ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಹಾಬಲಕಟ್ಟಿ ಗ್ರಾಮದಲ್ಲಿ ಬುಧವಾರ ಶಾಂತಿಯುತವಾಗಿ ಮತದಾನ ನಡೆಯಿತು. ಮತದಾನ ಮಾಡಲು ಗ್ರಾಮಸ್ಥರಿಗೆ ಆಶಾ ಕಾರ್ಯಕರ್ತೆಯರು ಮತ್ತು ಚುನಾವಣಾಧಿಕಾರಿಗಳು ಸಹಾಯ ಮಾಡಿದರು.
ಹಾಬಲಕಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಗಳಲ್ಲಿ ಬೆಳಗ್ಗೆ 7 ಗಂಟೆಯಿಂದಲೇ ಗ್ರಾಮಸ್ಥರು ತಮ್ಮ ಹಕ್ಕು ಚಲಾಯಿಸಿದರು. ಯುವಕರು, ಮಹಿಳೆಯರು ಮತ್ತು ವೃದ್ಧರು ಮತಗಟ್ಟೆಗೆ ಬಂದು ಮತದಾನ ಮಾಡಿದರು.
ಹಾಬಲಕಟ್ಟಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮತದಾರರಿಗೆ ಗುರುತಿನ ಚೀಟಿ, ಮತಗಟ್ಟೆ ಸಂಖ್ಯೆ ಮತ್ತು ಮತದಾರರ ಪಟ್ಟಿಯಲ್ಲಿನ ಹೆಸರು ಮುಂತಾದ ಮಾಹಿತಿಯನ್ನು ಆಶಾ ಕಾರ್ಯಕರ್ತೆಯರು ಮತ್ತು ಚುನಾವಣಾಧಿಕಾರಿಗಳು ನೀಡಿದರು.
ಹಾಬಲಕಟ್ಟಿ ಗ್ರಾಮದಲ್ಲಿ ಒಟ್ಟು 2 ವಾರ್ಡ್ಗಳಿದ್ದು, 2 ಮತಗಟ್ಟೆಗಳಲ್ಲಿ ಮತದಾನ ನಡೆಯಿತು. ಮತದಾರರು ಸರತಿ ಸಾಲಿನಲ್ಲಿ ನಿಂತು ತಮ್ಮ ಹಕ್ಕು ಚಲಾಯಿಸಿದರು.
ವೃದ್ಧರು ಕೂಡ ಯುವಕರನ್ನು ನಾಚಿಸುವಂತೆ ಮತಗಟ್ಟೆಗೆ ತೆರಳಿ ಮತದಾನ ಮಾಡಿದ್ದು ಗಮನ ಸೆಳೆಯಿತು.