Karnataka Election 2023: ಮತದಾನ ಮುಗಿಯುತ್ತಿದ್ದಂತೆ ಸಿಎಂ ಟೆಂಪಲ್ ರನ್: ಸವದತ್ತಿ ಕ್ಷೇತ್ರಕ್ಕೆ ಬೊಮ್ಮಾಯಿ ಭೇಟಿ

Karnataka Election 2023: ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಯಲ್ಲಮ್ಮನಗುಡ್ಡದಲ್ಲಿರುವ ಸವದತ್ತಿ ಯಲ್ಲಮ್ಮನ ಕ್ಷೇತ್ರಕ್ಕೆ ಕುಟುಂಬ ಸಮೇತ ಆಗಮಿಸಿದ ಸಿಎಂ ಬಸವರಾಜ ಬೊಮ್ಮಾಯಿಗೆ, ಸಚಿವ ಸಿಸಿ ಪಾಟೀಲ್, ಬಿಜೆಪಿ ಅಭ್ಯರ್ಥಿ ರತ್ನಾ ಮಾಮನಿ ಸಾಥ್ ನೀಡಿದ್ದಾರೆ.

Written by - Zee Kannada News Desk | Edited by - Bhavishya Shetty | Last Updated : May 11, 2023, 12:44 PM IST
    • ಶಿಗ್ಗಾಂವಿ ಜನತೆ ತೋರಿದ ಪ್ರೀತಿಗೆ ನಾನು ಚಿರರುಣಿ. ಚುನಾವಣೆಯನ್ನು ಹಬ್ಬದ ರೀತಿಯಲ್ಲಿ ಆಚರಣೆ ಮಾಡಿದ
    • ಮತದಾನೋತ್ತರ ಸಮೀಕ್ಷೆಗಳು ಕಳೆದ ಬಾರಿ ಕಾಂಗ್ರೆಸ್ 107ಕ್ಕೂ ಅಧಿಕ ಸ್ಥಾನ ಅಂತ ಹೇಳಿದ್ದವು.
    • ಅತಂತ್ರ ಎಂಬ ಪ್ರಶ್ನೆ ಉತ್ತರ ನೀಡಲ್ಲ. ನಾನು 150 ಅಂತ ಎಲ್ಲೂ ಹೇಳಿಲ್ಲ.
Karnataka Election 2023: ಮತದಾನ ಮುಗಿಯುತ್ತಿದ್ದಂತೆ ಸಿಎಂ ಟೆಂಪಲ್ ರನ್: ಸವದತ್ತಿ ಕ್ಷೇತ್ರಕ್ಕೆ ಬೊಮ್ಮಾಯಿ ಭೇಟಿ title=
Chief Minister Basavaraj Bommai

CM Basavaraj Bommai: ಹುಬ್ಬಳ್ಳಿ: ಮತದಾನ ಮುಗಿಯುತ್ತಿದ್ದಂತೆ ಸಿಎಂ ಬಸವರಾಜ ಬೊಮ್ಮಾಯಿ ಸವದತ್ತಿ ಯಲ್ಲಮ್ಮನ ದೇವಿಯ ದರ್ಶನ ಪಡೆದಿದ್ದಾರೆ. ಮನೆ ದೇವತೆ ಶ್ರೀ ರೇಣುಕಾ ಯಲ್ಲಮ್ಮ ದೇವಿಯ ದರ್ಶನ ಪಡೆದ ಸಿಎಂ ಬಿಜೆಪಿ ಗೆಲುವಿಗಾಗಿ ಪ್ರಾರ್ಥನೆ ಸಲ್ಲಿಸಿದ್ದಾರೆ.

