Congress 5 guarantees : ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ 5 ಯೋಜನೆಗಳನ್ನು ಜಾರಿಗೆ ತರುವುದಾಗಿ ಘೋಷಿಸಿತ್ತು. ಅದರಂತೆ ಬರೋಬ್ಬರಿ 135 ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ ಮತ್ತು ಜೆಡಿಎಸ್ ವಿರುದ್ಧ ಕೈ ಪಡೆ ಗೆದ್ದು ಬೀಗಿದೆ. ಅಭೂತಪೂರ್ವ ಗೆಲುವು ಸಾಧಿಸಿ ಇದೀಗ ಸರ್ಕಾರ ರಚನೆ ಮಾಡಿದೆ. ಸದ್ಯ ಚುನಾವಣೆ ವೇಳೆ ಘೋಷಿಸಿದ್ದ ಪಂಚ ಯೋಚನೆಗಳನ್ನು ಜಾರಿಗೆ ತರುವುದಾಗಿ ಕೈ ಪಡೆ ಭರವಸೆ ನೀಡಿದೆ.
ಗೃಹಿಣಿಯರು, ನಿರುದ್ಯೋಗಿಗಳು, ರೈತರು ಸೇರಿದಂತೆ ಹಲವು ವರ್ಗಗಳವನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ 5 ಗ್ಯಾರಂಟಿಗಳನ್ನು ಘೋಷಣೆ ಮಾಡಿತ್ತು. ಇದೀಗ ಇಂದು ನಡೆದ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಈ ಎಲ್ಲಾ ಘೋಷಣೆಗಳನ್ನು ಈಡೇರಿಸುವುದಾಗಿ ಎಐಸಿಸಿ ರಾಹುಲ್ ಗಾಂಧಿ ಸೇರಿದಂತೆ ಎಲ್ಲಾ ಕೈ ನಾಯಕರುತ ಸ್ಪಷ್ಟ ಪಡಿಸಿದ್ದಾರೆ. ಹಾಗಿದ್ರೆ, ಕೈ ಕೊಟ್ಟ ಗ್ಯಾರಂಟಿಗಳು ಯಾವುವು...? ಅವುಗಳ ಪ್ರಯೋಜನ ಏನು..? ಅಂತ ಒಮ್ಮೆ ನೋಡಿ..
- ಗೃಹಜ್ಯೋತಿ : ಎಲ್ಲಾ ಮನೆಗಳಿಗೂ 200 ಯೂನಿಟ್ ಉಚಿತ ವಿದ್ಯುತ್
- ಗೃಹಲಕ್ಷ್ಮಿ : ಪ್ರತಿ ಮನೆ ಯಜಮಾನಿಗೆ ಪ್ರತಿ ತಿಂಗಳು ₹2000 ರೂ.
- ಅನ್ನಭಾಗ್ಯ : ಬಿಪಿಎಲ್ ಕುಟುಂಬಗಳಿಗೆ 10 ಕೆಜಿ ಆಹಾರ ಧಾನ್ಯ.
- ಯುವನಿಧಿ : ಎರಡು ವರ್ಷಗಳ ಕಾಲಕ್ಕೆ ನಿರುದ್ಯೋಗಿ ಭತ್ಯೆ - ಪದವೀಧರರಿಗೆ ತಿಂಗಳಿಗೆ ₹3000 ಮತ್ತು ಡಿಪ್ಲೋಮಾ ಮಾಡಿದವರಿಗೆ ತಿಂಗಳಿಗೆ ₹1500
- ಸಖಿ : ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ಸಾಮಾನ್ಯ ಬಸ್ಸುಗಳಲ್ಲಿ ಎಲ್ಲಾ ಮಹಿಳೆಯರಿಗೂ ಉಚಿತ ಪ್ರಯಾಣ
ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರು ಸಚಿವ ಸಂಪುಟ ಸಭೆ ನಡೆಸಿದ್ದಾರೆ. ಕೊಟ್ಟ ಮಾತಿನಂತೆ ಈ ಎಲ್ಲಾ ಯೋಜನೆಗಳನ್ನು ಜಾರಿಗೆ ತರುವ ಮಾತನಾಡುತ್ತಾರಾ ಎಂಬುವುದನ್ನು ಕಾಯ್ದು ನೋಡಬೇಕಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