ರಾಯಚೂರು: ಜಿಲ್ಲೆಯ ರೇಖಲಮರಡಿ ಬಳಿಯ ಗೊರೆಬಾಳ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಅಸ್ವಸ್ಥಗೊಂಡವರಿಗೆ ಸೂಕ್ತ ಚಿಕಿತ್ಸೆ ಹಾಗೂ ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತೆ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶಿಸಿದ್ದಾರೆ.
ಇದನ್ನೂ ಓದಿ: ಸಿದ್ದರಾಮಯ್ಯರೇ 5 ವರ್ಷ ಪೂರ್ಣಾವಧಿ ಸಿಎಂ, ಅಧಿಕಾರ ಹಂಚಿಕೆ ಇಲ್ಲ..!
ಗ್ರಾಮಸ್ಥರಿಗೆ ಶುದ್ಧ ನೀರು ಪೂರೈಕೆಗೆ ತಕ್ಷಣ ಕ್ರಮ ಕೈಗೊಳ್ಳಬೇಕು ಹಾಗೂ ಘಟನೆ ಸಂಬಂಧ ಸೂಕ್ತ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ.
ಘಟನೆ ಸಂಬಂಧ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ನೀಡಿರುವ ಪ್ರಮುಖ ಸೂಚನೆಗಳು:
* ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಸಮಗ್ರ ಪರಿಶೀಲನೆ ನಡೆಸಬೇಕು.
* ನೀರಿನ ಸ್ಯಾಂಪಲ್ ಗಳನ್ನು ಲ್ಯಾಬ್ ಗೆ ಕಳುಹಿಸಿ ತಕ್ಷಣ ವರದಿ ತರಿಸಿಕೊಳ್ಳಬೇಕು.
* ವರದಿ ಆಧಾರದಲ್ಲಿ ಗ್ರಾಮಸ್ಥರ ಕೂಲಂಕುಷ ಆರೋಗ್ಯ ತಪಾಸಣೆ ನಡೆಸಿ ಅಗತ್ಯ ಚಿಕಿತ್ಸೆಗೆ ಕ್ರಮ ವಹಿಸಬೇಕು.
* ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಿ, ವಿಷಪೂರಿತ ನೀರಿನ ಮೂಲಗಳನ್ನು ಬಂದ್ ಮಾಡಬೇಕು.
* ಅಗತ್ಯ ಕ್ರಮಗಳನ್ನು ಕೈಗೊಂಡು ಘಟನೆ ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