ಇದನ್ನೂ ಓದಿ:  ಕೊನೆಗೂ ಅಗ್ಗವಾಯಿತು ಚಿನ್ನ ! ಬೆಳ್ಳಿ ಮಾತ್ರ ಇನ್ನೂ ದುಬಾರಿ

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಯಲ್ಲಮ್ಮನಗುಡ್ಡದಲ್ಲಿರುವ ಕ್ಷೇತ್ರಕ್ಕೆ ಕುಟುಂಬ ಸಮೇತ ಆಗಮಿಸಿದ ಸಿಎಂಗೆ, ಸಚಿವ ಸಿಸಿ ಪಾಟೀಲ್, ಬಿಜೆಪಿ ಅಭ್ಯರ್ಥಿ ರತ್ನಾ ಮಾಮನಿ ಸಾಥ್ ನೀಡಿದ್ದಾರೆ.

ಇದಕ್ಕೂ ಮುನ್ನ ಮಾತನಾಡಿದ ಸಿಎಂ, “ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಪ್ರಚಾರದಿಂದ ನಮಗೆ ಪ್ಲಸ್ ಆಗಿದೆ. ನಾವು ಸ್ಪಷ್ಟ ಬಹುಮತ ಪಡೆಯುತ್ತೇವೆ” ಎಂದು ಹೇಳಿದರು.

ಶಿಗ್ಗಾಂವಿ ಜನತೆ ತೋರಿದ ಪ್ರೀತಿಗೆ ನಾನು ಚಿರರುಣಿ. ಚುನಾವಣೆಯನ್ನು ಹಬ್ಬದ ರೀತಿಯಲ್ಲಿ ಆಚರಣೆ ಮಾಡಿದರು. ನನ್ನ ವಿರುದ್ಧ ಷಡ್ಯಂತ್ರ, ಅಪಪ್ರಚಾರ ಮಾಡಿದರು. ಆದರೆ ಅದು ನಿನ್ನೆಗೆ ಮುಗಿದಿದೆ. ನಾನು ಶಿಗ್ಗಾಂವಿಯಲ್ಲಿ ದೊಡ್ಡ ಬಹುಮತದಿಂದ ಗೆಲ್ಲುತ್ತೇನೆ ಎಂದರು.

ಮತದಾನೋತ್ತರ ಸಮೀಕ್ಷೆಗಳು ಕಳೆದ ಬಾರಿ ಕಾಂಗ್ರೆಸ್ 107ಕ್ಕೂ ಅಧಿಕ ಸ್ಥಾನ ಅಂತ ಹೇಳಿದ್ದವು. ಆದರೆ ಫಲಿತಾಂಶದ ದಿನ ಅದು ಉಲ್ಟಾ ಆಯಿತು. ಈಗಲೂ ಅದೇ ನಂಬಿಕೆಯಿದೆ. ಪ್ರಧಾನಿ ಮೋದಿಯವರ ಪ್ರಚಾರ ನಮಗೆ ಪ್ಲಸ್ ಆಗಿದೆ. ಯುವಕರು ಮತ್ತು ಮಹಿಳೆಯರು ನಮ್ಮ ಪರವಾಗಿ ಮತದಾನ ಮಾಡಿದ್ದಾರೆ. ನನಗೆ ವಿಶ್ವಾಸವಿದೆ ನಾವು ಸಂಪೂರ್ಣ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದರು.

ಇದನ್ನೂ ಓದಿ: Swift, Nexon ಅಲ್ಲ… 34KM ಮೈಲೇಜ್ ನೀಡುವ, ದೇಶದಲ್ಲಿ ಅತೀ ಹೆಚ್ಚು ಮಾರಾಟವಾದ ಕಾರಿದು! ಬೆಲೆ ಜಸ್ಟ್ 5 ಲಕ್ಷ

ಅತಂತ್ರ ಎಂಬ ಪ್ರಶ್ನೆ ಉತ್ತರ ನೀಡಲ್ಲ. ನಾನು 150 ಅಂತ ಎಲ್ಲೂ ಹೇಳಿಲ್ಲ. ಆದರೆ ಬಹುಮತ ಅಂತ ಹೇಳಿದ್ದೆ ಈಗಲೂ ಅದೇ ಹೇಳಿಕೆ ಬದ್ಧನಾಗಿದ್ದೇನೆ ಎಂದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News