Karnataka New Chief Minister: ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಬಗ್ಗೆ ಕಾಂಗ್ರೆಸ್ ನಲ್ಲಿ ಜಟಾಪಟಿ ನಡೆಯುತ್ತಿದೆ. ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರೇಸ್ ನಲ್ಲಿ ಮುನ್ನಡೆ ಸಾಧಿಸಿದ್ದಾರೆ. ಹೊಸ ಮುಖ್ಯಮಂತ್ರಿ ಆಯ್ಕೆಗೆ ಸಂಬಂಧಿಸಿದಂತೆ ದೇಶದ ಅತ್ಯಂತ ಹಳೆಯ ಪಕ್ಷದಲ್ಲಿ ಬ್ಯಾಕ್ ಟು ಬ್ಯಾಕ್ ಸಭೆಗಳು ನಡೆಯುತ್ತಿದೆ.
ಆದರೆ ಕಳೆದ ದಿನ ಡಿಕೆ ಶಿವಕುಮಾರ್ ದೆಹಲಿಗೆ ತೆರಳಬೇಕಿತ್ತು. ಅನಾರೋಗ್ಯದ ಹಿನ್ನೆಲೆಯಲ್ಲಿ ಇಂದು ಪ್ರಯಾಣ ಬೆಳೆಸಲಿದ್ದಾರೆ ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ: Karnataka New CM Oath Taking: ಮೇ 17 ಅಥವಾ 18ರಂದು ನೂತನ ಸಿಎಂ ಪ್ರಮಾಣವಚನ?
ಮುಖ್ಯಮಂತ್ರಿ ಸ್ಥಾನಕ್ಕಾಗಿ ತೀವ್ರ 'ಲಾಬಿ'ಯ ನಡುವೆ, ಕಾಂಗ್ರೆಸ್ ಹೈಕಮಾಂಡ್, ಸೋಮವಾರ ಶಿವಕುಮಾರ್ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಚರ್ಚೆಗಾಗಿ ದೆಹಲಿಗೆ ಕರೆದಿತ್ತು. ಈ ಕಾರಣದಿಂದ ಸಿದ್ದರಾಮಯ್ಯ ಸೋಮವಾರ ಮಧ್ಯಾಹ್ನ ದೆಹಲಿಗೆ ಬಂದಿಳಿದಿದ್ದಾರೆ. ಆದರೆ ಶಿವಕುಮಾರ್ ಕೊನೆಯ ಕ್ಷಣದಲ್ಲಿ ಆರೋಗ್ಯ ಕಾರಣಗಳನ್ನು ಉಲ್ಲೇಖಿಸಿ ತಮ್ಮ ಭೇಟಿಯನ್ನು ರದ್ದುಗೊಳಿಸಿದ್ದಾರೆ.
ನಂತರ ಸಂಜೆ ಬೆಂಗಳೂರು ಗ್ರಾಮಾಂತರದ ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಅವರು ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರನ್ನು ಅವರ ನಿವಾಸದಲ್ಲಿ ಭೇಟಿಯಾದರು. ಈ ಸಂದರ್ಭದಲ್ಲಿ ಡಿಕೆ ಶಿವಕುಮಾರ್ ಅವರು ಮಂಗಳವಾರ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಡಿಕೆ ಸುರೇಶ್ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ಹೇಳಿದರು.
ಕರ್ನಾಟಕದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್ಪಿ) ನಾಯಕನನ್ನು ಆಯ್ಕೆ ಮಾಡಲು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಹಿರಿಯ ನಾಯಕರಾದ ಸುಶೀಲ್ ಕುಮಾರ್ ಶಿಂಧೆ, ಜಿತೇಂದ್ರ ಸಿಂಗ್ ಮತ್ತು ದೀಪಕ್ ಬಬಾರಿಯಾ ಅವರನ್ನು ವೀಕ್ಷಕರನ್ನಾಗಿ ನೇಮಿಸಿದ್ದರು. ಮೂವರು ಮೇಲ್ವಿಚಾರಕರು ಹೊಸದಾಗಿ ಆಯ್ಕೆಯಾಗಿರುವ ಪಕ್ಷದ ಶಾಸಕರೊಂದಿಗೆ ಪ್ರತ್ಯೇಕವಾಗಿ ಮಾತನಾಡಿ ಅವರ ಅಭಿಪ್ರಾಯ ಸಂಗ್ರಹಿಸಿದ್ದಾರೆ.
