"ಭ್ರಷ್ಟಾಚಾರಕ್ಕೆ ಆಸ್ಪದವಿಲ್ಲ, ನಿಷ್ಠೆ, ಪ್ರಾಮಾಣಿಕತೆಗೆ ಮಾತ್ರ ಪ್ರೋತ್ಸಾಹ"

ಭ್ರಷ್ಟಾಚಾರಕ್ಕೆ ಆಸ್ಪದವಿಲ್ಲ, ನಿಷ್ಠೆ, ಪ್ರಾಮಾಣಿಕತೆಗೆ ಮಾತ್ರ ಪ್ರೋತ್ಸಾಹ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಲ ಸಂಪನ್ಮೂಲ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಖಡಕ್ ಆಗಿ ಹೇಳಿದ್ದಾರೆ.ಸಭೆಯಲ್ಲಿ ಮಾತನಾಡಿದ ಅವರು ಅಧಿಕಾರಿಗಳಿಗೆ ಹಲವು ಸಲಹೆ ಸೂಚನೆಗಳನ್ನು ನೀಡಿದರು.

Written by - Manjunath N | Last Updated : May 30, 2023, 07:41 PM IST
  • ಕೇಂದ್ರದಿಂದ ಯೋಜನೆಗಳನ್ನು ತರುವ ಗುರಿಯನ್ನು ನಿಮಗೆ ನೀಡುತಿದ್ದೇನೆ
  • ಕೇಂದ್ರಕ್ಕೆ ಮನವರಿಕೆ ಮಾಡಿ, ಯೋಜನೆ ತರುವುದೇ ನಿಮ್ಮ ಕೆಲಸ
  • ಕೆಲಸ ಮಾಡಿದರೆ ನೀವು ಇಲ್ಲಿರುತ್ತೀರಿ. ಇಲ್ಲದಿದ್ದರೆ ನಿಮ್ಮ ಜಾಗದಲ್ಲಿ ಬೇರೆಯವರು ಇರುತ್ತಾರೆ
"ಭ್ರಷ್ಟಾಚಾರಕ್ಕೆ ಆಸ್ಪದವಿಲ್ಲ, ನಿಷ್ಠೆ, ಪ್ರಾಮಾಣಿಕತೆಗೆ ಮಾತ್ರ ಪ್ರೋತ್ಸಾಹ" title=

ಬೆಂಗಳೂರು: ಭ್ರಷ್ಟಾಚಾರಕ್ಕೆ ಆಸ್ಪದವಿಲ್ಲ.ನಿಷ್ಠೆ, ಪ್ರಾಮಾಣಿಕತೆಗೆ ಮಾತ್ರ ಪ್ರೋತ್ಸಾಹ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಲ ಸಂಪನ್ಮೂಲ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಖಡಕ್ ಆಗಿ ಹೇಳಿದ್ದಾರೆ.ಸಭೆಯಲ್ಲಿ ಮಾತನಾಡಿದ ಅವರು ಅಧಿಕಾರಿಗಳಿಗೆ ಹಲವು ಸಲಹೆ ಸೂಚನೆಗಳನ್ನು ನೀಡಿದರು.

ವಿಕಾಸಸೌಧದಲ್ಲಿ ಇಂದು ಜಲ ಸಂಪನ್ಮೂಲ ಇಲಾಖೆ ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು. ರಾಜ್ಯದಲ್ಲಿ ಬಾಕಿ ಉಳಿದಿರುವ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಆರ್ಥಿಕ ಕ್ರೋಢೀಕರಣ ಮಾಡಿ ಆದಷ್ಟು ಬೇಗನೆ ಮುಗಿಸುವಂತೆ ಸೂಚಿಸುದರು. ಈ ಹಿಂದೆ ನಡೆದಿರುವ ಕಾಮಗಾರಿಗಳಲ್ಲಿ ನಡೆದಿರಬಹುದಾದ ಭ್ರಷ್ಟಾಚಾರ, ಲೋಪದೋಷಗಳನ್ನು ಪತ್ತೆ ಮಾಡಲು ಪ್ರತ್ಯೇಕ ಸಲಹಾ ಸಮಿತಿ ರಚಿಸಲಾಗುತ್ತಿದ್ದು, ಗುಣಮಟ್ಟದಲ್ಲಿ ಯಾವುದೇ ರಾಜೀ ಮಾಡದೆ ನೀರಾವರಿ ಯೋಜನೆಗಳನ್ನು ಮುಗಿಸುವಂತೆ ಸೂಚಿಸಿದ್ದಾರೆ. ಶಿಸ್ತು ಮತ್ತು ಪಾರದರ್ಶಕತೆಗೆ ಇಲಾಖೆಯಲ್ಲಿ ಪ್ರಥಮ ಆದ್ಯತೆ ನೀಡಲಾಗುತ್ತಿದೆ. ಪ್ರಮುಖವಾಗಿ ಉದ್ಯೋಗ ಸೃಷ್ಟಿಗೆ ಹೆಚ್ಚು ಒತ್ತು ಕೊಡಬೇಕಿದೆ. ಇದಕ್ಕಾಗಿ ಖಾಸಗಿ ಸಹಭಾಗಿತ್ವದಲ್ಲಿ ಯೋಜನೆಗಳನ್ನು ರೂಪಿಸಬೇಕಿದೆ. ರಾಜ್ಯ ಸರ್ಕಾರದ ಮೇಲೆ ಜನ ಇಟ್ಟಿರುವ ವಿಶ್ವಾಸವನ್ನು ಉಳಿಸಲು ಅವಿರತವಾಗಿ ಪ್ರಯತ್ನಿಸಬೇಕು ಎಂದು ತಿಳಿಸಿದರು.

