ಬೆಂಗಳೂರು : ಮಾಜಿ ಸಿಎಂ ಸಿದ್ದರಾಮಯ್ಯ ಕುರಿತು ಮಾಜಿ ಸಚಿವ ಕೆ. ಸುಧಾಕರ್ ನೀಡಿರುವ ಹೇಳಿಕೆ ಕುರಿತು ಮಾಜಿ ಶಾಸಕ ಎಂಟಿಬಿ ನಾಗರಾಜ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಸುಧಾಕರ್ ರವರು ಚುನಾವಣೆಯಲ್ಲಿ ಸೋತ ನಂತರ ಭ್ರಮನಿರಸನರಾಗಿ ಮಾತನಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ಇಂದು ಬೆಳಿಗ್ಗೆ ಡಾ. ಕೆ. ಸುಧಾಕರ್ ಅವರು, 2018ರಲ್ಲಿ ಅಂದಿನ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ನಮಗಾಗುತ್ತಿದ್ದ ಅನ್ಯಾಯದ ಬಗ್ಗೆ ಹೇಳಿಕೊಳ್ಳಲು ಶಾಸಕರುಗಳು ಸಮನ್ವಯ ಸಮಿತಿ ಅಧ್ಯಕ್ಷರಾಗಿದ್ದ ಮಾನ್ಯ ಸಿದ್ದರಾಮಯ್ಯನವರ ಬಳಿ ಹೋದಾಗಲೆಲ್ಲ ಈ ಸರ್ಕಾರದಲ್ಲಿ ನನ್ನದೇ ಏನು ನಡೆಯುತ್ತಿಲ್ಲ, ನನ್ನ ಕ್ಷೇತ್ರದ, ನನ್ನ ಜಿಲ್ಲೆಯ ಕೆಲಸಗಳೇ ಆಗುತ್ತಿಲ್ಲ ಎಂದು ಹೇಳುತ್ತಿದ್ದರು.
ಇದನ್ನೂ ಓದಿ: Karnataka CM Decision: ಸಿದ್ದರಾಮಯ್ಯ ಸಿಎಂ ಆಗೋದು ನನಗೆ ಒಪ್ಪಿಗೆ ಇಲ್ಲ- ಡಿಕೆಶಿ
2018ರಲ್ಲಿ ಅಂದಿನ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ನಮಗಾಗುತ್ತಿದ್ದ ಅನ್ಯಾಯದ ಬಗ್ಗೆ ಹೇಳಿಕೊಳ್ಳಲು ಶಾಸಕರುಗಳು ಸಮನ್ವಯ ಸಮಿತಿ ಅಧ್ಯಕ್ಷರಾಗಿದ್ದ ಮಾನ್ಯ ಸಿದ್ದರಾಮಯ್ಯನವರ ಬಳಿ ಹೋದಾಗಲೆಲ್ಲ ಈ ಸರ್ಕಾರದಲ್ಲಿ ನನ್ನದೇ ಏನು ನಡೆಯುತ್ತಿಲ್ಲ, ನನ್ನ ಕ್ಷೇತ್ರದ, ನನ್ನ ಜಿಲ್ಲೆಯ ಕೆಲಸಗಳೇ ಆಗುತ್ತಿಲ್ಲ ಎಂದು ಹೇಳುತ್ತಿದ್ದರು.
1/3
— Dr Sudhakar K (@mla_sudhakar) May 17, 2023
2019ರ ಲೋಕಸಭೆ ಚುನಾವಣೆವರೆಗೂ ಸಹಿಸಿಕೊಳ್ಳಿ, ಲೋಕಸಭೆ ಚುನಾವಣೆ ಮುಗಿದ ನಂತರ ಯಾವುದೇ ಕಾರಣಕ್ಕೂ ಒಂದು ದಿವಸವೂ ಮಾನ್ಯ ಕುಮಾರಸ್ವಾಮಿ ಅವರ ನೇತೃತ್ವದ ಈ ಸಮ್ಮಿಶ್ರ ಸರ್ಕಾರ ಇರಲು ಬಿಡುವುದಿಲ್ಲ ಎಂದು ಶಾಸಕರುಗಳಿಗೆ ಸಮಾಧಾನ ಮಾಡುತ್ತಿದ್ದರು. ನಮ್ಮ ಕ್ಷೇತ್ರಗಳಲ್ಲಿ ನಮ್ಮನ್ನು ನಂಬಿದ ಕಾರ್ಯಕರ್ತರನ್ನ, ಮುಖಂಡರನ್ನ ಉಳಿಸಿಕೊಳ್ಳಲು ದೊಡ್ಡ ರಿಸ್ಕ್ ತೆಗೆದುಕೊಂಡು ರಾಜೀನಾಮೆ ಕೊಟ್ಟು ಮತ್ತೊಮ್ಮೆ ಜನರಿಂದ ಆರಿಸಿ ಬಂದು ಮಂತ್ರಿಗಳಾದೆವು. ನಮ್ಮ ನಡೆಯಲ್ಲಿ ಮಾನ್ಯ ಸಿದ್ದರಾಮಯ್ಯನವರ ಪ್ರೇರಣೆ, ಪರೋಕ್ಷ ಅಥವಾ ಅಪರೋಕ್ಷ ಪಾತ್ರ ಇಲ್ಲವೆಂದು ಸಿದ್ದರಾಮಯ್ಯನವರು ನಿರಾಕರಿಸಲು ಸಾಧ್ಯವೇ? ಎಂದು ಟ್ಟೀಟ್ ಮಾಡಿದ್ದರು.
