ಬೆಂಗಳೂರು: ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಯಾರು ಅನ್ನೋ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಕರ್ನಾಟಕ ಮುಂದಿನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ನಿಂದ ಅಧಿಕೃತ ಘೋಷಣೆಯೊಂದೇ ಬಾಕಿ ಉಳಿದಿದೆ.
ಇದನ್ನೂ ಓದಿ: ಕಾಂಗ್ರೆಸ್ ಉಚಿತ ಭರವಸೆ: ನಾವು ಬಿಲ್ ಕಟ್ಟಲ್ಲವೆಂದು ಬೆಸ್ಕಾಂ ಮೀಟರ್ ರೀಡರ್ ಗೆ ಗ್ರಾಮಸ್ಥರ ಆವಾಜ್!
Breaking: #Siddaramaiah to be the Chief Minister of #Karnataka. KPCC President @DKShivakumar lost out as majority of MLAs voted in favour of Siddaramiah.
— Pramod Kumar Singh (@SinghPramod2784) May 15, 2023
ರಾಜ್ಯದಲ್ಲಿ ಕಾಂಗ್ರೆಸ್ ಬಹುಮತ ಸಾಧಿಸಲು ನಾನು ಶ್ರಮಿಸಿದ್ದು, ನಾನೇ ಮುಖ್ಯಮಂತ್ರಿಯಾಗಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪಟ್ಟು ಹಿಡಿದಿದ್ದರು. ಇತ್ತ ಸಿದ್ದರಾಮಯ್ಯನವರು ಸಹ ಸಿಎಂ ನಾನೇ ಆಗಬೇಕೆಂದು ಪಟ್ಟು ಹಿಡದು ಕುಳಿತಿದ್ದರು. ಅದರಂತೆ ಇಬ್ಬರೂ ನಾಯಕರು ಕಾಂಗ್ರೆಸ್ ಹೈಕಮಾಂಡ್ ಮೇಲೆ ತೀವ್ರ ಒತ್ತಡ ಹೇರಿದ್ದರು.
ದೆಹಲಿಯಲ್ಲಿ ಸಭೆ ಸೇರಿದ ಕಾಂಗ್ರೆಸ್ ವರಿಷ್ಠರು ಅಂತಿಮವಾಗಿ ಸಿದ್ದರಾಮಯ್ಯನವರನ್ನು ಮುಂದಿನ ಮುಖ್ಯಮಂತ್ರಿ ಎಂದು ಆಯ್ಕೆ ಮಾಡಿದ್ದಾರೆಂದು ತಿಳಿದುಬಂದಿದೆ. ಇದೀಗ ಅಧಿಕೃತ ಘೋಷಣೆಯೊಂದೇ ಬಾಕಿ ಉಳಿದಿದೆ.
ಇದನ್ನೂ ಓದಿ: ನಾನು ಪೂಜೆ-ಪುನಸ್ಕಾರ ಎಲ್ಲಾ ಮಾಡಬೇಕಿದೆ: ಡಿ.ಕೆ.ಶಿವಕುಮಾರ್
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.