ಮೂವರು ವೀಕ್ಷಕರು ಸೋಮವಾರ ಸಂಜೆ ಖರ್ಗೆ ಅವರ ನಿವಾಸಕ್ಕೆ ತಲುಪಿದ್ದು, ನಂತರ ಸುದೀರ್ಘ ಸಭೆ ನಡೆದಿದೆ. ಈ ಸಭೆಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಮತ್ತು ಪಕ್ಷದ ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಉಪಸ್ಥಿತರಿದ್ದರು. ಸಭೆ ಮುಗಿದ ನಂತರ ಮಾತನಾಡಿದ ಸುರ್ಜೇವಾಲಾ ಅವರು, “ವೀಕ್ಷಕರು ಕಾಂಗ್ರೆಸ್ ಅಧ್ಯಕ್ಷರಿಗೆ ತಮ್ಮ ವರದಿಯನ್ನು ಸಲ್ಲಿಸಿದ್ದಾರೆ. ಬಳಿಕ ಪಕ್ಷದ ರಾಜ್ಯ ನಾಯಕರು ಮತ್ತು ಪಕ್ಷದ ಇತರ ಹಿರಿಯ ನಾಯಕರೊಂದಿಗೆ ಸಮಾಲೋಚಿಸಿ ನಿರ್ಧಾರ ತೆಗೆದುಕೊಳ್ಳುತ್ತಾರೆ” ಎಂದು ಹೇಳಿದರು.
ಕರ್ನಾಟಕದ 6.5 ಕೋಟಿ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸಲು ಕಾಂಗ್ರೆಸ್ ನಿರ್ಧರಿಸಿದೆ ಎಂದು ಅವರು ಹೇಳಿದರು. ಶಾಸಕರ ಅಭಿಪ್ರಾಯ ತಿಳಿಯಲು ಬೆಂಗಳೂರಿಗೆ ತೆರಳಿದ್ದ ಪಕ್ಷದ ಮೂವರು ವೀಕ್ಷಕರು ಸೋಮವಾರ ದೆಹಲಿಗೆ ಮರಳಿದ್ದಾರೆ. ಶಾಸಕರ ಅಭಿಪ್ರಾಯ ತಿಳಿಯಲು ಗುಪ್ತ ಮತದಾನವೂ ನಡೆದಿದೆ.
ಶಾಸಕಾಂಗ ಪಕ್ಷದ ಸಭೆಯ ವೇಳೆ ವೀಕ್ಷಕರೊಂದಿಗಿನ ಸಭೆಯಲ್ಲಿ ಕೆಲವು ಶಾಸಕರು ಮುಖ್ಯಮಂತ್ರಿ ಸ್ಥಾನದ ಬಗ್ಗೆ ಒಲವು ವ್ಯಕ್ತಪಡಿಸಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. ಮುಖಂಡರ ಆಯ್ಕೆಗೆ ಕೈ ಎತ್ತುವ ಮೂಲಕ ತೀರ್ಮಾನ ಕೈಗೊಳ್ಳಲು ಶಾಸಕರ ಒಂದು ವರ್ಗ ಒಲವು ತೋರಿದ್ದರೂ ಪಕ್ಷದಲ್ಲಿ ಪಕ್ಷಾತೀತವಾಗಿ ಒಡಕು ಮೂಡುವ ಪರಿಸ್ಥಿತಿ ನಿರ್ಮಾಣವಾಗಬಹುದೆಂಬ ಕಾರಣಕ್ಕೆ ಈ ನಿರ್ಧಾರ ಕೈಗೊಂಡಿಲ್ಲ ಎನ್ನಲಾಗುತ್ತಿದೆ.
ಶಾಸಕಾಂಗ ಪಕ್ಷದ ನೂತನ ನಾಯಕರನ್ನು ಪಕ್ಷ ಆಯ್ಕೆ ಮಾಡುವ ಮುನ್ನ ಎಲ್ಲ ಶಾಸಕರ ಅಭಿಪ್ರಾಯ ಪಡೆಯಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ: ಈ ಇಬ್ಬರು ಕಿಲಾಡಿಗಳ ದರ್ಬಾರ್! 10 ವರ್ಷಗಳ ಬಳಿಕ ಐಸಿಸಿ ಟ್ರೋಫಿ ಗೆಲ್ಲುವುದು ಖಚಿತ ಅನ್ಸುತ್ತೆ!
ರಾಜ್ಯದಲ್ಲಿ 224 ಸದಸ್ಯ ಬಲದ ವಿಧಾನಸಭೆಗೆ ಮೇ 10 ರಂದು ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳಲ್ಲಿ ಭರ್ಜರಿ ಗೆಲುವು ಸಾಧಿಸಿದರೆ, ಆಡಳಿತಾರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ನೇತೃತ್ವದ ಜನತಾ ದಳ (ಜಾತ್ಯತೀತ) ಕ್ರಮವಾಗಿ 66 ಸ್ಥಾನಗಳು ಮತ್ತು 19 ಸ್ಥಾನಗಳನ್ನು ಗೆದ್ದಿವು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