ಮಾನ್ಯ ಸಿದ್ದರಾಮಯ್ಯ ರವರನ್ನು ನಾನು ಕೂಡ ಹಲವಾರು ಬಾರಿ ಭೇಟಿ ಮಾಡಿ ಸಮ್ಮಿಶ್ರ ಸರ್ಕಾರದಲ್ಲಿ ನಮ್ಮ ಕ್ಷೇತ್ರದಲ್ಲಿ ಹಾಗೂ ನಮ್ಮ ಉಸ್ತುವಾರಿ ಜಿಲ್ಲೆಗಳಲ್ಲಿ ಏನು ಕೆಲಸ ಕಾರ್ಯಗಳು ಆಗುತ್ತಿಲ್ಲವೆಂದು ಹೇಳಿಕೊಂಡಾಗ ಲೋಕಸಭೆ ಚುನಾವಣೆವರೆಗೆ ಸುಮ್ಮನಿರಿ ಎಂದು ಹೇಳಿದ್ದರು ಇದು ಸತ್ಯ.
— MTB Nagaraj (@MTB_Nagaraj) May 17, 2023
ಇನ್ನು ಸುಧಾಕರ್ ಮಾತಿಗೆ ಟ್ಟೀಟ್ ಮೂಲಕವೇ ಎಂಟಿಬಿ ನಾಗರಾಜ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಮಾನ್ಯ ಸಿದ್ದರಾಮಯ್ಯ ರವರನ್ನು ನಾನು ಕೂಡ ಹಲವಾರು ಬಾರಿ ಭೇಟಿ ಮಾಡಿ ಸಮ್ಮಿಶ್ರ ಸರ್ಕಾರದಲ್ಲಿ ನಮ್ಮ ಕ್ಷೇತ್ರದಲ್ಲಿ ಹಾಗೂ ನಮ್ಮ ಉಸ್ತುವಾರಿ ಜಿಲ್ಲೆಗಳಲ್ಲಿ ಏನು ಕೆಲಸ ಕಾರ್ಯಗಳು ಆಗುತ್ತಿಲ್ಲವೆಂದು ಹೇಳಿಕೊಂಡಾಗ ಲೋಕಸಭೆ ಚುನಾವಣೆವರೆಗೆ ಸುಮ್ಮನಿರಿ ಎಂದು ಹೇಳಿದ್ದರು ಇದು ಸತ್ಯ.
ಇದನ್ನೂ ಓದಿ: ನನಗೂ ಬೇಡ, ಸಿದ್ದರಾಮಯ್ಯಗೂ ಬೇಡ; ದಲಿತ ಕಾರ್ಡ್ ಪ್ರಯೋಗಿಸಿದ ಡಿಕೆಶಿ!
ಮಾಜಿ ಸಚಿವರಾದ ಸುಧಾಕರ್ ರವರು ಇಂದು ಮಾನ್ಯ ಸಿದ್ದರಾಮಯ್ಯ ರವರ ಬಗ್ಗೆ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಮಾತುಗಳು ಸತ್ಯಕ್ಕೆ ದೂರವಾಗಿದ್ದು, ಸುಧಾಕರ್ ರವರು ಚುನಾವಣೆಯಲ್ಲಿ ಸೋತ ನಂತರ ಭ್ರಮನಿರಸನರಾಗಿ ಈ ಮಾತುಗಳನ್ನು ಹೇಳಿದ್ದಾರೆ. ಹಾಗಾದರೆ, ಇಷ್ಟು ದಿನ ಏಕೆ ಸುಮ್ಮನಿದ್ದರು? ಬಿಜೆಪಿ ಸೇರಲು ಸಿದ್ದರಾಮಯ್ಯರವರ ಪ್ರೇರಣೆ, ಪರೋಕ್ಷ ಅಥವಾ ಅಪರೋಕ್ಷ ಪಾತ್ರ ಇತ್ತೆಂದು ಸುಧಾಕರ್ ರವರು ತಮ್ಮ ಮನೆ ದೇವರ ಮೇಲೆ ಪ್ರಮಾಣ ಮಾಡಿ ಹೇಳುವರೆ? ಇಷ್ಟು ದಿನ ಮೌನವಾಗಿದ್ದು?ಈಗ ಇದರ ಪ್ರಸ್ತಾಪದ ಮರ್ಮವಾದರೂ ಏನು? ಎಂದು ಪ್ರಶ್ನೆ ಮಾಡಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