Gruha Lakshmi Scheme: ರಾಜ್ಯದ ಮಹಿಳೆಯರ ಕ್ಷಮೆ ಕೇಳುವಂತೆ ಪ್ರತಾಪ್ ಸಿಂಹಗೆ ಕಾಂಗ್ರೆಸ್ ಆಗ್ರಹ!

Karnataka Gruha Lakshmi Scheme: ಮಹಿಳೆಯರನ್ನು ಜಗಳ ಮಾಡುವವರು ಎಂಬಂತೆ ಬಿಂಬಿಸುತ್ತಿರುವ ಬಿಜೆಪಿಯು ಸ್ತ್ರೀ ಗೌರವವನ್ನು ಕಳೆಯುವ ಮೂಲಭೂತವಾದವನ್ನು ಸಮಾಜದಲ್ಲಿ ಸ್ಥಾಪಿಸುತ್ತಿದೆ ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.

Written by - Zee Kannada News Desk | Last Updated : Jun 3, 2023, 08:37 PM IST
  • ಗೃಹ ಲಕ್ಷ್ಮಿ ಯೋಜನೆ ಟೀಕಿಸಿದ ಸಂಸದ ಪ್ರತಾಪ್ ಸಿಂಹ ವಿರುದ್ಧ ಕಾಂಗ್ರೆಸ್ ಆಕ್ರೋಶ
  • ‘ಅತ್ತೆ ಸೊಸೆ ಜಗಳ’ ವಿಚಾರ ಮುನ್ನೆಲೆಗೆ ತಂದು ರಾಜ್ಯದ ಮಹಿಳಾ ಸಮುದಾಯವನ್ನು ಬಿಜೆಪಿ ಅವಮಾನಿಸುತ್ತಿದೆ
  • ಪ್ರತಾಪ್ ಸಿಂಹ ಅವರು ರಾಜ್ಯದ ಮಹಿಳೆಯರ ಕ್ಷಮೆ ಕೇಳಬೇಕೆಂದು ಕಾಂಗ್ರೆಸ್ ಆಗ್ರಹ
Gruha Lakshmi Scheme: ರಾಜ್ಯದ ಮಹಿಳೆಯರ ಕ್ಷಮೆ ಕೇಳುವಂತೆ ಪ್ರತಾಪ್ ಸಿಂಹಗೆ ಕಾಂಗ್ರೆಸ್ ಆಗ್ರಹ! title=
ಕಾಂಗ್ರೆಸ್ ಗೃಹ ಲಕ್ಷ್ಮಿ ಯೋಜನೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಸರ್ಕಾರದ ಗೃಹ ಲಕ್ಷ್ಮಿ ಯೋಜನೆಯನ್ನು ಟೀಕಿಸಿದ ಸಂಸದ ಪ್ರತಾಪ್ ಸಿಂಹ ವಿರುದ್ಧ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಪ್ರತಾಪ್ ಸಿಂಹ ಅವರು ರಾಜ್ಯದ ಮಹಿಳೆಯರ ಕ್ಷಮೆ ಕೇಳಬೇಕೆಂದು ಆಗ್ರಹಿಸಿದೆ.

ಈ ಬಗ್ಗೆ ಶನಿವಾರ ಟ್ವೀಟ್ ಮಾಡಿರುವ ಕಾಂಗ್ರೆಸ್, ‘"ಅತ್ತೆ ಸೊಸೆ ಜಗಳ" ಎಂಬ ವಿಚಾರವನ್ನು ಮುನ್ನೆಲೆಗೆ ತಂದು ರಾಜ್ಯದ ಮಹಿಳಾ ಸಮುದಾಯವನ್ನು ಬಿಜೆಪಿ ಅವಮಾನಿಸುತ್ತಿದೆ. ಮಹಿಳೆಯರನ್ನು ಜಗಳ ಮಾಡುವವರು ಎಂಬಂತೆ ಬಿಂಬಿಸುತ್ತಿರುವ ಬಿಜೆಪಿಯು ಸ್ತ್ರೀ ಗೌರವವನ್ನು ಕಳೆಯುವ ಮೂಲಭೂತವಾದವನ್ನು ಸಮಾಜದಲ್ಲಿ ಸ್ಥಾಪಿಸುತ್ತಿದೆ. ಪ್ರತಾಪ್ ಸಿಂಹ ಅವರು ರಾಜ್ಯದ ಮಹಿಳೆಯರ ಕ್ಷಮೆ ಕೇಳಬೇಕು’ ಎಂದು ಒತ್ತಾಯಿಸಿದೆ.

ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ ಪುಸ್ತಕ ಪ್ರಕಾಶಕರ ನಿಯೋಗ

ಜನಧನ್ ಖಾತೆ ಇದೆ ಅದಕ್ಕೆ 2 ಸಾವಿರ ರೂ. ಹಾಕಿ ಎಂದು ಕೇಳಿದ ಪ್ರತಾಪ್ ಸಿಂಹಗೆ ಕಾಂಗ್ರೆಸ್ ತಿರುಗೇಟು ನೀಡಿದೆ. ‘ಜನಧನ್ ಖಾತೆಗೆ ಮೋದಿಯವರ 15 ಲಕ್ಷ ಬರಲಿಲ್ಲವೇಕೆ? ಪ್ರತಿಯೊಬ್ಬರ ಖಾತೆಗೆ 15 ಲಕ್ಷ ರೂ. ಹಾಕುತ್ತೇವೆ ಎಂದವರು ಈಗ ಕಾಂಗ್ರೆಸ್ ಸರ್ಕಾರಕ್ಕೆ 2 ಸಾವಿರ ರೂ. ಹಾಕಿ ಎನ್ನುತ್ತಿರುವುದು ಹಾಸ್ಯಾಸ್ಪದ ಅಲ್ಲವೇ ಪ್ರತಾಪ್ ಸಿಂಹ?’ ಅಂತಾ ಕಾಂಗ್ರೆಸ್ ಪ್ರಶ್ನಿಸಿದೆ.

ಯಾರು ಯಜಮಾನಿ ಆಗುತ್ತಾರೆ?

ಕಾಂಗ್ರೆಸ್ ಸರ್ಕಾರದ ಗೃಹ ಲಕ್ಷ್ಮಿ ಯೋಜನೆಯನ್ನು ಸಂಸದ ಪ್ರತಾಪ್ ಸಿಂಹ ಅವರು ಟೀಕಿಸಿದ್ದರು. ಜನ್‍ಧನ್ ಅಕೌಂಟ್ ಓಪನ್ ಆಗಿದೆ. ಅದಕ್ಕೆ ಆಧಾರ್ ಕಾರ್ಡ್ ಲಿಂಕ್ ಆಗಿದೆ. ಹೀಗಿದ್ದರೂ ಗೃಹಲಕ್ಷ್ಮಿ ಜಾರಿ ಯಾಕೆ ಆಗುತ್ತಿಲ್ಲ? ಗೃಹಲಕ್ಷ್ಮಿ ಯೋಜನೆ ಮುಂದೂಡಲು ಕುಂಟು ನೆಪ ಹೇಳಲಾಗುತ್ತಿದೆ. ಮನೆ ಯಜಮಾನಿ ಯಾರು ಅಂತಾ ತೀರ್ಮಾನ ಮಾಡಬೇಕಂತೆ? ಮನೆಯೊಳಗೆ ಅತ್ತೆ - ಸೊಸೆ ಕೂತು ಈ ತೀರ್ಮಾನ ಮಾಡಲು ಸಾಧ್ಯನಾ?’ ಎಂದು ಪ್ರಶ್ನಿಸಿದ್ದರು.

ಇದನ್ನೂ ಓದಿ: ಒಡಿಶಾ ರೈಲು ದುರಂತ: ನೆರವಿಗೆ ಧಾವಿಸಿದ ಸಿಎಂಗೆ ವಾಲಿಬಾಲ್ ಕ್ರೀಡಾಪಟುಗಳಿಂದ ಧನ್ಯವಾದ

‘ಹಿಂದೂಗಳ ಮನೆಯಲ್ಲದರೂ ಅತ್ತೆ - ಸೊಸೆ ನಡುವೆ ಯಜಮಾನಿಗೆ ಪೈಪೋಟಿ ಇರುತ್ತದೆ. ಆದರೆ ಮುಸ್ಲಿಂರ ಮನೆಯಲ್ಲಿ ಎರಡ್ಮೂರು ಹೆಂಡ್ತಿರು ಇರುತ್ತಾರೆ. ಅವರಲ್ಲಿ ಯಾರು ಯಜಮಾನಿ ಆಗುತ್ತಾರೆ? ಅವರ ಮನೆಯೊಳಗೆ ನೀವು ಬೆಂಕಿ ಹಾಕುತ್ತಿದ್ದಿರಿ. ಕುಟುಂಬ ಒಡೆಯುವ ಕೆಲಸ ಆಗುತ್ತಿದೆ ಎಂದು ಪ್ರತಾಪ್ ಸಿಂಹ ಆರೋಪಿಸಿದ್ದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News