Gyanvapi Case: ಜ್ಞಾನವಾಪಿ ಪ್ರಕರಣದಲ್ಲಿ ಸುಪ್ರೀಂ ಮಹತ್ವದ ತೀರ್ಪು, ಕಾರ್ಬನ್ ಡೇಟಿಂಗ್ ಗೆ ಸಂಬಂಧಿಸಿದಂತೆ ಮಹತ್ವದ ಆದೇಶ

Gyanvapi Case Update 2023: ಜ್ಞಾನವಾಪಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ನಿರ್ದೇಶನ ನೀಡಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿಯಲ್ಲಿ ಪತ್ತೆಯಾದ ಶಿವಲಿಂಗದ ಕಾರ್ಬನ್ ಡೇಟಿಂಗ್ ಕುರಿತು ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.  

Written by - Nitin Tabib | Last Updated : May 19, 2023, 04:41 PM IST
  • ಈ ತೀರ್ಪಿನ ಬಗ್ಗೆ ಮರುಪರಿಶೀಲನೆ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
  • ಹೈಕೋರ್ಟ್‌ನ ತೀರ್ಪಿನ ನಂತರ ಸೋಮವಾರದಿಂದ ಪ್ರಾರಂಭವಾಗುವ ಶಿವಲಿಂಗದ ಕಾರ್ಬನ್ ಡೇಟಿಂಗ್‌ಗೆ
  • ಮಸೀದಿ ಸಮಿತಿಯು ಆಕ್ಷೇಪ ವ್ಯಕ್ತಪಡಿಸಿತ್ತು. ಇದೀಗ ಈ ಕುರಿತು ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ.
Gyanvapi Case: ಜ್ಞಾನವಾಪಿ ಪ್ರಕರಣದಲ್ಲಿ ಸುಪ್ರೀಂ ಮಹತ್ವದ ತೀರ್ಪು, ಕಾರ್ಬನ್ ಡೇಟಿಂಗ್ ಗೆ ಸಂಬಂಧಿಸಿದಂತೆ ಮಹತ್ವದ ಆದೇಶ title=

Gyanvapi Case Latest Update: ವಾರಣಾಸಿಯ ವಿಶ್ವನಾಥ ದೇವಸ್ಥಾನದ ಬಳಿ ನಿರ್ಮಿಸಲಾದ ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗವಿದೆ ಎಂದು ಹೇಳಲಾಗಿದೆ ಎಂದು ಹಿಂದೂ ಪಕ್ಷವು ದೀರ್ಘಕಾಲದಿಂದ ಹೇಳುತ್ತಿದೆ. ಜ್ಞಾನವಾಪಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ, ಶಿವಲಿಂಗದ ಕಾರ್ಬನ್ ಡೇಟಿಂಗ್ ಕುರಿತು ಹೈಕೋರ್ಟ್ ತೀರ್ಪು ನೀಡಿತ್ತು, ಆದರೆ ಸುಪ್ರೀಂ ಕೋರ್ಟ್ ಹೈಕೋರ್ಟ್ ತೀರ್ಪನ್ನು ತಡೆಹಿಡಿದಿದೆ. ಈ ತೀರ್ಪಿನ ಬಗ್ಗೆ ಮರುಪರಿಶೀಲನೆ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಹೈಕೋರ್ಟ್‌ನ ತೀರ್ಪಿನ ನಂತರ ಸೋಮವಾರದಿಂದ ಪ್ರಾರಂಭವಾಗುವ ಶಿವಲಿಂಗದ ಕಾರ್ಬನ್ ಡೇಟಿಂಗ್‌ಗೆ ಮಸೀದಿ ಸಮಿತಿಯು ಆಕ್ಷೇಪ ವ್ಯಕ್ತಪಡಿಸಿತ್ತು. ಇದೀಗ ಈ ಕುರಿತು ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ.

ವಿಚಾರಣೆಯ ವೇಳೆ ವಾದ ಮಂಡಿಸಿದ ಮಸೀದಿ ಸಮಿತಿ ಪರ ವಕೀಲ ಹುಝೈಫಾ ಅಹ್ಮದಿ ಸೋಮವಾರದಿಂದ ವೈಜ್ಞಾನಿಕ ಪರೀಕ್ಷೆ ಆರಂಭವಾಗಲಿದೆ ಮತ್ತು ಇಂತಹ ಪರಿಸ್ಥಿತಿಯಲ್ಲಿ, ಅದನ್ನು ನಿಲ್ಲಿಸುವುದು ಅವಶ್ಯಕ ಎಂದಿದ್ದಾರೆ. ಇದರ ಜೊತೆಗೆ ಪ್ರಕರಣದಲ್ಲಿ ಸಿವಿಲ್ ವ್ಯಾಜ್ಯಕ್ಕೆ ಸಂಬಂಧಿಸಿದ ನಿಯಮಗಳನ್ನು ಪಾಲಿಸಲಾಗುತ್ತಿಲ್ಲ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಬಳಿಕ ಈ ಬಗ್ಗೆ ತಮ್ಮ ವಾದ ಮಂಡಿಸಿದ್ದ ಹಿಂದೂ ಪರ ವಕೀಲ ವಿಷ್ಣು ಜೈನ್, ಸ್ಥಳಕ್ಕೆ ಯಾವುದೇ ರೀತಿಯ ಹಾನಿ ಉಂಟಾಗುವುದಿಲ್ಲ ಎಂದು ಎಎಸ್‌ಐ  ವರದಿ ನೀಡಿದೆ ಎಂದು ಹೇಳಿದ್ದಾರೆ.

