ನವದೆಹಲಿ: ಬದಲಾಗುತ್ತಿರುವ ಜೀವನಶೈಲಿಯು ಜನರನ್ನು ಅನೇಕ ಗಂಭೀರ ಕಾಯಿಲೆಗಳಿಗೆ ಬಲಿಪಶುಗಳನ್ನಾಗಿ ಮಾಡುತ್ತಿದೆ. ಕಚೇರಿಯಲ್ಲಿ ಸಿಸ್ಟಂ ಮುಂದೆ ನಿರಂತರವಾಗಿ ಕೆಲಸ ಮಾಡುವುದರಿಂದ ದೇಹದಲ್ಲಿ ಸುಸ್ತು ಮತ್ತಿತರ ಸಮಸ್ಯೆಗಳು ಉದ್ಭವಿಸುತ್ತವೆ. ಇಂದು ಜನರ ಆಹಾರ ಪದ್ಧತಿಯಲ್ಲಿಯೂ ಸಾಕಷ್ಟು ಬದಲಾವಣೆ ಕಂಡುಬಂದಿದೆ. ಕೆಲವು ವಿಶೇಷ ರೋಗಿಗಳು ತಮ್ಮ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕೆಂದು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ. ಕೆಲಸು ತರಕಾರಿಗಳನ್ನು ಸೇವಿಸುವುದರಿಂದ ನಿಮ್ಮ ಆರೋಗ್ಯದಲ್ಲಿ ಸುಧಾರಣೆಯಾಗುತ್ತದೆ.
ಇಂದಿನ ಕಾಲದಲ್ಲಿ ಮಧುಮೇಹವು ಒಂದು ಪ್ರಮುಖ ಮತ್ತು ಸಾಮಾನ್ಯ ಕಾಯಿಲೆಯಾಗಿ ಹೊರಹೊಮ್ಮುತ್ತಿದೆ. ದೇಶದಲ್ಲಿ ಶುಗರ್ ರೋಗಿಗಳ ಸಂಖ್ಯೆ ವೇಗವಾಗಿ ಹೆಚ್ಚುತ್ತಿದೆ. ಇದರ ರೋಗಿಗಳಿಗೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಾಪಾಡಿಕೊಳ್ಳಲು ವಿಶೇಷ ಅವಶ್ಯಕತೆಯಿದೆ. ಏಕೆಂದರೆ ರಕ್ತದಲ್ಲಿನ ಸಕ್ಕರೆಯ ಹೆಚ್ಚಳದಿಂದ ದೇಹದ ಅನೇಕ ಭಾಗಗಳ ಮೇಲೆ ಕೆಟ್ಟ ಪರಿಣಾಮ ಬೀರುತ್ತವೆ. ಆದರೆ ಕೆಲವು ಆಹಾರ ಸೇವನೆಯಿಂದ ಮಧುಮೇಹವನ್ನು ನಿಯಂತ್ರಿಸಬಹುದು. ಆದ್ದರಿಂದ ಸಕ್ಕರೆ ರೋಗಿಗಳ ಆಹಾರದಲ್ಲಿ ಯಾವ ತರಕಾರಿಗಳನ್ನು ಸೇರಿಸಬೇಕು ಎಂಬುದರ ಮಾಹಿತಿ ಇಲ್ಲಿದೆ ನೋಡಿ.
ಇದನ್ನೂ ಓದಿ: Beer ಕುಡಿದ 2 ಗಂಟೆಗಳವರೆಗೆ ಈ ಪದಾರ್ಥಗಳನ್ನು ಸೇವಿಸಬೇಡಿ, ಇಲ್ಡಿದ್ರೆ... !
1) ಪಾಲಕ್: ನೀವು ಶುಗರ್ ಪೇಷೆಂಟ್ ಆಗಿದ್ದರೆ ನಿಮ್ಮ ಆಹಾರದಲ್ಲಿ ಖಂಡಿತ ಪಾಲಕ್ ಸೇರಿಸಿಕೊಳ್ಳಿರಿ. ಜನರು ಚಳಿಗಾಲದಲ್ಲಿ ಹೆಚ್ಚು ಪಾಲಕ್ ಸೇವಿಸುತ್ತಾರೆ. ಏಕೆಂದರೆ ಇದರ ಗ್ಲೈಸೆಮಿಕ್ ಇಂಡೆಕ್ಸ್ (15)ಕ್ಕಿಂತ ಕಡಿಮೆಯಿದ್ದು, ಇದು ಮಧುಮೇಹ ರೋಗಿಗಳಿಗೆ ವರದಾನವಾಗಿದೆ. ಪಾಲಕ್ ಸೊಪ್ಪು ಕಬ್ಬಿಣ, ವಿಟಮಿನ್ ಸಿ ಮತ್ತು ಆ್ಯಂಟಿ ಆಕ್ಸಿಡೆಂಟ್ ಗುಣಗಳನ್ನು ಹೊಂದಿದ್ದು, ಕ್ಯಾಲೋರಿಗಳಲ್ಲಿ ತುಂಬಾ ಕಡಿಮೆಯಾಗಿದೆ. ಇದರೊಂದಿಗೆ ಇದನ್ನು ತಿನ್ನುವುದರಿಂದ ರೋಗನಿರೋಧಕ ಶಕ್ತಿಯೂ ಬಲಗೊಳ್ಳುತ್ತದೆ. ನೀವು ಪಾಲಕ್ ಅನ್ನು ತರಕಾರಿ, ಸೂಪ್ ಅಥವಾ ಸಲಾಡ್ ಆಗಿ ಸೇವಿಸಬಹುದು.
