ಖ್ಯಾತ ನೇತ್ರತಜ್ಞ ಭುಜಂಗ ಶೆಟ್ಟಿ ಅವರ ನಿಧನಕ್ಕೆ ಡಿ.ಕೆ. ಶಿವಕುಮಾರ್ ಸಂತಾಪ

ಖ್ಯಾತ ನೇತ್ರತಜ್ಞ ಡಾ. ಕೆ. ಭುಜಂಗ ಶೆಟ್ಟಿ ಅವರ ನಿಧನಕ್ಕೆ ನಿಯೋಜಿತ ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ.

Written by - Prashobh Devanahalli | Last Updated : May 20, 2023, 01:05 AM IST
  • "ಭುಜಂಗ ಶೆಟ್ಟಿ ಅವರು ಆರೋಗ್ಯ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆ ಅಪಾರ.
  • ರಾಜ್ಯ ಕಂಡ ಶ್ರೇಷ್ಠ ವೈದ್ಯರಲ್ಲಿ ಒಬ್ಬರು.
  • ಜನರಲ್ಲಿ ಆರೋಗ್ಯ ಕುರಿತು ಜಾಗೃತಿ ಮೂಡಿಸುತ್ತಾ ಬಹಳ ದೂರದೃಷ್ಟಿ ಹೊಂದಿದ್ದ ವೈದ್ಯರಾಗಿದ್ದರು.
ಖ್ಯಾತ ನೇತ್ರತಜ್ಞ ಭುಜಂಗ ಶೆಟ್ಟಿ ಅವರ ನಿಧನಕ್ಕೆ ಡಿ.ಕೆ. ಶಿವಕುಮಾರ್ ಸಂತಾಪ title=

ಬೆಂಗಳೂರು: ಖ್ಯಾತ ನೇತ್ರತಜ್ಞ ಡಾ. ಕೆ. ಭುಜಂಗ ಶೆಟ್ಟಿ ಅವರ ನಿಧನಕ್ಕೆ ನಿಯೋಜಿತ ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ.

"ಭುಜಂಗ ಶೆಟ್ಟಿ ಅವರು ಆರೋಗ್ಯ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆ ಅಪಾರ. ರಾಜ್ಯ ಕಂಡ ಶ್ರೇಷ್ಠ ವೈದ್ಯರಲ್ಲಿ ಒಬ್ಬರು. ಜನರಲ್ಲಿ ಆರೋಗ್ಯ ಕುರಿತು ಜಾಗೃತಿ ಮೂಡಿಸುತ್ತಾ ಬಹಳ ದೂರದೃಷ್ಟಿ ಹೊಂದಿದ್ದ ವೈದ್ಯರಾಗಿದ್ದರು.

ನಾರಾಯಣ ನೇತ್ರಾಲಯದ ಮುಖ್ಯಸ್ಥರಾಗಿ ಭುಜಂಗ ಶೆಟ್ಟಿ ಅವರು ಈ ಸಂಸ್ಥೆಯನ್ನು ಅತ್ಯುನ್ನತ ಮಟ್ಟಕ್ಕೆ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅತ್ಯಾಧುನಿಕ ತಂತ್ರಜ್ಞಾನ ಮೂಲಕ ಸಾರ್ವಜನಿಕರಿಗೆ ಸೇವೆ ಒದಗಿಸಿಕೊಂಡು ಬಂದಿದ್ದವರು.ಆರೋಗ್ಯ ಕ್ಷೇತ್ರದಲ್ಲಿ ಅಪಾರ ಸೇವೆಗೆ 2010 ರಲ್ಲಿ ರಾಜ್ಯೋತ್ಸವ ಪುರಸ್ಕಾರ ಸೇರಿದಂತೆ ಅನೇಕ ಪ್ರಶಸ್ತಿಗಳಿಗೆ ಇವರು ಭಾಜನರಾಗಿದ್ದಾರೆ.

ಇದನ್ನೂ ಓದಿ : ಸಚಿವ ಸ್ಥಾನಕ್ಕೆ ಶಾಸಕರ ನಡುವೆ ಭಾರಿ ಪೈಪೋಟಿ: ಸಿದ್ದು ಬಣಕ್ಕೆ ಎಷ್ಟು..? ಡಿಕೆ ಬಣಕ್ಕೆ ಎಷ್ಟು..?

ಭುಜಂಗ ಶೆಟ್ಟಿ ಅವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ಬಹಳ ಬೇಸರವಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ಅವರ ಕುಟುಂಬ ಸದಸ್ಯರು ಹಾಗೂ ಆತ್ಮೀಯರಿಗೆ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ" ಎಂದು ಶಿವಕುಮಾರ್ ಅವರು ತಮ್ಮ ಸಂತಾಪ ನುಡಿಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
 

 

 

Trending News