ಈ ಕುರಿತು ಸಿಜೆಐ ಡಿವೈ ಚಂದ್ರಚೂಡ್ ಅವರು, ನಾವು ಎಎಸ್‌ಐ ಅವರಿಂದಲೂ ವರದಿ ಪಡೆಯಬಹುದು ಎಂದು ಹೇಳಿದ್ದಾರೆ. ಯಾವ ವಿಧಾನಗಳನ್ನು ಅಳವಡಿಸಿಕೊಳ್ಳಬಹುದು ಎಂಬುದನ್ನೂ  ಸರ್ಕಾರವೂ ಕೂಡ ಪರಿಗಣಿಸಲಿ. ಆಮೇಲೆ ನಾವು ವಿಚಾರಣೆ ನಡೆಸುತ್ತೇವೆ ಎಂದು ಹೇಳಿದ್ದಾರೆ. ಪ್ರಸ್ತುತ ಎಲ್ಲಾ  ಪಕ್ಷಗಳು ಒಪ್ಪಿಕೊಂಡಿರುವುದರಿಂದ ನೋಟಿಸ್ ನೀಡುತ್ತಿದ್ದೇವೆ ಎಂದರು. ಇನ್ನೊಂದೆಡೆ ಹೈಕೋರ್ಟ್‌ ನೀಡಿರುವ ಆದೇಶವನ್ನು ಸಹ ಪರಿಶೀಲಿಸಬೇಕಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಅದನ್ನು ಜಾರಿಗೆ ತರಬಾರದು ಎಂದು ಹೇಳಿದ್ದಾರೆ.

ಇದನ್ನೂ ಓದಿ-G-7 Summit Update: G7 ಶೃಂಗಸಭೆಯಲ್ಲಿ ಭಾಗಿಯಾಗಲು ಜಪಾನ್ ತೆರಳಲಿದ್ದಾರೆ ಪಿಎಂ ಮೋದಿ

ಏನು ವಿಷಯ?
ಮೇ 12 ರಂದು, ಅಲಹಾಬಾದ್ ಹೈಕೋರ್ಟ್ ಶಿವಲಿಂಗ ಎಂದು ಹೇಳಲಾಗುತ್ತಿರುವ ಜ್ಞಾನವಾಪಿ ಮಸೀದಿಯಲ್ಲಿ ಕಂಡುಬರುವ ರಚನೆಯ ಪ್ರಾಚೀನತೆಯನ್ನು ಕಂಡುಹಿಡಿಯಲು ಕಾರ್ಬನ್ ಡೇಟಿಂಗ್‌ನಂತಹ ಅತ್ಯಾಧುನಿಕ ತಂತ್ರಜ್ಞಾನವನ್ನು ಒಳಗೊಂಡಂತೆ ವೈಜ್ಞಾನಿಕ ಪರೀಕ್ಷೆಗಳನ್ನು ಬಳಸಲು ಆದೇಶಿಸಿತ್ತು.

ಇದನ್ನೂ ಓದಿ-General Election 2024: ಮಹಿಳೆಯರ ಓಲೈಕೆಗೆ ಇಲ್ಲಿದೆ ಬಿಜೆಪಿ ಬೃಹತ್ ಪ್ಲಾನ್

ಮೇ 2022 ರಲ್ಲಿ ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ನಡೆಸಿದ ಸಮೀಕ್ಷೆಯಲ್ಲಿ ಕಂಡುಬಂದ ರಚನೆಯ ಕಾರ್ಬನ್ ಡೇಟಿಂಗ್ ಸೇರಿದಂತೆ ಇತರ ವೈಜ್ಞಾನಿಕ ಪರೀಕ್ಷೆಗಳನ್ನು ನಡೆಸಲು ಮೇಲ್ಮನವಿ ಅರ್ಜಿಯನ್ನು ತಿರಸ್ಕರಿಸಿದ ವಾರಣಾಸಿ ಜಿಲ್ಲಾ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ.

ಇದನ್ನೂ ನೋಡಿ-

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News