ಬೆಂಗಳೂರು: ಜ್ಞಾನಜ್ಯೋತಿ ಸಭಾಂಗಣದಲ್ಲಿ ಅರಣ್ಯ ಇಲಾಖೆ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದ್ದಾರೆ. ಬಳಿಕ ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಅವರು, ಮನುಷ್ಯ ಪ್ರಕೃತಿಕ ಅವಿಭಾಜ್ಯ ಅಂಗ. ಪ್ರಕೃತಿ ನಾಶ ನಮ್ಮ ನಾಶ. ಹೀಗಾಗಿ ಪ್ರಕೃತಿಯ ಜತೆಗೆ ನಾವು ಬೆಳೆಯಬೇಕು, ಬಾಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.
ನೀರು, ಗಾಳಿ, ವಿದ್ಯುತ್ ಯಾವುದನ್ನೂ ದುಂದುವೆಚ್ಚ ಮಾಡಬಾರದು. ದುಂದುವೆಚ್ಚ ಎನ್ನುವುದು ಪ್ರಕೃತಿ ವಿರೋಧಿ, ಜನ ವಿರೋಧಿ ಮತ್ತು ಪರಿಸರ ವಿರೋಧಿಯಾದದ್ದು ವಿದ್ಯುತ್ ದುಂದುವೆಚ್ಚ-ದುರುಪಯೋಗ ಮಾಡುವಂತೆ ಜನರಿಗೆ ಬಿಜೆಪಿ ಕುಮ್ಮಕ್ಕು ಕೊಡುತ್ತಿದೆ. ನಾವು ಅಗತ್ಯಕ್ಕೆ ತಕ್ಕಂತೆ ಬಳಸಲು ನಾಡಿನ ಜನತೆಗೆ ನೆರವಾಗುತ್ತೇವೆ. ದುಂದುವೆಚ್ಚ-ದುರುಪಯೋಗಕ್ಕೆ ಬ್ರೇಕ್ ಹಾಕುತ್ತೇವೆ.
ಇದನ್ನೂ ಓದಿ: Abhishek Aviva Marriage: ಅಭಿಷೇಕ್ ಅಂಬರೀಷ್ ಅವಿವಾ ಅದ್ದೂರಿ ವಿವಾಹ: ಸಿನಿ ತಾರೆಯರ ಸಮಾಗಮ
ಸಂಕಷ್ಟದಲ್ಲಿರುವ ನಾಡಿನ ಬಡವರು ಮತ್ತು ಮಧ್ಯಮ ವರ್ಗದವರ ನೆರವಿಗಾಗಿ ನಾವು ಉಚಿತ ವಿದ್ಯುತ್ ನೀಡಲು ಮುಂದಾಗಿದ್ದೇವೆ. ಒಂದು ವರ್ಷದ ಸರಾಸರಿ ಬಳಕೆಗಿಂತ ಶೇ10 ರಷ್ಟು ಹೆಚ್ಚು ಉಚಿತ ವಿದ್ಯುತ್ ಬಳಕೆಗೆ ನಾವು ಅವಕಾಶ ನೀಡಿದ್ದೇವೆ. ಇದನ್ನು ನಾಡಿನ ಜನತೆ ಸಂಭ್ರಮದಿಂದ ಒಪ್ಪಿಕೊಂಡಿದ್ದಾರೆ ಮತ್ತು ಸ್ವೀಕರಿಸಿದ್ದಾರೆ.
ಆದರೆ ಜನರಿಂದ ತಿರಸ್ಕೃತಗೊಂಡಿರುವ ಬಿಜೆಪಿ, ವಿದ್ಯುತ್ ಅನ್ನು ಅನಗತ್ಯ ದುರ್ಬಳಕೆ-ದುಂದುವೆಚ್ಚ-ದುರುಪಯೋಗ ಮಾಡಲು ಕುಮ್ಮಕ್ಕು ಕೊಡುತ್ತಿದೆ. ಇದು ಅತ್ಯಂತ ಜನವಿರೋಧಿಯಾದದ್ದು. ನಾಡಿನ ಪ್ರಜ್ಞಾವಂತ ಜನತೆ ಇದಕ್ಕೆ ಸೊಪ್ಪಾಕುವುದಿಲ್ಲ ಎನ್ನುವ ಭರವಸೆ ನಮಗಿದೆ ಎಂದರು.
ಇದನ್ನೂ ಓದಿ: Actor Dhananjay: ನಟ ಡಾಲಿ ಧನಂಜಯ್ ನಿರ್ಮಾಣದ ಸಿನಿಮಾ ಚಿತ್ರೀಕರಣ ಮುಕ್ತಾಯ!
ಪರಿಸರ ಉಳಿಸುವುದು, ಕಾಡು ಬೆಳೆಸುವುದು ಮತ್ತು ಉಳಿಸುವುದು ಕೇವಲ ಅರಣ್ಯ ಇಲಾಖೆ ಕರ್ತವ್ಯ ಅಲ್ಲ. ಪ್ರತಿಯೊಬ್ಬರ ಜವಾಬ್ದಾರಿ. ಪ್ರಕೃತಿಯ ಪ್ರಯೋಜನವನ್ನು ಪಡೆಯುತ್ತಿರುವ ಪ್ರತಿಯೊಬ್ಬರ ಮೇಲೂ ಪ್ರಕೃತಿ ಉಳಿಸುವ ಜವಾಬ್ದಾರಿ ಇದೆ ಎಂದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.