ಲಕ್ನೋ: ಇಲ್ಲಿನ ಅಟಲ್ ಬಿಹಾರಿ ವಾಜಪೇಯಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟೂರ್ನಿಯ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವು ಮುಂಬೈ ಇಂಡಿಯನ್ಸ್ ವಿರುದ್ಧ ಐದು ರನ್ ಗಳ ರೋಚಕ ಗೆಲುವು ಸಾಧಿಸಿದೆ.
ಟಾಸ್ ಗೆದ್ದು ಲಕ್ನೋ ತಂಡಕ್ಕೆ ಮುಂಬೈ ಇಂಡಿಯನ್ಸ್ ಬ್ಯಾಟಿಂಗ್ ಅವಕಾಶವನ್ನು ನೀಡಿತು.ಈ ಅವಕಾಶವನ್ನು ಬಳಸಿಕೊಂಡ ಲಕ್ನೋ ತಂಡವು 20 ಓವರ್ ಗಳಲ್ಲಿ ಮೂರು ವಿಕೆಟ್ ನಷ್ಟಕ್ಕೆ 177 ರನ್ ಗಳಿಸಿತು.ಲಕ್ನೋ ತಂಡದ ಪರವಾಗಿ ಸ್ಪೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದ ಸ್ಟೋನಿಸ್ ಕೇವಲ 47 ಎಸೆತಗಳಲ್ಲಿ ಎಂಟು ಸಿಕ್ಸರ್ ಹಾಗೂ ನಾಲ್ಕು ಬೌಂಡರಿಗಳ ನೆರವಿನೊಂದಿಗೆ ಭರ್ಜರಿ 89 ರನ್ ಗಳಿಸಿದರು.ಸಾಥ್ ನೀಡಿದ ಕ್ರುನಾಲ್ ಪಾಂಡ್ಯ 49 ರನ್ ಗಳಿಸುವ ಮೂಲಕ ತಂಡಕ್ಕೆ ಆಸರೆಯಾದರು.
.@MStoinis notched his highest IPL score and powered @LucknowIPL to a huge first-innings total 👌🏻👌🏻
He receives the Player of the Match award 👏🏻👏🏻
Scorecard ▶️ https://t.co/yxOTeCROIh #TATAIPL | #LSGvMI pic.twitter.com/HgR3u5VwjP
— IndianPremierLeague (@IPL) May 16, 2023
ಇದನ್ನೂ ಓದಿ: Horticulture training: ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ
ಲಕ್ನೋ ತಂಡವು ನೀಡಿದ 178 ರನ್ ಗಳ ಗೆಲುವಿನ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ ತಂಡವು ಉತ್ತಮ ಆರಂಭವನ್ನು ಕಂಡಿತು.ರೋಹಿತ್ ಶರ್ಮಾ 37, ಹಾಗೂ ಇಶಾನ್ ಕಿಶನ್ 59 ರನ್ ಗಳ ನೆರವಿನಿಂದ ಮೊದಲ ವಿಕೆಟ್ ಗೆ 90 ರನ್ ಗಳ ಜೊತೆಯಾಟವಾಡುವ ಮೂಲಕ ಪಂದ್ಯವು ಮುಂಬೈ ಇಂಡಿಯನ್ಸ್ ಪರವಾಗಿ ವಾಲುವಂತೆ ಮಾಡಿದ್ದರು.ಆದರೆ ಅಂತಿಮವಾಗಿ ಮುಂಬೈ ತಂಡವು 20 ಓವರ್ ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 172 ರನ್ ಗಳನ್ನು ಮಾತ್ರ ಗಳಿಸುವಲ್ಲಿ ಯಶಸ್ವಿಯಾಯಿತು.ಆ ಮೂಲಕ ಅದು ಐದು ರನ್ ಗಳ ಅಂತರದಿಂದ ಸೋಲನ್ನು ಅನುಭವಿಸಿತು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