Karnataka Elections 2023: ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ದೇಶ ಮತ್ತು ಸಮಾಜದಲ್ಲಿ ದ್ವೇಷವನ್ನು ಬಿತ್ತುವ ಗುಂಪುಗಳನ್ನು ನಿಷೇಧಿಸಬೇಕೆಂದು ಕರೆ ನೀಡಿದ್ದಾರೆ. ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಳಿಕ ಬಜರಂಗದಳ ಮತ್ತು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಕಾಂಗ್ರೆಸ್ ಹೇಳಿದ ಬೆನ್ನಲ್ಲೇ ಅಖಿಲೇಶ್ ಯಾದವ್ ಅವರ ಈ ಹೇಳಿಕೆ ಮುನ್ನೆಲೆಗೆ ಬಂದಿದೆ. ಸರ್ದಾರ್ ವಲ್ಲಭಭಾಯಿ ಪಟೇಲ್ ಅವರು ಒಮ್ಮೆ ಆರ್ಎಸ್ಎಸ್ ಅನ್ನು ನಿಷೇಧಿಸಿದ್ದರು ಅಖಿಲೇಶ್ ಹೇಳಿದ್ದಾರೆ.
ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಅಖಿಲೇಶ್ ಯಾದವ್, ಹಣದುಬ್ಬರ ಮತ್ತು ನಿರುದ್ಯೋಗ ಗರಿಷ್ಠ ಮಟ್ಟ ತಲುಪಿದ್ದು, ಅಭಿವೃದ್ಧಿ ಸ್ಥಗಿತಗೊಂಡಿದೆ. ದೇಶ ಮತ್ತು ಸಮಾಜದಲ್ಲಿ ದ್ವೇಷ ಬಿತ್ತುವ ಗುಂಪುಗಳನ್ನು ನಿಷೇಧಿಸಬೇಕು. ಒಂದು ಕಾಲದಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಆರ್ಎಸ್ಎಸ್ ಅನ್ನು ನಿಷೇಧಿಸಿದ್ದರು ಎಂದು ಹೇಳಿದ್ದಾರೆ
ಮಂಗಳವಾರ ಕರ್ನಾಟಕ ಚುನಾವಣೆಗಾಗಿ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ ಕಾಂಗ್ರೆಸ್, ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ ಬಳಿಕ, ಕೋಮು ದ್ವೇಶವನ್ನು ಉತ್ತೇಜಿಸುವ ಬಜರಂಗದಳ ಮತ್ತು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದಂತಹ ಗುಂಪುಗಳ ವಿರುದ್ಧ ಬಲವಾದ ಮತ್ತು ನಿರ್ಣಾಯಕ ಕ್ರಮ ತೆಗೆದುಕೊಳ್ಳುವುದಾಗಿ ಹೇಳಿತ್ತು. ಈ ಸಂಘಟನೆಗಳು ಜಾತಿ ಮತ್ತು ಧರ್ಮಗಳ ಹೆಸರಿನಲ್ಲಿ ಸಮುದಾಯಗಳ ನಡುವೆ 'ದ್ವೇಷ ಹಬ್ಬಿಸುತ್ತವೆ'. ಈ ವಿಭಜನೆಯ ಬೀಜ ಬಿತ್ತುವ ವ್ಯಕ್ತಿಗಳು ಹಾಗೂ ಸಂಘಟನೆಗಳ ತನಿಖೆ ನಡೆಯಲು ಪಕ್ಷ ಬದ್ಧವಾಗಿದೆ ಎಂದು ಕಾಂಗ್ರೆಸ್ ಹೇಳಿತ್ತು. ಸುಪ್ರೀಂ ಕೋರ್ಟ್ ಕೂಡ 'ದ್ವೇಷ ಪಸರಿಸುವವರ ವಿರುದ್ಧ' ಕ್ರಮ ಕೈಗೊಳ್ಳಲು ಕರೆ ನೀಡಿದೆ ಎಂದು ಕಾಂಗ್ರೆಸ್ ಹೇಳಿತ್ತು.
ಇದನ್ನೂ ಓದಿ-"ಬಿಜೆಪಿ ತನ್ನ ರಾಜಕೀಯ ಸ್ವಾರ್ಥಕ್ಕಾಗಿ ರಾಜ್ಯ ಹಾಗೂ ದೇಶವನ್ನು ಒಡೆಯುತ್ತಿದೆ"-ಸೋನಿಯಾ ಗಾಂಧಿ
ಮಂಗಳವಾರ ಕಾಂಗ್ರೆಸ್ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಇದರಲ್ಲಿ ಪಕ್ಷವು ಬಜರಂಗ್ ದಳ ಹಾಗೂ ಪಿಎಫ್ಐ ಗಳಂತಹ ಸಂಘಟನೆಗಳ ವಿರುದ್ಧ ದ್ವೇಷವನ್ನು ಹರಡುತ್ತಿವೆ ಎಂದು ಆರೋಪಿಸಿ, ಇಂತಹ ಸಂಘಟನೆಗಳನ್ನು ನಿಷೇಧಿಸುವುದಾಗಿ ಭರವಸೆ ನೀಡಿದೆ. ಈ ಬಗ್ಗೆ ಬಜರಂಗದಳ ಕಾರ್ಯಕರ್ತರು ಮತ್ತು ಬಿಜೆಪಿ ಮುಖಂಡರ ತೀಕ್ಷ್ಣ ಪ್ರತಿಕ್ರಿಯೆಯೂ ಮುನ್ನೆಲೆಗೆ ಬಂದಿದೆ.
ಇದನ್ನೂ ಓದಿ-Karnataka Election 2023: ಬಿಜೆಪಿಯವರು ಕೊಲೆ ಮಾಡಲು ಹೇಸುವುದಿಲ್ಲ- ಸಿದ್ದರಾಮಯ್ಯ ಆಕ್ರೋಶ
ಇದಾದ ಬಳಿಕ ಬಜರಂಗದಳವನ್ನು ಪ್ರಸ್ತಾಪಿಸಿದ ಪ್ರಧಾನಿ ಮೋದಿ, ಮತದಾರರನ್ನು ಓಲೈಸಲು ಬಜರಂಗ ಬಲಿಗೆ ಕರೆ ನೀಡಿದ್ದಾರೆ. ಬಿಜೆಪಿ ಮುಖಂಡರು ಮತ್ತು ಬಜರಂಗದಳ ಕಾರ್ಯಕರ್ತರು ಇಂದು ಕರ್ನಾಟಕದಾದ್ಯಂತ ಹನುಮಾನ್ ಚಾಲೀಸಾ ಪಠಿಸಿ ಕಾಂಗ್ರೆಸ್ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಮಾಜಿ ಉಪಮುಖ್ಯಮಂತ್ರಿ ಹಾಗೂ ಬಿಜೆಪಿಯ ಹಿರಿಯ ಮುಖಂಡ ಕೆ.ಎಸ್.ಈಶ್ವರಪ್ಪ ಇಂದು ಕಾಂಗ್ರೆಸ್ ಪ್ರಣಾಳಿಕೆಯನ್ನು ಸುಟ್ಟು ಹಾಕಿದರೆ, ಭಜರಂಗದಳದ ಕಾರ್ಯಕರ್ತರು ಸಾರ್ವಜನಿಕ ಪ್ರತಿಭಟನೆಯ ವೇಳೆ ಕಾಂಗ್ರೆಸ್ ಘೋಷಣಾ ಪಾತ್ರವನ್ನು ಹರಿದು ಹಾಕಿದ್ದಾರೆ.
ಇದನ್ನೂ ನೋಡಿ-
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.