ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಆಶೀರ್ವಾದ ಪಡೆದ ಡಿಸಿಎಂ ಡಿ.ಕೆ.ಶಿವಕುಮಾರ್

ವಿಧಾನಸಭೆಯ ಪಡಸಾಲೆಯಲ್ಲಿ ವಿಪಕ್ಷ ನಾಯಕರ ಜೊತೆ ಬಹಳ ಆತ್ಮೀಯವಾಗಿ ಮಾತುಕತೆ ಮೂಲಕ ಪಾಸಿಟಿವ್ ಆಗಿರುವ ಬಗ್ಗೆ ಕೇಳಿದಾಗ, ‘ಚುನಾವಣೆ ಮುಗಿದಿದೆ. ನೆಗೆಟಿವ್‍ನಿಂದ ಯಾವ ಪ್ರಯೋಜನವಿದೆ? ನಾವು ಜನರಿಗೆ ಕೊಟ್ಟ ಮಾತು ಉಳಿಸಿಕೊಂಡಿದ್ದೇವೆ. ಜನ ನಮ್ಮ ಮೇಲೆ ನಂಬಿಕೆ ಇಟ್ಟಿದ್ದು, ನಾವು ಅದನ್ನು ಕಾರ್ಯರೂಪಕ್ಕೆ ತರಬೇಕು ಎಂದು ಡಿಕೆಶಿ ಹೇಳಿದರು.

Written by - Prashobh Devanahalli | Last Updated : May 22, 2023, 09:55 PM IST
  • ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಅಪಾರ ಜನಸೇವೆ ಮಾಡಿದ್ದಾರೆ
  • ದೇಶದ ಅತ್ಯುನ್ನತ ಹುದ್ದೆ ಅಲಂಕರಿಸಿರುವ ಅವರೊಬ್ಬ ಛಲಗಾರರು
  • ಎಚ್‍.ಡಿ.ದೇವೇಗೌಡರ ಆಶೀರ್ವಾದ ಪಡೆದುಕೊಂಡ ಡಿಸಿಎಂ ಡಿಕೆ ಶಿವಕುಮಾರ್
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಆಶೀರ್ವಾದ ಪಡೆದ ಡಿಸಿಎಂ ಡಿ.ಕೆ.ಶಿವಕುಮಾರ್   title=
ಎಚ್‍ಡಿಡಿ ಆಶೀರ್ವಾದ ಪಡೆದ ಡಿಕೆಶಿ

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಅಪಾರ ಜನಸೇವೆ ಮಾಡಿದ್ದಾರೆ. ದೇಶದ ಅತ್ಯುನ್ನತ ಹುದ್ದೆ ಅಲಂಕರಿಸಿದ್ದಾರೆ. ಅವರೊಬ್ಬ ಛಲಗಾರರು, ಅವರ ಆಶೀರ್ವಾದ, ಮಾರ್ಗದರ್ಶನ ಪಡೆಯಲು ಬಂದಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.  

ಚುನಾವಣಾ ರಾಜಕಾರಣ ಮುಕ್ತಾಯವಾಗಿದೆ. ಇನ್ನು ರಾಜ್ಯದ ಹಿತ ಕಾಪಾಡುವತ್ತ ಗಮನಹರಿಸಬೇಕು. ಈ ವಿಚಾರವಾಗಿ ಅವರ ಸಲಹೆ ಪಡೆದಿದ್ದೇವೆ. ಅವರು ಕೂಡ ಬಹಳ ಸ್ಫೂರ್ತಿಯಿಂದ ಆಶೀರ್ವಾದ ಮಾಡಿ ಕಳುಹಿಸಿದ್ದಾರೆ ಎಂದು ಡಿಕೆಶಿ ಹೇಳಿದರು.

