ಆಯುರ್ವೇದದ ಜನಪ್ರಿಯ ಪಾನೀಯ, ಭಾರತೀಯ ಸಾಂಪ್ರದಾಯಿಕ ಔಷಧ ಎಂದೂ ಕರೆಯಲ್ಪಡುವ ಅರಿಶಿನ ಹಾಲು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ನಿತ್ಯ ಬೆಚ್ಚಗಿನ ಅರಿಶಿನದ ಹಾಲನ್ನು ಕುಡಿಯುವುದರಿಂದ ಆರೋಗ್ಯಕ್ಕೆ ಅದ್ಭುತ ಪ್ರಯೋಜನಗಳು ಲಭ್ಯವಾಗುತ್ತವೆ ಎಂದು ಹೇಳಲಾಗುತ್ತದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಅರಿಶಿನದ ಹಾಲು ಮನೆಯಲ್ಲಿ ಸುಲಭವಾಗಿ ತಯಾರಿಸಬಹುದಾದ ಪೌಷ್ಟಿಕಾಂಶಯುಕ್ತ ಹಾಲು. ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿ ಪರಿಣಾಮಕಾರಿ ಆದ ಈ ಪಾಣೀಯವನ್ನು ಟೀ, ಕಾಫಿಗೆ ಬದಲಿಯಾಗಿ ಬಳಸಲಾಗುತ್ತದೆ. ವಿವಿಧ ಆರೋಗ್ಯ ಸಮಸ್ಯೆಗಳಿಗೆ ನೈಸರ್ಗಿಕ ಪರಿಹಾರ ಎಂದು ಇದನ್ನು ಪರಿಗಣಿಸಲಾಗಿದೆ. ಇದರ ಪ್ರಮುಖ ಪ್ರಯೋಜನಗಳೆಂದರೆ...
ಅರಿಶಿನದ ಕರ್ಕ್ಯುಮಿನ್ ಅದರ ಪ್ರಬಲವಾದ ಉತ್ಕರ್ಷಣ ನಿರೋಧಕ, ಉರಿಯೂತದ, ಆಂಟಿಬ್ಯಾಕ್ಟೀರಿಯಲ್, ಆಂಟಿವೈರಲ್ ಮತ್ತು ಆಂಟಿಫಂಗಲ್ ಪರಿಣಾಮಗಳಿಗೆ ಹೆಸರುವಾಸಿಯಾಗಿದೆ, ಇದು ಪ್ರತಿರಕ್ಷಣಾ ವ್ಯವಸ್ಥೆಯನ್ನು ಬಲಪಡಿಸುವ ಮೂಲಕ ನಮ್ಮನ್ನು ಸೋಂಕಿನಿಂದ ರಕ್ಷಿಸುವಲ್ಲಿ ಪರಿಣಾಮಕಾರಿ ಎಂದು ಹೇಳಲಾಗುತ್ತದೆ.
ಅರಿಶಿನ ಹಾಲಿನ ಉರಿಯೂತದ ಮತ್ತು ಆಂಟಿಮೈಕ್ರೊಬಿಯಲ್ ಗುಣಲಕ್ಷಣಗಳು ವಿವಿಧ ಜೀರ್ಣಕಾರಿ ಸಮಸ್ಯೆಗಳಿಗೆ ಚಿಕಿತ್ಸೆ ನೀಡಲು ಪರಿಣಾಮಕಾರಿ ಎಂದು ಹಲವು ಸಂಶೋಧನೆಗಳಿಂದ ತಿಳಿದು ಬಂದಿದೆ.
ಅರಿಶಿನ ಹಾಲು ನಿಮ್ಮ ಅಸ್ಥಿಪಂಜರದ ವ್ಯವಸ್ಥೆಯನ್ನು ಬಲಪಡಿಸಬಲ್ಲ ವಿಶ್ವಾಶಾರ್ಹ ಪಾನೀಯವಾಗಿದೆ. ಈ ಪಾನೀಯವು ಕ್ಯಾಲ್ಸಿಯಂ ಮತ್ತು ವಿಟಮಿನ್ ಡಿ ಸಮೃದ್ಧವಾಗಿದ್ದು, ನಮ್ಮ ಮೂಳೆಗಳನ್ನು ಬಲಪಡಿಸುವಲ್ಲಿ ತುಂಬಾ ಪ್ರಯೋಜನಕಾರಿ ಎಂದು ನಂಬಲಾಗಿದೆ.
ಅರಿಶಿನ ಹಾಲಿನಲ್ಲಿರುವ ಪೋಷಕಾಂಶಗಳು ಹೃದ್ರೋಗದ ವಿರುದ್ಧ ರಕ್ಷಾಕವಚವಾಗಿ ಕಾರ್ಯನಿರ್ವಹಿಸುತ್ತವೆ.
ಅರಿಶಿನದ ಹಾಲಿಗೆ ಸಕ್ಕರೆಯನ್ನು ಮಿಕ್ಸ್ ಮಾಡದೆ ಹಾಗೆ ಕುಡಿಯುವುದರಿಂದ ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಇದನ್ನು Zee ಮೀಡಿಯಾ ಖಚಿತಪಡಿಸುವುದಿಲ್ಲ.