ಕೇಂದ್ರದಿಂದ ಕರ್ನಾಟಕದ ನೀರಾವರಿ ಯೋಜನೆಗಳಿಗೆ ಅನುಮತಿ ತರುವುದೇ ನಾನು ನಿಮಗೆ ನೀಡುತ್ತಿರುವ ಗುರಿ.ಮೇಕೆದಾಟು, ಮಹದಾಯಿ ಯೋಜನೆಗಳನ್ನು ಆದ್ಯತೆ ಮೇರೆಗೆ ಅನುಷ್ಠಾನಕ್ಕೆ ತರಬೇಕು.ಅದಕ್ಕೆ ಬೇಕಾದ ಸಿದ್ಧತೆ ಮಾಡಿಕೊಳ್ಳಿ.ಜಲವಿವಾದ ಪರಿಹಾರ, ಬಾಕಿ ಯೋಜನೆಗಳ ಪೂರ್ಣ, ನೀರಾವರಿ ಯೋಜನೆಗಳಿಗೆ ಸಂಪನ್ಮೂಲ ಕ್ರೋಡೀಕರಣ, ಕೇಂದ್ರದಿಂದ ಅನುದಾನ ತರುವುದು, ಉದ್ಯೋಗ ಸೃಷ್ಟಿಗೆ ಒತ್ತು ಕೊಡಬೇಕು.ನೀರಾವರಿ ಯೋಜನೆಗಳಿಗೆ 5 ವರ್ಷದಲ್ಲಿ 2 ಲಕ್ಷ ಕೋಟಿ ರು ವಿನಿಯೋಗಿಸುತ್ತೇವೆ ಎಂದು ಮಾತು ಕೊಟ್ಟಿದ್ದೇವೆ.ಸರಕಾರ, ಸಂಸ್ಥೆಗಳು, ಕೇಂದ್ರದ ಅನುದಾನದ ಮೂಲಕ ಸಂಪನ್ಮೂಲ ಒಟ್ಟುಗೂಡಿಸಬೇಕು ಎಂದು ಅವರು ಹೇಳಿದರು.

ಇನ್ನೂ ಮುಂದುವರೆದು ಮಾತನಾಡಿದ ಅವರು ಕೇಂದ್ರ ಸಚಿವ ಶೇಖಾವತ್ ಉತ್ತಮ ವ್ಯಕ್ತಿ. ರಾಜ್ಯದ ಕೆಲಸಗಳಿಗೆ ಅವರ ಸಹಕಾರ ಪಡೆಯೋಣ.ಬಾಕಿ ಯೋಜನೆಗಳಿಗೆ ಭೂಸ್ವಾಧೀನ ತ್ವರಿತಗತಿಯಲ್ಲಿ 
ಮಾಡಿ.ಗುಣಮಟ್ಟದಲ್ಲಿ ರಾಜಿ ಇಲ್ಲ. ಮೇಕೆದಾಟು ಯೋಜನೆಗೆ ಮೀಸಲಿಟ್ಟ 1000 ಕೋಟಿ ರೂಪಾಯಿ ಅನುದಾನವನ್ನು ಭೂಸ್ವಾಧೀನದಂತಹ ಪೂರ್ವಸಿದ್ಧತೆ ಕೆಲಸಗಳಿಗೆ ಬಹುದಿತ್ತು. ಮಾಡಿಲ್ಲ ಏಕೆ? ಹಾಗಾದರೆ ಹಣ ಇಟ್ಟಿದ್ದಾದರೂ ಏಕೆ? ಎಂದು ಅವರು ಪ್ರಶ್ನಿಸಿದರು.

