ದಿಟ್ಟ ನಿರ್ಧಾರ ತೆಗೆದುಕೊಳ್ಳಲು ಸಹಕಾರ ನೀಡಿದ್ದಕ್ಕೆ ಧನ್ಯವಾದ: ಹಂಗಾಮಿ ಸಿಎಂ ಬಸವರಾಜ ಬೊಮ್ಮಾಯಿ‌

ಬೆಂಗಳೂರು: ನನ್ನ ಆಡಳಿತ ಅವಧಿಯಲ್ಲಿ ದಿಟ್ಟ ನಿರ್ಧಾರ ತೆಗೆದುಕೊಳ್ಳಲು ಸಹಕಾರ ನೀಡಿರುವುದಕ್ಕೆ ಧನ್ಯವಾದಗಳು  ಎಂದು ಹಂಗಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು.  

Written by - Zee Kannada News Desk | Last Updated : May 16, 2023, 01:34 PM IST
  • ಗೃಹ ಕಚೇರಿ ಕೃಷ್ಣಾದಲ್ಲಿ ರಾಜ್ಯ ಸರ್ಕಾರದ ಅಧಿಕಾರಗಳಿಗೆ ಚಹಾ ಕೂಟ ಏರ್ಪಡಿಸಿ ಅನೌಪಚಾರಿಕವಾಗಿ ಮಾತನಾಡಿದರು.
  • ನಾವು ಸಂವಿಧಾನ ಒಪ್ಪಿಕೊಂಡಿದ್ದೇವೆ.
  • ಆಡಳಿತದಲ್ಲಿ ಕಾರ್ಯಾಂಗ, ಶಾಸಕಾಂಗ ಎರಡೂ ಪ್ರಮುಖ ಪಾತ್ರ ವಹಿಸುತ್ತವೆ.
ದಿಟ್ಟ ನಿರ್ಧಾರ ತೆಗೆದುಕೊಳ್ಳಲು ಸಹಕಾರ ನೀಡಿದ್ದಕ್ಕೆ ಧನ್ಯವಾದ: ಹಂಗಾಮಿ ಸಿಎಂ ಬಸವರಾಜ ಬೊಮ್ಮಾಯಿ‌ title=

CM Bommai : ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ರಾಜ್ಯ ಸರ್ಕಾರದ ಅಧಿಕಾರಗಳಿಗೆ ಚಹಾ ಕೂಟ ಏರ್ಪಡಿಸಿ ಅನೌಪಚಾರಿಕವಾಗಿ ಮಾತನಾಡಿದರು.

ನಾವು ಸಂವಿಧಾನ ಒಪ್ಪಿಕೊಂಡಿದ್ದೇವೆ. ಆಡಳಿತದಲ್ಲಿ ಕಾರ್ಯಾಂಗ, ಶಾಸಕಾಂಗ ಎರಡೂ ಪ್ರಮುಖ ಪಾತ್ರ ವಹಿಸುತ್ತವೆ. ನಾವು ಅದರ ಅಡಿಯಲ್ಲಿ ಕೆಲಸ ಮಾಡುತ್ತಿದ್ದೇವೆ. ನಾನು ಅಧಿಕಾರಕ್ಕೆ ಬಂದಾಗ ಕೋವಿಡ್, ಪ್ರವಾಹ ಸಂದರ್ಭ ಎದುರಾಯಿತು. ಎಲ್ಲವನ್ನೂ ಯಶಸ್ವಿಯಾಗಿ ನಿಭಾಯಿಸಿದ್ದೇವೆ. ನಮ್ಮ ಆಡಳಿತದಲ್ಲಿ ಯಾವುದೇ ಹಿಂಸಾತ್ಮಕ ಚಟುವಟಿಕೆಗಳು ನಡೆಯಲಿಲ್ಲ. ಚುನಾವಣೆ ಸಂದರ್ಭದಲ್ಲಿಯೂ ಯಾವುದೇ ಅಹಿತಕರ ಘಟನೆ ನಡೆಯದಿಲ್ಲ.  ಗೃಹ ಇಲಾಖೆಗೆ ಅಭಿನಂದನೆ ಸಲ್ಲಿಸುತ್ತೇನೆ‌ ಎಂದರು.

ಇದನ್ನೂ ಓದಿ-Karnataka CM: ಯಾರಾಗ್ತಾರೆ ಕರುನಾಡ ಮುಂದಿನ ಸಿಎಂ? ಇಂದು ಹೊರಬೀಳಲಿದೆ ಮುಖ್ಯಮಂತ್ರಿ ಹೆಸರು!

ನಾವು ಅನೇಕ ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿದ್ದೇವೆ. ಮೀಸಲಾತಿ ಹೆಚ್ಚಳ, ಸರ್ಕಾರಿ ನೌಕರ ಸವಾಲು, ಹೊಸ ನೀತಿಗಳನ್ನು ಜಾರಿಗೆ ತಂದಿದ್ದೇವೆ. ಉದ್ಯೊಗ ನೀತಿ, ಕೈಗಾರಿಕಾ ನೀತಿ ಎಲ್ಲ ಹೊಸ ಯೊಜನೆಗಳ ತರಲು ಅಧಿಕಾರಿಗಳ ಪಾತ್ರ ಮಹತ್ವದ್ದು, ನಿಮ್ಮ ಸಹಕಾರ ಅತ್ಯಂತ ಮುಖ್ಯವಾಗಿತ್ತು ಎಂದರು.

ನಾವು ಐದು ವರ್ಷಕ್ಕೆ ಬರುವವರು, ನಿವು ಸುದೀರ್ಘ ಅಧಿಕಾರದಲ್ಲಿ ಇರುವವರು. ರಾಜ್ಯದ ಏಳಿಗೆಗೆ ಎಲ್ಲರೂ ಶ್ರಮಿಸೋಣ. ಕೆಲಸ ವೇಗವಾಗಿ ಆಗಲಿ ಅಂತ ನಾನು ಗಟ್ಟಿ ಧನಿಯಲ್ಲಿ ಹೇಳಿರಬಹುದು. ಆದರೆ ಯಾವುದೇ ವಯಕ್ತಿಕ ಅಭಿಪ್ರಾಯ ಇರಲಿಲ್ಲ ಎಂದರು.

ಇದನ್ನೂ ಓದಿ-Karnataka New CM Oath Taking: ಮೇ 17 ಅಥವಾ 18ರಂದು ನೂತನ ಸಿಎಂ ಪ್ರಮಾಣವಚನ?

ಕರ್ನಾಟಕ ಹಲವಾರು ವಿಚಾರದಲ್ಲಿ ಮುಂಚೂಣಿಯಲ್ಲಿದೆ‌. ಜಿಎಸ್ಟಿಯಲ್ಲಿ ಮುಂಚೂಣಿಯಲ್ಲಿದ್ದೇವೆ. ಬಂಡವಾಳ ಸೆಳೆಯುವಲ್ಲಿ ನಂಬರ್ ಒನ್ ಸ್ಥಾನದಲ್ಲಿದ್ದೇವೆ‌. ಕರ್ನಾಟಕದ ಅಭಿವೃದ್ಧಿಗೆ ಅಧಿಕಾರಿಗಳ ಪಾತ್ರ ಮುಖ್ಯವಾಗಿದ್ದು, ರಾಜ್ಯದ ಅಭಿವೃದ್ಧಿಗೆ ಎಲ್ಲರೂ ಕೆಲಸ ಮಾಡೋಣ  ಎಂದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News