NCP New President! NCP ಅಧ್ಯಕ್ಷರಾಗಿಯೇ ಮುಂದುವರೆಯಲಿದ್ದಾರೆ ಶರದ್ ಪವಾರ್, ರಾಜೀನಾಮೆ ತಿರಸ್ಕರಿಸಿದ ಸಮಿತಿ

NCP New President: ಮಹಾರಾಷ್ಟ್ರದ ಹಿರಿಯ NCP ಮುಖಂಡ ಶರದ್ ಪವಾರ್ ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನದಲ್ಲಿ ಮುಂದುವರೆಯಲಿದ್ದಾರೆ. ಇದಕ್ಕೆ ಕಾರಣ ಎಂದರೆ ಎನ್‌ಸಿಪಿಯ ನೂತನ ಅಧ್ಯಕ್ಷರ ಆಯ್ಕೆಗಾಗಿ ರಚಿಸಲಾಗಿದ್ದ ಸಮಿತಿ, ಶರದ್ ಪವಾರ್ ಅವರು ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಸಲ್ಲಿಸಿದ್ದ ರಾಜೀನಾಮೆಯನ್ನು ತಿರಸ್ಕರಿಸಿದೆ.  

Written by - Nitin Tabib | Last Updated : May 5, 2023, 12:27 PM IST
  • ಎನ್‌ಸಿಪಿಯ ಕೋರ್ ಕಮಿಟಿಯು ಪಕ್ಷದ ಮುಖ್ಯಸ್ಥ ಶರದ್ ಪವಾರ್ ಅವರನ್ನು ಪಕ್ಷವನ್ನು ಮುನ್ನಡೆಸುವಂತೆ ವಿನಂತಿಸುವ ನಿರ್ಣಯವನ್ನು ಅಂಗೀಕರಿಸಿದೆ ಎಂದು ಪ್ರಫುಲ್ ಪಟೇಲ್ ಹೇಳಿದ್ದಾರೆ.
  • ಸಮಿತಿಯ ಪ್ರಸ್ತಾವನೆ ಕುರಿತು ಶರದ್ ಪವಾರ್ ನಿರ್ಧಾರ ಕೈಗೊಳ್ಳಲಿದ್ದಾರೆ. ಮುಂಬೈನಲ್ಲಿ ಮಂಗಳವಾರ ನಡೆದ ತಮ್ಮ ಆತ್ಮಚರಿತ್ರೆಯ 'ಲೋಕ ಮಾಜೆ ಸಂಗತಿ'ಯ
  • ನವೀಕರಿಸಿದ ಆವೃತ್ತಿಯ ಬಿಡುಗಡೆ ಸಮಾರಂಭದಲ್ಲಿ ಶರದ್ ಪವಾರ್ ಅವರು ಎನ್‌ಸಿಪಿ ಮುಖ್ಯಸ್ಥ ಸ್ಥಾನಕ್ಕೆ ರಾಜೀನಾಮೆ ಘೋಷಿಸುವ ಮೂಲಕ ಎಲ್ಲರನ್ನು ಅಚ್ಚರಿಗೊಳಿಸಿದರು.
NCP New President! NCP ಅಧ್ಯಕ್ಷರಾಗಿಯೇ ಮುಂದುವರೆಯಲಿದ್ದಾರೆ ಶರದ್ ಪವಾರ್, ರಾಜೀನಾಮೆ ತಿರಸ್ಕರಿಸಿದ ಸಮಿತಿ title=
ಎನ್ಸಿಪಿ ನೂತನ ಅಧ್ಯಕ್ಷ !

NCP New President:  ಶರದ್ ಪವಾರ್ ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ. ಎನ್‌ಸಿಪಿಯ ನೂತನ ಅಧ್ಯಕ್ಷರ ಆಯ್ಕೆಗಾಗಿ ರಚಿಸಲಾಗಿದ್ದ ಸಮಿತಿಯು ಶರದ್ ಪವಾರ್ ಅವರ ರಾಜೀನಾಮೆಯನ್ನು ತಿರಸ್ಕರಿಸಿದೆ. ಸಮಿತಿಯ ಸಭೆಯನ್ನು ಇಂದು ಕರೆಯಲಾಗಿತ್ತು. ಶರದ್ ಪವಾರ್ ಅಧ್ಯಕ್ಷರಾಗಿ ಮುಂದುವರಿದ ನಂತರ ಮುಂಬೈನ ಎನ್‌ಸಿಪಿ ಕಚೇರಿಯ ಹೊರಗೆ ಸಂಭ್ರಮಾಚರಣೆಯ ವಾತಾವರಣವಿದೆ. ಕಾರ್ಯಕರ್ತರು ಶರದ್ ಪವಾರ್ ಅವರನ್ನು ಬೆಂಬಲಿಸಿ ಘೋಷಣೆಗಳನ್ನು ಮೊಳಗಿಸಿದ್ದಾರೆ.

