Boat Tragedy in Kerala: ಕೇರಳದಲ್ಲಿ ದೋಣಿ ಮುಳುಗಡೆ, ಮಕ್ಕಳು ಸೇರಿ 22 ಮಂದಿ ಸಾವು!

Boat Tragedy in Kerala: ಘಟನೆಯಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿಯವರು ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

Boat sinking in Kerala: ಕೇರಳದ ಮಲಪ್ಪುರಂ ಜಿಲ್ಲೆಯ ತನೂರ್ ಪ್ರದೇಶದ ತುವಲ್ತಿರಾಮ್ ಬೀಚ್ ಬಳಿ ಭಾನುವಾರ ಸಂಜೆ 40ಕ್ಕೂ ಹೆಚ್ಚು ಜನರಿದ್ದ ಬೋಟ್ ಮುಳುಡೆಯಾಗಿದೆ. ಈಘಟನೆಯಲ್ಲಿ ಮಕ್ಕಳು, ಮಹಿಳೆಯರು ಸೇರಿದಂತೆ 22 ಮಂದಿ ಸಾವನ್ನಪ್ಪಿದ್ದಾರೆ. ಈ ಘಟನೆಯಿಂದ ಕೇರಳ ರಾಜ್ಯಕ್ಕೆ ಬಹುದೊಡ್ಡ ಆಘಾತವುಂಟಾಗಿದೆ.   

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಈ ದುರಂತ ನಡೆದಿದೆ. ತನೂರ್ ಕರಾವಳಿ ಬಳಿ ಪ್ರವಾಸಿ ದೋಣಿ ಮಗುಚಿ ಬಿದ್ದಿದೆ. ಈ ಘಟನೆ ಸಂಜೆ 7 ಗಂಟೆ ಸುಮಾರಿಗೆ ನಡೆದಿದೆ. ದೋಣಿಯಲ್ಲಿದ್ದವರೆಲ್ಲರೂ ಪ್ರವಾಸಿಗರಾಗಿದ್ದರು.

2 /5

ಇದುವರೆಗೆ ನಾವು 21 ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ವರದಿಯಾಗಿದೆ. ದೋಣಿಯಲ್ಲಿ ಎಷ್ಟು ಜನರಿದ್ದರು ಎಂಬುದರ ಬಗ್ಗೆ ನಮಗೆ ನಿಖರವಾಗಿ ತಿಳಿದಿಲ್ಲ. ನೀರಿನಲ್ಲಿ ಮುಳುಗಿರುವವರಿಗಾಗಿ ನಾವು ಹುಡುಕಾಟ ಮುಂದುವರೆಸಿದ್ದೇವೆಂದು ಪ್ರಾದೇಶಿಕ ಅಗ್ನಿಶಾಮಕ ದಳದ ಅಧಿಕಾರಿ ಶಿಜು ಕೆಕೆ ತಿಳಿಸಿದ್ದಾರೆ.

3 /5

ಘಟನೆಯಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿಯವರು ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

4 /5

ಕೇರಳ ಸಿಎಂ ಪಿಣರಾಯಿ ವಿಜಯನ್ ಸಹ ಘಟನೆಯಲ್ಲಿ ಸಾವನ್ನಪ್ಪಿದವರಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ತುರ್ತು ರಕ್ಷಣಾ ಕಾರ್ಯಾಚರಣೆ ಕೈಗೊಳ್ಳುವಂತೆ ಮಲಪ್ಪುರಂ ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ.

5 /5

ಅಗ್ನಿಶಾಮಕ ಮತ್ತು ಪೊಲೀಸ್ ಘಟಕಗಳು, ಕಂದಾಯ ಮತ್ತು ಆರೋಗ್ಯ ಇಲಾಖೆಗಳ ಅಧಿಕಾರಿಗಳು ಮತ್ತು ಜಿಲ್ಲೆಯ ತಾನೂರ್ ಮತ್ತು ತಿರೂರು ಪ್ರದೇಶದ ಸ್ಥಳೀಯರು ರಕ್ಷಣಾ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆಂದು ತಿಳಿದುಬಂದಿದೆ.