"ಜೆ.ಪಿ.ನಡ್ಡಾ ಅವರ ಹೇಳಿಕೆ ಸ್ಪಷ್ಟವಾಗಿ ಮತದಾರರಿಗೆ ಒಡ್ಡಿರುವ ಬೆದರಿಕೆ"-ಸಿದ್ದರಾಮಯ್ಯ

ಬಿಜೆಪಿ ಸೋತರೆ ಕರ್ನಾಟಕದಲ್ಲಿ ಕೇಂದ್ರ ಸರ್ಕಾರದ ಯೋಜನೆಗಳೆಲ್ಲ ಬಂದ್ ಎಂಬ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಹೇಳಿಕೆ ಸ್ಪಷ್ಟವಾಗಿ ಮತದಾರರಿಗೆ ಒಡ್ಡಿರುವ ಬೆದರಿಕೆಯಾಗಿದೆ. ಚುನಾವಣಾ ಆಯೋಗ ತಕ್ಷಣ ಮಧ್ಯೆ ಪ್ರವೇಶಿಸಿ ಬಿಜೆಪಿಯ ಎಲ್ಲ ಅಭ್ಯರ್ಥಿಗಳನ್ನು ಅನರ್ಹಗೊಳಿಸುವ ದಿಟ್ಟ ಕ್ರಮಕೈಗೊಳ್ಳಬೇಕು ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಆಗ್ರಹಿಸಿದ್ದಾರೆ.

Written by - Zee Kannada News Desk | Last Updated : May 8, 2023, 02:10 AM IST
  • ಕಾಂಗ್ರೆಸ್ ಪಕ್ಷ ಸದ್ಯದಲ್ಲಿಯೇ ಚುನಾವಣಾ ಆಯೋಗಕ್ಕೆ ಈ ಬಗ್ಗೆ ದೂರು ಸಲ್ಲಿಸಲಿದೆ.
  • ಜೆ.ಪಿ.ನಡ್ಡಾ ಮತ್ತು ಅವರ ಪಕ್ಷಕ್ಕೆ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಬಗ್ಗೆ ಕಿಂಚಿತ್ತೂ ಗೌರವ ಇಲ್ಲ.
  • ಅವರು ಭಾರತ ತಮ್ಮ ಏಕಚಕ್ರಾಧಿಪತ್ಯ ಎಂದು ತಿಳಿದುಕೊಂಡಿದ್ದಾರೆ.
 "ಜೆ.ಪಿ.ನಡ್ಡಾ ಅವರ ಹೇಳಿಕೆ ಸ್ಪಷ್ಟವಾಗಿ ಮತದಾರರಿಗೆ ಒಡ್ಡಿರುವ ಬೆದರಿಕೆ"-ಸಿದ್ದರಾಮಯ್ಯ  title=
file photo

ಬೆಂಗಳೂರು: ಬಿಜೆಪಿ ಸೋತರೆ ಕರ್ನಾಟಕದಲ್ಲಿ ಕೇಂದ್ರ ಸರ್ಕಾರದ ಯೋಜನೆಗಳೆಲ್ಲ ಬಂದ್ ಎಂಬ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಹೇಳಿಕೆ ಸ್ಪಷ್ಟವಾಗಿ ಮತದಾರರಿಗೆ ಒಡ್ಡಿರುವ ಬೆದರಿಕೆಯಾಗಿದೆ. ಚುನಾವಣಾ ಆಯೋಗ ತಕ್ಷಣ ಮಧ್ಯೆ ಪ್ರವೇಶಿಸಿ ಬಿಜೆಪಿಯ ಎಲ್ಲ ಅಭ್ಯರ್ಥಿಗಳನ್ನು ಅನರ್ಹಗೊಳಿಸುವ ದಿಟ್ಟ ಕ್ರಮಕೈಗೊಳ್ಳಬೇಕು ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಆಗ್ರಹಿಸಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಮೇಲಿಂದ ಮೇಲೆ ಮತದಾರರಿಗೆ ಬೆದರಿಕೆ ಒಡ್ಡುತ್ತಿದ್ದಾರೆ. ನರೇಂದ್ರ‌ಮೋದಿಯವರ ಆಶೀರ್ವಾದ ಬೇಕಿದ್ದರೆ ಬಿಜೆಪಿಗೆ ಮತ ಹಾಕಿ ಎಂದು ಇತ್ತೀಚೆಗಷ್ಟೇ ಹೇಳಿದ್ದರು. ಚುನಾವಣಾ ಆಯೋಗ ನಡ್ಡಾ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿ ಅವರ ವಿರುದ್ಧವೂ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣಾ ಸಹೋದರಿ ಮನೆ ಮೇಲೆ ಐಟಿ ದಾಳಿ

ಕಾಂಗ್ರೆಸ್ ಪಕ್ಷ ಸದ್ಯದಲ್ಲಿಯೇ ಚುನಾವಣಾ ಆಯೋಗಕ್ಕೆ ಈ ಬಗ್ಗೆ ದೂರು ಸಲ್ಲಿಸಲಿದೆ.ಜೆ.ಪಿ.ನಡ್ಡಾ ಮತ್ತು ಅವರ ಪಕ್ಷಕ್ಕೆ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಬಗ್ಗೆ ಕಿಂಚಿತ್ತೂ ಗೌರವ ಇಲ್ಲ. ಅವರು ಭಾರತ ತಮ್ಮ ಏಕಚಕ್ರಾಧಿಪತ್ಯ ಎಂದು ತಿಳಿದುಕೊಂಡಿದ್ದಾರೆ.ಇಂತಹವರನ್ನು ತೊಲಗಿಸಿ ಪ್ರಜಾಪ್ರಭುತ್ವವನ್ನು ರಕ್ಷಿಸಲು ಕರ್ನಾಟಕದ ಜನತೆಗೆ ಅಪೂರ್ವವಾದ ಅವಕಾಶ ಬಂದಿದೆ.ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತಹಾಕಿ ನಡ್ಡಾ ಮನಸ್ಥಿತಿಯ ಬಿಜೆಪಿಯನ್ನು ಸೋಲಿಸಿ ಪ್ರಜಾಪ್ರಭುತ್ವವನ್ನು ಗೆಲ್ಲಿಸಬೇಕೆಂದು ಮನವಿ ಮಾಡುತ್ತೇನೆ ಕೋರಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

Trending News