ಇದನ್ನೂ ಓದಿ: ಐದನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದ ಚೆನ್ನೈ ಸೂಪರ್ ಕಿಂಗ್ಸ್

ಬರೀ ಎಲ್ಒಸಿ, ಟೆಂಡರ್, ಗುತ್ತಿಗೆ ಹಂಚಿಕೆ, ಬಿಲ್ ಮಾಡೋ ಕೆಲಸಕ್ಕೆ ನಿಮ್ಮ ಶ್ರಮ ವಿನಿಯೋಗ ಆಗಬಾರದು. ಭ್ರಷ್ಟಾಚಾರಕ್ಕೆ ಆಸ್ಪದವಿಲ್ಲ. ನಿಷ್ಠೆ, ಪ್ರಾಮಾಣಿಕತೆಗೆ ಮಾತ್ರ ಪ್ರೋತ್ಸಾಹ.ಜಾತಿಯತೆ ಬೇಡ. ಮಾನವೀಯತೆ ಇರಲಿ ಎಂದು ಅವರು ಕಿವಿ ಮಾತು ಹೇಳಿದರು.

ನನಗೆ ಯಾವುದೇ ದ್ವೇಷ ಇಲ್ಲ. ಕೆಲಸ ಆಗಬೇಕು ಅಷ್ಟೇ.ನೀವು ಸರಕಾರಕ್ಕೆ ನಿಷ್ಠಾರಾಗಿರಬೇಕೆ ಹೊರತು ನಿಮಗೆ ಪೋಸ್ಟಿಂಗ್ ಕೊಟ್ಟವರಿಗಲ್ಲ.ಅಂತವರನ್ನು ಸಹಿಸೋದಿಲ್ಲ.ನನಗೂ 33 ವರ್ಷ ಅನುಭವ ಇದೆ. ನಿಮ್ಮ ಕೈಯಲ್ಲಿ ಮಾಡಬಾರದ್ದು ಮಾಡಿಸಲ್ಲ. ದಾರಿ ತಪ್ಪಬೇಡಿ. ಎಚ್ಚರಿಕೆಯಿಂದ ಕೆಲಸ ಮಾಡಿ. ಬದಲಾವಣೆ ತನ್ನಿ ಎಂದು ತಿಳಿ ಹೇಳಿದರು.

ಡೆಲ್ಲಿಯಿಂದ ಯೋಜನೆಗಳನ್ನು ತರಬೇಕು.ನೆರೆಯ ತಮಿಳುನಾಡು, ಆಂಧ್ರ, ಮಹಾರಾಷ್ಟ್ರಕ್ಕೆ ಎಷ್ಟು ಯೋಜನೆಗಳು ಬಂದಿವೆ, ನಮ್ಮ ರಾಜ್ಯಕ್ಕೆ ಎಷ್ಟು ಬಂದಿವೆ ಎಂದು ನೀವೇ ಹೋಲಿಕೆ ಮಾಡಿಕೊಳ್ಳಿ. ನೀವು ಎಷ್ಟು ಚೆನ್ನಾಗಿ ಕೆಲಸ ಮಾಡಿದ್ದೀರಿ ಎಂದು ಗೊತ್ತಾಗುತ್ತದೆ. ಕರ್ನಾಟಕಕ್ಕೆ ಬಹಳ ಅನ್ಯಾಯವಾಗಿದೆ.ನಾವು ಕರ್ನಾಟಕದ ಎಂಪಿಗಳ ಜತೆ ಸಭೆ ಮಾಡಿ ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳೋಣ.ಪ್ರಧಾನಿಗಳು, ಕೇಂದ್ರದ ಜಲ ಸಂಪನ್ಮೂಲ ಸಚಿವರು ಸೇರಿದಂತೆ ಅಗತ್ಯ ಇರುವ ಎಲ್ಲರನ್ನೂ ಭೇಟಿ ಮಾಡೋಣ ಎಂದು ಹೇಳಿದರು.

