ಕೊಪ್ಪಳ: ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆ-2023ರ ಹಿನ್ನೆಲೆಯಲ್ಲಿ ಮೇ 10ರಂದು ಮತದಾನವು ನಡೆಯಲಿದ್ದು, ಮತದಾನ ಮಾಡಲು ಚುನಾವಣಾ ಗುರುತಿನ ಚೀಟಿ ಜೊತೆಗೆ ಪರ್ಯಾಯ ದಾಖಲೆಗಳನ್ನು ಬಳಸಬಹುದಾಗಿದೆ.ಎಂದು ಜಿಲ್ಲಾ ಚುನಾವಣಾಧಿಕಾರಿಗಳಾದ ಎಂ.ಸುಂದರೇಶಬಾಬು ಅವರು ತಿಳಿಸಿದ್ದಾರೆ.
ಇದನ್ನೂ ಓದಿ: ಮತದಾರರನ್ನು ಮತದಾನಕ್ಕಾಗಿ ವಾಹನಗಳಲ್ಲಿ ಕರೆ ತರುವುದು ಅಪರಾಧ!
ಕೊಪ್ಪಳ ಜಿಲ್ಲೆಯಲ್ಲಿ ಶೇ 100ರಷ್ಟು ಮತದಾರರಿಗೆ ಮತದಾರರ ಗುರುತಿನ ಚೀಟಿಯನ್ನು ವಿತರಿಸಲಾಗಿದ್ದು, ಅದನ್ನೆ ಬಳಸಿ ಮತ ಚಲಾಯಿಸಬೇಕು. ಅನಿವಾರ್ಯ ಕಾರಣಗಳಿಂದ ಮತದಾರರ ಗುರುತಿನ ಚೀಟಿ ಲಭ್ಯವಾಗದಿದ್ದ ಪಕ್ಷದಲ್ಲಿ ಭಾರತ ಚುನಾವಣಾ ಆಯೋಗವು ಸೂಚಿಸಿದ 12 ಇತರೆ ಪರ್ಯಾಯ ದಾಖಲೆಯ ಪೈಕಿ ಯಾವುದಾದರೂ ಒಂದು ದಾಖಲೆಯನ್ನು ಹಾಜರುಪಡಿಸಿ ಮತ ಚಲಾಯಿಸಬಹುದಾಗಿದೆ.
ಇದನ್ನೂ ಓದಿ: ರಾಹುಲ್ ಗಾಂಧಿಯಿಂದ ಚಿಕ್ಕೋಡಿಯಲ್ಲಿ ಭರ್ಜರಿ ಕ್ಯಾಂಪೇನ್
ಪರ್ಯಾಯ ದಾಖಲೆಗಳು: ಆಧಾರ್ ಕಾರ್ಡ್, ನರೇಗಾ ಜಾಬ್ ಕಾರ್ಡ್, ಬ್ಯಾಂಕ್ ಅಥವಾ ಅಂಚೆ ಕಚೇರಿಯಿಂದ ವಿತರಿಸಲಾದ ಭಾವಚಿತ್ರಹೊಂದಿರುವ ಪಾಸ್ಬುಕ್, ಕಾರ್ಮಿಕ ಸಚಿವಾಲಯದ ಯೋಜನೆಯಡಿಯಲ್ಲಿ ನೀಡಲಾದ ಆರೋಗ್ಯ ವಿಮಾ ಸ್ಮಾರ್ಟ್ ಕಾರ್ಡ್, ವಾಹನ ಚಾಲನಾ ಪರವಾನಗಿ ಪತ್ರ, ಪಾನ್ ಕಾರ್ಡ್, ಎನ್.ಪಿ.ಆರ್ ಅಡಿಯಲ್ಲಿ ಆರ್.ಜಿ.ಐ ನೀಡಿದ ಸ್ಮಾರ್ಟ್ ಕಾರ್ಡ್, ಭಾರತೀಯ ಪಾಸ್ಪೋರ್ಟ್, ಭಾವಚಿತ್ರಹೊಂದಿರುವ ಪಿಂಚಣಿ ದಾಖಲೆ, ಕೇಂದ್ರ/ ರಾಜ್ಯ ಸರ್ಕಾರ/ ಪಿಎಸ್ಯು/ಪಬ್ಲಿಕ್ ಲಿಮಿಟೆಡ್ ಕಂಪನಿಗಳು ಉದ್ಯೋಗಿಗಳಿಗೆ ನೀಡಿದ ಭಾವಚಿತ್ರವಿರುವ ಸೇವಾ ಗುರುತಿನ ಚೀಟಿಗಳು, ಎಂಪಿ, ಎಂಎಲ್ಎ ಹಾಗೂ ಎಂಎಲ್ಸಿಗಳಿಗೆ ನೀಡಲಾದ ಅಧಿಕೃತ ಗುರುತಿನ ಚೀಟಿಗಳು ಅಥವಾ ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದಿಂದ ನೀಡುವ ಯುಡಿಐಡಿ ಕಾರ್ಡ್ ಬಳಸಿ ಮತಚಲಾಯಿಸಬಹುದು ಎಂದು ಜಿಲ್ಲಾಧಿಕಾರಿಗಳ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.