2. ಬೆಂಡೆಕಾಯಿ: ಬೇಸಿಗೆಯಲ್ಲಿ ಬೆಂಡೆಕಾಯಿ ಹೆಚ್ಚಾಗಿ ಕಂಡುಬರುತ್ತದೆ. ಬೆಂಡೆಕಾಯಿ ರುಚಿಯಲ್ಲಿ ತುಂಬಾ ಒಳ್ಳೆಯದು ಮತ್ತು ಆರೋಗ್ಯಕ್ಕೆ ಸಹ ಪ್ರಯೋಜನಕಾರಿ. ಪೊಟ್ಯಾಸಿಯಮ್, ವಿಟಮಿನ್-ಬಿ, ವಿಟಮಿನ್-ಸಿ, ಫೋಲಿಕ್ ಆಮ್ಲ, ಫೈಬರ್ ಮತ್ತು ಕ್ಯಾಲ್ಸಿಯಂನಂತಹ ಅಂಶಗಳು ಬೆಂಡೆಕಾಯಿಯಲ್ಲಿ ಕಂಡುಬರುತ್ತವೆ. ಸಕ್ಕರೆ ರೋಗಿಗಳು ಬೆಂಡೆಕಾಯಿಯನ್ನು ಕಡ್ಡಾಯವಾಗಿ ಸೇವಿಸಬೇಕು. ಬೆಂಡೆಕಾಯಿ ಫೈಬರ್‌ನ ಉತ್ತಮ ಮೂಲವಾಗಿದೆ.
ಇದನ್ನೂ ಓದಿ: ಖರ್ಜುರ ನೆನೆಸಿದ ನೀರನ್ನು ಕುಡಿಯುವುದರಿಂದಾಗುವ ಆರೋಗ್ಯ ಪ್ರಯೋಜನಗಳೇನು ಗೊತ್ತಾ ..?
3. ಬ್ರೊಕೊಲಿ: ಮಧುಮೇಹ ರೋಗಿಗಳು ತಮ್ಮ ಆಹಾರದಲ್ಲಿ ಕೋಸುಗಡ್ಡೆಯನ್ನು ಸೇರಿಸಿಕೊಳ್ಳಬೇಕು. ಕಬ್ಬಿಣ, ವಿಟಮಿನ್-ಸಿ, ಫೈಬರ್, ಪ್ರೋಟೀನ್, ಕ್ಯಾಲ್ಸಿಯಂ, ಸೆಲೆನಿಯಂ ಮತ್ತು ಮೆಗ್ನೀಸಿಯಂ ಇದರಲ್ಲಿ ಕಂಡುಬರುತ್ತದೆ. ಇದರಲ್ಲಿರುವ 'ಸಲ್ಫೊರಾಫೇನ್' ಮಧುಮೇಹ ರೋಗಿಗಳಲ್ಲಿ ರಕ್ತನಾಳಗಳನ್ನು ಹಾನಿಯಾಗದಂತೆ ರಕ್ಷಿಸುತ್ತದೆ. ನೀವು ಬ್ರೊಕೊಲಿಯನ್ನು ಕುದಿಸಿ ಅಥವಾ ಹುರಿಯುವ ಮೂಲಕ ತಿನ್ನಬಹುದು.
4. ಕ್ಯಾರೆಟ್: ಕ್ಯಾರೆಟ್ ಕೂಡ ಮಧುಮೇಹ ರೋಗಿಗಳಿಗೆ ತುಂಬಾ ಪ್ರಯೋಜನಕಾರಿ. ಕ್ಯಾರೆಟ್ ಸೇವನೆಯಿಂದ ನೀವು ಹಲವಾರು ರೋಗಗಳಿಂದ ದೂರವಿರಬಹುದು. ಇದು ಅನೇಕ ರೀತಿಯಲ್ಲಿ ನಿಮಗೆ ಪ್ರಯೋಜನಕಾರಿಯಾಗಿದೆ.
(ಗಮನಿಸಿರಿ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಇದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆ ತೆಗೆದುಕೊಳ್ಳಬೇಕು. ZEE NEWS ಇದನ್ನು ದೃಢಪಡಿಸುವುದಿಲ್ಲ.)
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.