ಪ್ರಫುಲ್ ಪಟೇಲ್ ಹೇಳಿದ್ದೇನು?
ಈ ಕುರಿತು ಸಭೆಯ ನಂತರ  ಮಾಹಿತಿ ನೀಡಿರುವ ಎನ್‌ಸಿಪಿ ಉಪಾಧ್ಯಕ್ಷ ಪ್ರಫುಲ್ ಪಟೇಲ್, ಶರದ್ ಪವಾರ್ ಅವರು ಮೇ 2 ರಂದು ಇದ್ದಕ್ಕಿದ್ದಂತೆ ರಾಜೀನಾಮೆ ಘೋಷಿಸಿದ್ದರು. ಮುಂದಿನ ಕ್ರಮಕ್ಕಾಗಿ ಮತ್ತು ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡಲು ಅವರು ಪಕ್ಷದ ನಾಯಕರ ಸಮಿತಿಯನ್ನು ನೇಮಿಸಿದ್ದರು. ಇಂದು ನಾವು ಸಮಿತಿಯ ಸಭೆ ನಡೆಸಿದ್ದೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ-Sharad Pawar Resigns: ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಶರದ್ ಪವಾರ್ ರಾಜೀನಾಮೆ!

ಎನ್‌ಸಿಪಿಯ ಕೋರ್ ಕಮಿಟಿಯು ಪಕ್ಷದ ಮುಖ್ಯಸ್ಥ ಶರದ್ ಪವಾರ್ ಅವರನ್ನು ಪಕ್ಷವನ್ನು ಮುನ್ನಡೆಸುವಂತೆ ವಿನಂತಿಸುವ ನಿರ್ಣಯವನ್ನು ಅಂಗೀಕರಿಸಿದೆ ಎಂದು ಪ್ರಫುಲ್ ಪಟೇಲ್ ಹೇಳಿದ್ದಾರೆ. ಸಮಿತಿಯ ಪ್ರಸ್ತಾವನೆ ಕುರಿತು ಶರದ್ ಪವಾರ್ ನಿರ್ಧಾರ ಕೈಗೊಳ್ಳಲಿದ್ದಾರೆ. ಮುಂಬೈನಲ್ಲಿ ಮಂಗಳವಾರ ನಡೆದ ತಮ್ಮ ಆತ್ಮಚರಿತ್ರೆಯ 'ಲೋಕ ಮಾಜೆ ಸಂಗತಿ'ಯ ನವೀಕರಿಸಿದ ಆವೃತ್ತಿಯ ಬಿಡುಗಡೆ ಸಮಾರಂಭದಲ್ಲಿ ಶರದ್ ಪವಾರ್ ಅವರು ಎನ್‌ಸಿಪಿ ಮುಖ್ಯಸ್ಥ ಸ್ಥಾನಕ್ಕೆ ರಾಜೀನಾಮೆ ಘೋಷಿಸುವ ಮೂಲಕ ಎಲ್ಲರನ್ನು ಅಚ್ಚರಿಗೊಳಿಸಿದರು. ಅಜಿತ್ ಪವಾರ್, ಸುಪ್ರಿಯಾ ಸುಳೆ, ಮಾಜಿ ಕೇಂದ್ರ ಸಚಿವರಾದ ಪ್ರಫುಲ್ ಪಟೇಲ್ ಮತ್ತು ಛಗನ್ ಭುಜಬಲ್ ಅವರ ಉತ್ತರಾಧಿಕಾರಿಯನ್ನು ನಿರ್ಧರಿಸಲು ಅವರು ಪಕ್ಷದ ಸಮಿತಿಯನ್ನು ಸಹ ರಚಿಸಿದ್ದರು.

ಇದನ್ನೂ ಓದಿ-Naxal Encounter: 38 ಲಕ್ಷ ಬಹುಮಾನ ಘೋಷಿಸಲ್ಪಟ್ಟ ಮೂವರು ನಕ್ಸಲೀಯರ ಎನ್ಕೌಂಟರ್, ಸಿ60 ತಂಡಕ್ಕೆ ಸಿಕ್ಕ ದೊಡ್ಡ ಯಶಸ್ಸು

ಎನ್‌ಸಿಪಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ತಮ್ಮ ನಿರ್ಧಾರ ಪಕ್ಷದ ಭವಿಷ್ಯಕ್ಕಾಗಿ ಮತ್ತು ಹೊಸ ನಾಯಕತ್ವವನ್ನು ಸಿದ್ಧಪಡಿಸುವುಕ್ಕಾಗಿದೆ ಎಂದು ಶರದ್ ಪವಾರ್ ಗುರುವಾರ ಹೇಳಿದ್ದಾರೆ. ತಮ್ಮ ನಿರ್ಧಾರವನ್ನು ಮರುಪರಿಶೀಲಿಸುವಂತೆ ಪಕ್ಷದ ಕಾರ್ಯಕರ್ತರು ಪದೇ ಪದೇ ಮನವಿ ಮಾಡಿದ ಹಿನ್ನೆಲೆಯಲ್ಲಿ ಅವರು ಈ ಹೇಳಿಕೆ ನೀಡಿದ್ದರು.

ಇದನ್ನೂ ನೋಡಿ-

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News