ್ದರಿಂದ ಹುಲಿ ಸಂರಕ್ಷಿತ ಪ್ರದೇಶದವರೆಗೂ ಬೆಂಕಿ ವ್ಯಾಪಿಸಿದೆ.

Last Updated : Feb 24, 2019, 09:54 AM IST
ಬಂಡೀಪುರದಲ್ಲಿ ಕಾಡ್ಗಿಚ್ಚು: ಸುಟ್ಟು ಕರಕಲಾದ ಸಾವಿರಾರು ಎಕರೆ ಅರಣ್ಯ! title=

ಗುಂಡ್ಲುಪೇಟೆ: ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ರಾಷ್ಟ್ರೀಯ ಅಭಯಾರಣ್ಯದಲ್ಲಿ ಕಳೆದ ಎರಡು ದಿನಗಳ ಹಿಂದೆ ಸಾಮಾನ್ಯವಾಗಿ ಕಾಣಿಸಿಕೊಂಡಿದ್ದ ಕಾಡ್ಗಿಚ್ಚು, ಇದೀಗ ಸಾವಿರಾರು ಎಕರೆ ಅರಣ್ಯ ಪ್ರದೇಶವನ್ನು ಆಹುತಿಗೆ ತೆಗೆದುಕೊಂಡಿದೆ. ಹೀಗಾಗಿ ಇನ್ನೂ ಒಂದು ವಾರಗಳ ಕಾಲ ಸಫಾರಿ ಬಂದ್ ಮಾಡಲಾಗಿದೆ.

ಶನಿವಾರ ರಾತ್ರಿ ಅತಿ ವೇಗವಾಗಿ ಗಾಳಿ ಬೀಸಿದ್ದರಿಂದ ಹುಲಿ ಸಂರಕ್ಷಿತ ಪ್ರದೇಶದವರೆಗೂ ಬೆಂಕಿ ವ್ಯಾಪಿಸಿದ್ದು, ಅರಣ್ಯ ಇಲಾಖೆ ಸಿಬ್ಬಂದಿ, ಸ್ವಯಂ ಸೇವಕರು ಹಾಗೂ ಅಗ್ನಿ ಶಾಮಕದಳದವರು ಬೆಂಕಿ ನಂದಿಸಲು ಎಷ್ಟೇ ಪ್ರಯತ್ನಿಸುತ್ತಿದ್ದರೂ ಬೆಂಕಿ ನಿಯಂತ್ರಣಕ್ಕೆ ಬಾರದೇ ಸಾವಿರಾರು ಎಕರೆ ಪ್ರದೇಶವನ್ನು ಆವರಿಸಿದೆ. ಇದರಿಂದಾಗಿ ವನ್ಯಜೀವಿಗಳು ಸಂಕಷ್ಟಕ್ಕೆ ಸಿಲುಕಿವೆ.

ಬಂಡೀಪುರ ಸಂರಕ್ಷಿತ ಅಭಯಾರಣ್ಯಕ್ಕೆ ಬೆಂಕಿ ಬಿದ್ದಿದ್ದರಿಂದ ಇಲ್ಲಿನ ಸಫಾರಿ ಝೋನ್ ಕೂಡ ನಾಶವಾಗಿದೆ. ಸಫಾರಿಗಾಗಿ ಬಂಡೀಪುರಕ್ಕೆ ಬರುತ್ತಿದ್ದ ನೂರಾರು ಪ್ರವಾಸಿಗರಿಂದ ಪ್ರತಿ ತಿಂಗಳು ಲಕ್ಷಾಂತರ ರೂ. ಆದಾಯ ಬರುತ್ತಿತ್ತು. ಕಾಡ್ಗಿಚ್ಚಿನಿಂದಾಗಿ ಪ್ರಸಿದ್ಧ ಪ್ರವಾಸಿ ತಾಣ ಗೋಪಾಲಸ್ವಾಮಿ ಬೆಟ್ಟದಲ್ಲಿಯೂ ಸಹ ಗಿಡಮರಗಳು ಬೆಂಕಿಗೆ ಆಹುತಿಯಾಗಿದ್ದು, ರಸ್ತೆ ಸಂಚಾರ ನಿಷೇಧಿಸಲಾಗಿದೆ.

Trending News