ಕೇಂದ್ರದಿಂದ ಯೋಜನೆಗಳನ್ನು ತರುವ ಗುರಿಯನ್ನು ನಿಮಗೆ ನೀಡುತಿದ್ದೇನೆ. ಕೇಂದ್ರಕ್ಕೆ ಮನವರಿಕೆ ಮಾಡಿ, ಯೋಜನೆ ತರುವುದೇ ನಿಮ್ಮ ಕೆಲಸ.ಕೆಲಸ ಮಾಡಿದರೆ ನೀವು ಇಲ್ಲಿರುತ್ತೀರಿ. ಇಲ್ಲದಿದ್ದರೆ ನಿಮ್ಮ ಜಾಗದಲ್ಲಿ ಬೇರೆಯವರು ಇರುತ್ತಾರೆ. ನಾನು ಇಲಾಖೆ ವಹಿಸಿಕೊಂಡ ಏನೇನು ಕೆಲಸ ಮಾಡಿದ್ದೀರಿ ಎಂಬ ಬಗ್ಗೆ ಕಾಲ ಕಾಲಕ್ಕೆ ವರದಿ ಕೊಡಬೇಕು.ಯಾವ, ಯಾವ ಯೋಜನೆಗಳು ಯಾವ ಹಂತದಲ್ಲಿವೆ ಎಂಬ ಬಗ್ಗೆ ವಿಡಿಯೋ, ಫೋಟೋ ದಾಖಲೆ ಒದಗಿಸಬೇಕು.ಯೋಜನೆಗಳು ಕುಂಠಿತಗೊಳ್ಳಲು ಕಾರಣಗಳನ್ನು ಸಾಕ್ಷಿ ಸಮೇತ ನೀಡಬೇಕು. ಕತೆ, ಕಟ್ಟು ಕತೆ ಕೇಳುವುದಿಲ್ಲ.ನಾನು ಈ ಖಾತೆಯಿಂದ ಇಳಿದ ನಂತರ ಕಣ್ಣಿಗೆ ಕಾಣುವ ಯಾವುದೇ ಕೆಲಸ ಆಗಿಲ್ಲ. ಮೂರು ವರ್ಷದ ಹಿಂದೆ ಇದ್ದಂತೆಯೇ ಇದೆ.ನಾನು ಎಷ್ಟು ದಿನ ಅಧಿಕಾರದಲ್ಲಿ ಇರುತ್ತೆನೆ ಎನ್ನುವುದಕ್ಕಿಂತ ಎಷ್ಟು ಕೆಲಸ ಮಾಡಿದೆ ಎಂಬುದೇ ಮುಖ್ಯವಾಗಬೇಕು ಎಂದು ಅವರು ಹೇಳಿದರು.

ಇದನ್ನೂ ಓದಿ: ರಸ್ತೆ ದಾಟಿ ದಾಂಡೇಲಿ ಅರಣ್ಯದತ್ತ ಸಾಗಿದ ಆನೆಗಳ ಹಿಂಡು

ನೀವು ಯಾವುದೇ ಯೋಜನೆ ಮಾಡಿದರೂ ರೈತರಿಗೆ ತೊಂದರೆ ಆಗದಂತೆ ನೋಡಿಕೊಳ್ಳಿ.ಪ್ರತಿ ಹನಿ ನೀರು ರೈತರ, ಜನರ ಹಿತಕ್ಕೆ ಬಳಕೆ ಆಗಬೇಕು. ಪೋಲಾಗಬಾರದು.ಎಲ್ಲೆಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಮಾಡಬಹುದು ಎಂಬುದರ ಬಗ್ಗೆ ತ್ವರಿತಗತಿಯಲ್ಲಿ ನೀಲನಕ್ಷೆ ತಯಾರು ಮಾಡಿ.ಕೆಆರ್ ಎಸ್, ಮಂಚನಬೆಲೆ, ತಿಪ್ಪಗೊಂಡನಹಳ್ಳಿ, ಹೇಮಾವತಿ ಜಲಾಶಯ ಸೇರಿದಂತೆ ಈಗಾಗಲೇ ಸಿದ್ದವಾಗಿರುವ ಉದ್ಯಾನವನ, ಪ್ರವಾಸೋದ್ಯಮ ಅಭಿವೃದ್ಧಿ ಯೋಜನೆಗಳ ಅನುಷ್ಠಾನಕ್ಕೆ ತುರ್ತು ಕ್ರಮ ತೆಗೆದುಕೊಳ್ಳಿ ಎಂದು ಅವರು ಆದೇಶಿಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

Trending News