ವಿಧಾನಸಭೆಯ ಪಡಸಾಲೆಯಲ್ಲಿ ವಿಪಕ್ಷ ನಾಯಕರ ಜೊತೆ ಬಹಳ ಆತ್ಮೀಯವಾಗಿ ಮಾತುಕತೆ ಮೂಲಕ ಪಾಸಿಟಿವ್ ಆಗಿರುವ ಬಗ್ಗೆ ಕೇಳಿದಾಗ, ‘ಚುನಾವಣೆ ಮುಗಿದಿದೆ. ನೆಗೆಟಿವ್‍ನಿಂದ ಯಾವ ಪ್ರಯೋಜನವಿದೆ? ನಾವು ಜನರಿಗೆ ಕೊಟ್ಟ ಮಾತು ಉಳಿಸಿಕೊಂಡಿದ್ದೇವೆ. ಜನ ನಮ್ಮ ಮೇಲೆ ನಂಬಿಕೆ ಇಟ್ಟಿದ್ದು, ನಾವು ಅದನ್ನು ಕಾರ್ಯರೂಪಕ್ಕೆ ತರಬೇಕು. ನಾವು ಕಾಂಗ್ರೆಸ್ ಪಕ್ಷದವರು, ನುಡಿದಂತೆ ನಡೆಯುತ್ತೇವೆ. ನಾನು ಸದಾ ಸಕಾರಾತ್ಮಕವಾಗಿ ಆಲೋಚಿಸುತ್ತೇನೆಯೇ ಹೊರತು ಋಣಾತ್ಮಕವಾಗಿ ಆಲೋಚನೆ ಮಾಡುವುದಿಲ್ಲ. ನಾನು ಇಂದು ಎಸ್.ಎಂ.ಕೃಷ್ಣ, ವೀರಪ್ಪ ಮೊಯ್ಲಿ ಅವರನ್ನು ಭೇಟಿ ಮಾಡಿ ನಂತರ ದೇವೇಗೌಡರನ್ನು ಭೇಟಿ ಮಾಡಿದ್ದೇನೆ' ಎಂದು ತಿಳಿಸಿದರು.

ಇದನ್ನೂ ಓದಿ: ಸಿದ್ದರಾಮಯ್ಯರೇ 5 ವರ್ಷ ಪೂರ್ಣಾವಧಿ ಸಿಎಂ, ಅಧಿಕಾರ ಹಂಚಿಕೆ ಇಲ್ಲ..!

ದೇವೇಗೌಡರು ಯಾವ ಸಲಹೆ ನೀಡಿದ್ದಾರೆ ಎಂದು ಕೇಳಿದಾಗ, 'ಕಾವೇರಿ ನೀರು ಹೇಗೆ ರಕ್ಷಣೆ ಮಾಡಿಕೊಳ್ಳಬೇಕು, ಹೇಗೆ ಬಳಸಿಕೊಳ್ಳಬೇಕು ಎಂದು ಚರ್ಚೆ ಮಾಡಿದ್ದು, ಅವರು ಕೊಟ್ಟಿರುವ ಸಲಹೆ ಬಹಿರಂಗಪಡಿಸಲು ಸಾಧ್ಯವಿಲ್ಲ' ಎಂದು ತಿಳಿಸಿದರು.

ಒಕ್ಕಲಿಗ ಸಿಎಂ ವಿಚಾರವಾಗಿ ಚರ್ಚೆ ಏನಾದರೂ ನಡೆಯಿತೇ ಎಂದು ಕೇಳಿದಾಗ, 'ಈಗ ಸಮುದಾಯದ ಆಧಾರದ ಮೇಲೆ ಚರ್ಚೆ ಮಾಡುವುದಿಲ್ಲ. ಕರ್ನಾಟಕ ರಾಜ್ಯದ ಸರ್ವತೋಮುಖ ಅಭಿವೃದ್ಧಿಯತ್ತ ಗಮನ ಹರಿಸುತ್ತೇವೆ' ಎಂದು ತಿಳಿಸಿದರು.

ಬೆಂಗಳೂರು ಸೇರಿ ರಾಜ್ಯದಾದ್ಯಂತ ಮಳೆಯಾಗುತ್ತಿರುವ ಬಗ್ಗೆ ಕೇಳಿದಾಗ, 'ನಾನು, ಮುಖ್ಯಮಂತ್ರಿಗಳು, ಸಚಿವರು, ಅಧಿಕಾರಿಗಳು ಈ ವಿಚಾರವಾಗಿ ಚರ್ಚೆ ಮಾಡಿದ್ದು, ಎಲ್ಲೆಲ್ಲಿ ಕಿರಿದಾದ ಅಂಡರ್ ಪಾಸ್‍ಗಳಿವೆಯೋ ಅಲ್ಲಿ ಯಾವ ಬದಲಿ ವ್ಯವಸ್ಥೆ ಮಾಡಬೇಕು? ಸುದೀರ್ಘ ಪರಿಹಾರ ಕಂಡುಕೊಳ್ಳಬೇಕು ಎಂಬ ಬಗ್ಗೆ ಮಾತುಕತೆ ನಡೆಸಿದ್ದೇವೆ' ಎಂದು ತಿಳಿಸಿದರು.

ಇದನ್ನೂ ಓದಿ: OMG: ಅಧಿವೇಶನಕ್ಕೂ ಮೊದಲು ಗೋಮೂತ್ರ ಸಿಂಪಡಿಸಿ ವಿಧಾನಸೌಧ ಶುದ್ಧೀಕರಿಸಿದ ಕಾಂಗ್ರೆಸ್ ಕಾರ್ಯಕರ್ತರು!

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News