/kannada/photo-gallery/englands-legendary-test-batsman-joe-root-will-break-sachin-tendulkar-4-world-records-249475 ಒಂದಲ್ಲ ಎರಡಲ್ಲ ಸಚಿನ್ ಅವರ 4 ವಿಶ್ವ ದಾಖಲೆಗಳನ್ನು ಬ್ರೇಕ್‌ ಮಾಡಲಿದ್ದಾರೆ ಈ 33 ವರ್ಷದ ಬ್ಯಾಟ್ಸ್‌ಮನ್‌!  ಒಂದಲ್ಲ ಎರಡಲ್ಲ ಸಚಿನ್ ಅವರ 4 ವಿಶ್ವ ದಾಖಲೆಗಳನ್ನು ಬ್ರೇಕ್‌ ಮಾಡಲಿದ್ದಾರೆ ಈ 33 ವರ್ಷದ ಬ್ಯಾಟ್ಸ್‌ಮನ್‌! 249475

2019 ರ ಲೋಕಸಭಾ ಚುನಾವಣೆಯಲ್ಲಿ ಹಿಂದಿಗಿಂತಲೂ ಹೆಚ್ಚು ಸ್ಥಾನಗಳನ್ನು ಬಿಜೆಪಿ ಗೆಲ್ಲುತ್ತದೆ-ಜಾವಡೇಕರ್

2014 ರ ಲೋಕಸಭಾ ಚುನಾವಣೆಯಲ್ಲಿ ಜಯಗಳಿಸಿದಕ್ಕಿಂತ ಹೆಚ್ಚು ಸ್ಥಾನಗಳನ್ನು 2019 ರ ಚುನಾವಣೆಯಲ್ಲಿ  ಬಿಜೆಪಿ ಗೆಲ್ಲುತ್ತದೆ ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವಡೇಕರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Last Updated : Mar 2, 2019, 07:40 PM IST
2019 ರ ಲೋಕಸಭಾ ಚುನಾವಣೆಯಲ್ಲಿ ಹಿಂದಿಗಿಂತಲೂ ಹೆಚ್ಚು ಸ್ಥಾನಗಳನ್ನು ಬಿಜೆಪಿ ಗೆಲ್ಲುತ್ತದೆ-ಜಾವಡೇಕರ್ title=
file photo

ಜೈಪುರ್: 2014 ರ ಲೋಕಸಭಾ ಚುನಾವಣೆಯಲ್ಲಿ ಜಯಗಳಿಸಿದಕ್ಕಿಂತ ಹೆಚ್ಚು ಸ್ಥಾನಗಳನ್ನು 2019 ರ ಚುನಾವಣೆಯಲ್ಲಿ  ಬಿಜೆಪಿ ಗೆಲ್ಲುತ್ತದೆ ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವಡೇಕರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 282 ಸ್ಥಾನಗಳನ್ನು ಗೆದ್ದಿತ್ತು ಮತ್ತು ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಸ್ಥಾನಗಳ ಸಂಖ್ಯೆ ಹೆಚ್ಚಾಗುವ ಭರವಸೆಯವನ್ನು ನಾವು  ಹೊಂದಿದ್ದೇವೆ ಎಂದು ಜಾವಡೇಕರ್ ತಿಳಿಸಿದ್ದಾರೆ. ಭಯೋತ್ಪಾದನೆ ತಕ್ಕ ಉತ್ತರ ನೀಡುವಲ್ಲಿ ಹಾಗೂ ದೇಶಕ್ಕೆ ಸಮರ್ಥ ನಾಯಕತ್ವವನ್ನು ಮೋದಿ ಸರಕಾರ ನೀಡಲಿದೆ ಎಂದು ಅವರು ಹೇಳಿದರು. ಚುನಾವಣಾ ಪೂರ್ವ ರ್ಯಾಲಿಯಲ್ಲಿ ಭಾಗವಹಿಸಲು ಜಾವಡೆಕರ್ ಜೈಪುರಕ್ಕೆ ಆಗಮಿಸಿದ್ದರು

ಇದೇ ವೇಳೆ ರಾಜಸ್ಥಾನ ಮಾಜಿ ಸಚಿವ ಅರುಣ್ ಚತುರ್ವೇದಿ ಅವರು ಜಾವಡೆಕರ್ ಅವರಿಗೆ ಸಾಥ್ ನೀಡಿದರು. ರಾಜಸ್ತಾನದಲ್ಲಿ ಬಿಜೆಪಿ ರಾಜ್ಯಾದ್ಯಂತ ಕಮಲ್ ವಿಜಯ ಸಂಕಲ್ಪ ವಾಹನ್ ರ್ಯಾಲಿ' ಎನ್ನುವ ಬೈಕ್ ರ್ರ್ಯಾಲಿಯನ್ನು ಆಯೋಜಿಸಿದೆ.ಮಾಹಿತಿ ಮತ್ತು ಪ್ರಸಾರ ಕೇಂದ್ರ ಸಚಿವ ರಾಜ್ಯವರ್ಧನ್ ರಾಥೋಡ್ ಮತ್ತು ಇತರ ನಾಯಕರು ಇತರ ಭಾಗಗಳಲ್ಲಿ ರ್ಯಾಲಿಗಳಲ್ಲಿ ಭಾಗವಹಿಸಿದರು.