ಬೆಂಗಳೂರು : ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಸಿದ್ದರಾಮಯ್ಯನವರು ಅವಿರೋಧವಾಗಿ ಆಯ್ಕೆಯಾದ ಬೆನ್ನಲ್ಲೆ, ರಾಜ್ಯಭವನಕ್ಕೆ ತೆರಳಿ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿದ್ದಾರೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ.
ಇಂದು ಕೆಪಿಸಿಸಿ ಕಚೇರಿಯಲ್ಲಿರುವ ಇಂದಿರಾ ಭವನದಲ್ಲಿ ನಡೆದ ಸಿಎಲ್ಪಿ ಸಭೆಯಲ್ಲಿ ಸಿದ್ದರಾಮಯ್ಯ ಅವರು ಸಿಎಲ್ಪಿ ನಾಯಕರಾಗಿ ಆಯ್ಕೆಯಾದರು. ಸಭೆ ಮುಕ್ತಾಯದ ನಂತರ ಕಾಂಗ್ರೆಸ್ ನಾಯಕರು ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾದರು. ಈ ವೇಳೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸೇರಿದಂತೆ ಇತರೆ ಕೈ ನಾಯಕರು ಉಪಸ್ಥಿತರಿದ್ದರು.
ಇದನ್ನೂ ಓದಿ: ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಸಿದ್ದರಾಮಯ್ಯ ಆಯ್ಕೆ..!
#WATCH | Bengaluru: Karnataka CM-designate Siddaramaiah and Deputy CM-designate DK Shivakumar met Governor Thaawarchand Gehlot today to stake claim to form the Government
The oath ceremony will take place at 12.30 pm on 20th May in Kanteerava Stadium, Bengaluru.
(Video Source:… pic.twitter.com/zwSoGlEOm7
— ANI (@ANI) May 18, 2023
ಸಿಎಂ, ಡಿಸಿಎಂಗೆ ಶುಭ ಕೋರಿದ ಮಾಜ ಮುಖ್ಯಮಂತ್ರಿ ಬೊಮ್ಮಾಯಿ : ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಡಿ.ಕೆ. ಶಿವಕುಮಾರ್ ಅವರಿಗೆ ಹಂಗಾಮಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಅಭಿನಂದನೆಗಳನ್ನು ತಿಳಿಸಿದ್ದಾರೆ. ನೀವು ಕರ್ನಾಟಕದ ಜನತೆಯ ಆಶೋತ್ತರಗಳನ್ನು ಈಡೇರಿಸುವಂತಾಗಲಿ ಎಂದು ಶುಭ ಹಾರೈಸಿದ್ದಾರೆ.
Karnataka Governor Thaawarchand Gehlot invites CM-designate Siddaramaiah and Deputy CM-designate DK Shivakumar to take oath along with team members. The oath ceremony will take place at 12.30 pm on 20th May in Kanteerava Stadium, Bengaluru. https://t.co/PcquSva4no pic.twitter.com/A0uIMrBJD4
— ANI (@ANI) May 18, 2023
ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಅವರಿಗೆ ಶುಭ ಕೋರಿದ ಬಿಎಸ್ವೈ : ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿ, ರಾಜ್ಯದ ಮುಖ್ಯಮಂತ್ರಿಗಳಾಗಿ ಅಧಿಕಾರ ವಹಿಸಿಕೊಳ್ಳಲಿರುವ ಸಿದ್ದರಾಮಯ್ಯ ನವರಿಗೆ ಹಾಗೂ ರಾಜ್ಯದ ಉಪಮುಖ್ಯಮಂತ್ರಿಗಳಾಗಿ ಅಧಿಕಾರ ಸ್ವೀಕರಿಸಲಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು ಎಂದು ಟ್ಟೀಟ್ ಮೂಲಕ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪನವರು ಶುಭ ಕೋರಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