Meater haki please web series : "ನಮ್ಮೂರ ಮಂದಾರ ಹೂವೆ" ಚಿತ್ರದ ಮೂಲಕ ಬಾಲನಟನಾಗಿ ಚಿತ್ರರಂಗ ಪ್ರವೇಶಿಸಿದ ವಿನಾಯಕ ಜೋಶಿ ಈತನಕ ಸುಮಾರು 85ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದಾರೆ. ನಟನಾಗಷ್ಟೇ ಅಲ್ಲದೆ, ವಿನಾಯಕ ಜೋಶಿ ಆರ್ ಜೆ ಹಾಗೂ ನಿರೂಪಕನಾಗೂ ಚಿರಪರಿಚಿತ. ಪ್ರಸ್ತುತ ವಿನಾಯಕ ಜೋಶಿ, ತಮ್ಮದೇ ಆದ ಜೋಶಿ ಚಿತ್ರ ಲಾಂಛನದಲ್ಲಿ "ಮೀಟರ್ ಹಾಕಿ ಪ್ಲೀಸ್ " ಎಂಬ ವೆಬ್ ಸೀರಿಸ್ ನಿರ್ಮಾಣ ಮಾಡಿದ್ದಾರೆ.
ನಿರ್ದೇಶನ ಹಾಗೂ ನಿರೂಪಣೆ ಕೂಡ ಅವರದೆ. ಇತ್ತೀಚೆಗೆ ಮೀಟರ್ ಹಾಕಿ ಪ್ಲೀಸ್ ವೆಬ್ ಸಿರೀಸ್ ನ ಟ್ರೇಲರ್ ಬಿಡುಗಡೆ ಹಾಗೂ ಮೊದಲ ಸಂಚಿಕೆ ಪ್ರದರ್ಶನ ನಡೆಯಿತು. ಅಮೋಘವರ್ಷ(ಗಂಧದಗುಡಿ ಖ್ಯಾತಿ), ಧರ್ಮೇಂದ್ರ ಕುಮಾರ್ ಮುಂತಾದವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಈ ವೆಬ್ ಸಿರೀಸ್ ಗೆ ಶುಭ ಕೋರಿದರು.
ಇದನ್ನೂ ಓದಿ: ಇಂಟರ್‌ನೆಟ್‌ನಲ್ಲಿ ಸೆನ್ಸೇಷನ್ ಕ್ರಿಯೇಟ್ ಮಾಡುತ್ತಿದೆ ಶ್ವೇತಾ ಅಂದ..! ಫೋಟೋಸ್ ನೋಡಿ
ಬಾಲನಟನಾಗಿ ಬಂದ ನಾನು, ನಾಯಕನೂ ಆದೆ. ಆನಂತರ ವಿವಿಧ ಕ್ಷೇತ್ರಗಳಲ್ಲಿ ಸಕ್ರಿಯವಾಗಿದೆ. ಕೆಲವು ವರ್ಷಗಳ ಹಿಂದೆ "ಜೋಶ್ ಲೆ" ಎಂಬ ವೆಬ್ ಸಿರೀಸ್ ನಿರ್ಮಿಸಿದ್ದೆ. ಈಗ "ಮೀಟರ್ ಹಾಕಿ ಪ್ಲೀಸ್" ಎಂಬ ವಿಭಿನ್ನ ವೆಬ್ ಸಿರೀಸ್ ನಿರ್ಮಿಸುವುದರ ಜೊತೆಗೆ ನಿರ್ದೇಶನವನ್ನು ಮಾಡಿದ್ದೇನೆ. ಆಟೋ ಚಾಲಕರ ಜೀವನ ಹಾಗೂ ಸಾಧನೆಯನ್ನು ಪರಿಚಯಿಸುವ ವೆಬ್ ಸಿರೀಸ್ ಇದಾಗಿದೆ. ಸುಮಾರು ಏಳು ಕಂತುಗಳಲ್ಲಿ ಯೂಟ್ಯೂಬ್ ಹಾಗೂ Spotify ನಲ್ಲಿ ಇದು ಪ್ರಸಾರವಾಗಲಿದೆ.
ಕರ್ನಾಟಕದಾದ್ಯಂತ ಇರುವ ಹತ್ತಕ್ಕೂ ಹೆಚ್ಚು ಜನಪ್ರಿಯ ಆಟೋಚಾಲಕರನ್ನು ಸಂದರ್ಶಿಸಿದ್ದೇನೆ. 40 ನಿಮಿಷಗಳ ಕಾಲ ಈ ಕಾರ್ಯಕ್ರಮ ಪ್ರಸಾರವಾಗಲಿದೆ. ನಮ್ಮ ಸುಮಾರು 25 ಜನರ ತಂಡದ ಪರಿಶ್ರಮದಿಂದ ಈ ವೆಬ್ ಸಿರೀಸ್ ಮೂಡಿಬಂದಿದೆ. ಹಲವು ಪ್ರಾಯೋಜಕರ ಬೆಂಬಲ ನಮ್ಮಗಿದೆ ಎಂದು ವಿನಾಯಕ ಜೋಶಿ "ಮೀಟರ್ ಹಾಕಿ ಪ್ಲೀಸ್" ಬಗ್ಗೆ ಸಂಪೂರ್ಣ ಮಾಹಿತಿ ನೀಡಿದರು. ಇದೇ ಸಂದರ್ಭದಲ್ಲಿ ರಾಜ್ಯದ ವಿವಿಧ ಕಡೆಗಳಿಂದ ಆಗಮಿಸಿದ್ದ ಆಟೋ ಚಾಲಕರನ್ನು ಸನ್ಮಾನಿಸಲಾಯಿತು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