ಬೆಂಗಳೂರು: ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಸಾಲ ಮಾಡಿ ಬಿಟ್ಟಿ ಭಾಗ್ಯ ನೀಡಿದ್ದಾರೆಂದು ಸುಳ್ಳು ಸುದ್ದಿ ಹಬ್ಬಿಸಿದ್ದ ಶಿಕ್ಷಕರೊಬ್ಬರನ್ನು ಅಮಾನತುಗೊಳಿಸಲಾಗಿದೆ. ಇದೇ ವಿಚಾರವಾಗಿ ಸೋಮವಾರ ಟ್ವೀಟ್ ಮಾಡಿರುವ ಬಿಜೆಪಿ, ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ.
‘ಪ್ರಜಾಪ್ರಭುತ್ವವನ್ನಾಗಲಿ, ಪ್ರಜೆಗಳ ಅಭಿವ್ಯಕ್ತಿ ಸ್ವಾತಂತ್ರ್ಯವನ್ನಾಗಲಿ ಗೌರವಿಸುವ ಪಕ್ಷ ಕಾಂಗ್ರೆಸ್ ಅಲ್ಲ. ರಾಜ್ಯದಲ್ಲಿ ತುಘಲಕ್ ಕಾಂಗ್ರೆಸ್ ಸರ್ಕಾರ ಬಂದೊಡನೆ ಸರ್ಕಾರದ ಢೋಂಗಿ ನೀತಿಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಶ್ನಿಸಿದರು ಎಂಬ ಕಾರಣಕ್ಕಾಗಿ ಶಿಕ್ಷಕರೊಬ್ಬರನ್ನು ವೃತ್ತಿಯಿಂದ ಅಮಾನತುಗೊಳಿಸಿರುವಂತಹ ಅಮಾನವೀಯ ಘಟನೆ ನಡೆದಿದೆ. ಇದು ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣವಲ್ಲವೇ?’ ಎಂದು ಪ್ರಶ್ನಿಸಿದೆ.
ಇದನ್ನೂ ಓದಿ: OMG: ಅಧಿವೇಶನಕ್ಕೂ ಮೊದಲು ಗೋಮೂತ್ರ ಸಿಂಪಡಿಸಿ ವಿಧಾನಸೌಧ ಶುದ್ಧೀಕರಿಸಿದ ಕಾಂಗ್ರೆಸ್ ಕಾರ್ಯಕರ್ತರು!
ಪ್ರಜಾಪ್ರಭುತ್ವವನ್ನಾಗಲಿ, ಪ್ರಜೆಗಳ ಅಭಿವ್ಯಕ್ತಿ ಸ್ವಾತಂತ್ರ್ಯವನ್ನಾಗಲಿ ಗೌರವಿಸುವ ಪಕ್ಷ @INCKarnataka ಅಲ್ಲ.
ರಾಜ್ಯದಲ್ಲಿ ತುಘಲಕ್ ಕಾಂಗ್ರೆಸ್ ಸರ್ಕಾರ ಬಂದೊಡನೆ ಸರ್ಕಾರದ ಢೋಂಗಿ ನೀತಿಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಶ್ನಿಸಿದರು ಎಂಬ ಕಾರಣಕ್ಕಾಗಿ ಶಿಕ್ಷಕರೊಬ್ಬರನ್ನು ವೃತ್ತಿಯಿಂದ ಅಮಾನತುಗೊಳಿಸಿರುವಂತಹ ಅಮಾನವೀಯ ಘಟನೆ… https://t.co/9Fj7fxzVU3 pic.twitter.com/d6T4OUVLxi
— BJP Karnataka (@BJP4Karnataka) May 22, 2023
‘ಪ್ರಜೆಗಳ ಧ್ವನಿಯನ್ನು ಹತ್ತಿಕ್ಕುವ ಕಾಂಗ್ರೆಸ್ನ ಈ ನಡೆಯನ್ನು ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ. ಅದೇ ರೀತಿಯಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಎತ್ತಿ ಹಿಡಿಯುವ ನಿಟ್ಟಿನಲ್ಲಿ ಜವಾಬ್ದಾರಿಯುತ ವಿರೋಧ ಪಕ್ಷವಾಗಿ ನಾವು ಪ್ರಜೆಗಳ ಒಟ್ಟಿಗೆ ಅವರ ಧ್ವನಿಯಾಗಿ ಹೋರಾಟ ನಡೆಸಲಿದ್ದೇವೆ’ ಎಂದು ಬಿಜೆಪಿ ಟ್ವೀಟ್ ಮಾಡಿದೆ.
ಫೇಕ್ ನ್ಯೂಸ್ ಹಂಚಿದ ಶಿಕ್ಷಕ ಅಮಾನತು: ಸಿದ್ದರಾಮಯ್ಯನವರು ಮುಖ್ಯಮಂತ್ರಿಗಳಾಗಿದ್ದಾಗ ಅತಿಹೆಚ್ಚು ಸಾಲ ಮಾಡಿ ‘ಬಿಟ್ಟಿ ಭಾಗ್ಯಗಳನ್ನು’ ನೀಡಿದ್ದಾರೆಂದು ಸೋಷಿಯಲ್ ಮೀಡಿಯಾದಲ್ಲಿ ಫೇಕ್ ನ್ಯೂಸ್ ಹಂಚಿಕೊಂಡ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಶಿಕ್ಷಕನನ್ನು ಅಮಾನತು ಮಾಡಲಾಗಿದೆ.
ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರದ ಕಿತ್ತಾಟಕ್ಕೆ ಅಧಿಕೃತ ಚಾಲನೆ ದೊರಕಿದೆ: ಬಿಜೆಪಿ ವ್ಯಂಗ್ಯ
ಫೇಸ್ಬುಕ್ ಮತ್ತು ವಾಟ್ಸಾಪ್ಗಳಲ್ಲಿ ಪೋಸ್ಟ್ ಮಾಡಿದ ಆರೋಪದ ಮೇಲೆ ಹೊಸದುರ್ಗ ತಾಲೂಕಿನ ಕಾನುಬೇನಹಳ್ಳಿಯ ಶಿಕ್ಷಕ ಎಂ.ಜಿ.ಶಾಂತಮೂರ್ತಿ ಅವರನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಎಲ್.ಜಯಪ್ಪ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.