ಬೆಂಗಳೂರು: ನಗರದಲ್ಲಿ ಸುರಿದ ಮಳೆಯಿಂದಾಗಿ ಪಿಇಎಸ್ ಕಾಲೇಜ್ ಬಳಿಯ ವೀರಭದ್ರ ನಗರದಲ್ಲಿ ಅಪಾರ್ಟ್ ಮೆಂಟ್ ನ ತಡೆಗೋಡೆ ಸಮೇತ ಮನೆಗಳು ನೆಲಸಮವಾಗಿವೆ.ಇದೆ ವೇಳೆ ತಡೆಗೋಡೆ ಪಕ್ಕದಲ್ಲಿ ನಿಲ್ಲಿಸಿದ್ದ ಎರಡು ಕಾರುಗಳು ಸಂಪೂರ್ಣ ಜಖಂಗೊಂಡಿರುವುದರ ಜೊತೆಗೆ ಮತ್ತೆರಡು ಕಾರುಗಳಿಗೂ ಹಾನಿಯಾಗಿವೆ.ಈ ಘಟನೆಯಲ್ಲಿ ಯಾರಿಗೂ ಸಹ ಹಾನಿಯಾಗಿಲ್ಲ ಎನ್ನಲಾಗಿದೆ.
ಇದನ್ನೂ ಓದಿ: ಕಾಂಗ್ರೆಸ್ ನವರು ಸುಳ್ಳು ಸುದ್ದಿ ಹರಡಿ ಸಮಾಜದಲ್ಲಿ ದ್ವೇಷ ಹುಟ್ಟಿಸುತ್ತಿದ್ದಾರೆ – ಸಿಎಂ ಬೊಮ್ಮಾಯಿ
ಗೋಪಾಲ್ ಹಾಗೂ ಗೋವಿಂದಯ್ಯ ಎಂಬುವರ ಮನೆ ಸಂಪೂರ್ಣ ಕುಸಿದು ಹಾನಿಯಾಗಿದೆ ಮತ್ತು ಮನೆಯಲ್ಲಿದ್ದ ವಸ್ತುಗಳು ಸಂಪೂರ್ಣ ನೆಲಸಮವಾಗಿವೆ.ದುರ್ಘಟನೆ ವೇಳೆ ಮನೆಯಲ್ಲಿ ಯಾರೂ ಇಲ್ಲದ್ದರಿಂದ ಯಾವುದೇ ಸಾವು ನೋವು ಸಂಭವಿಸಿಲ್ಲ ಎನ್ನಲಾಗಿದೆ.ಅಪಾರ್ಟ್ಮೆಂಟ್ ತಡೆಗೋಡೆ ಸರಿಯಾಗಿ ಕಟ್ಟಿಲ್ಲದಿರುವುದರಿಂದಾಗಿ ಮನೆಗಳು ಕುಸಿದಿವೆ ಎಂದು ಸ್ಲಂ ನಿವಾಸಿಗಳು ಆರೋಪಿಸಿದ್ದಾರೆ.
ಇದನ್ನೂ ಓದಿ: Karnataka Election: ವಿಧಾನಸಭೆ ಚುನಾವಣೆ ಹಿನ್ನೆಲೆ ಮೆಟ್ರೋ ಸೇವೆ ವಿಸ್ತರಣೆ: ವಿವರ ಹೀಗಿದೆ ನೋಡಿ..
ಅದರಲ್ಲೂ ಪ್ರಮುಖವಾಗಿ ಸ್ಲಂ ನಲ್ಲಿ ಯಾವುದೇ ರೀತಿಯ ಸೂಕ್ತ ಒಳಚರಂಡಿ ವ್ಯವಸ್ತೆ ಇಲ್ಲ, ಹೀಗಾಗಿ ಪ್ರತಿನಿತ್ಯ ಕೊಳಚೆ ನೀರಿನಿಂದ ಕಂಪೌಂಡ್ ವಾಲ್ ಕುಸಿದಿದೆ ಎಂದು ಅಪಾರ್ಟ್ ನಿವಾಸಿಗಳು ಆರೋಪಿಸಿದ್ದಾರೆ.ಮತ್ತೊಂದು ಕಡೆ ಇನ್ನೂ ಐದಾರು ಮನೆಗಳು ಕುಸಿಯುವ ಸ್ಥಿತಿಯಲ್ಲಿವೆ ಎಂದು ತಿಳಿದು ಬಂದಿದೆ.ಈ ಘಟನೆ ಸಂಭವಿಸಿದರೂ ಕೂಡ ಯಾವದೇ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿಲ್ಲ ಎಂದು ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.