ಲಂಡನ್: ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ನ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ತಂಡವು ಆಸ್ಟ್ರೇಲಿಯಾ ತಂಡದ ವಿರುದ್ಧ 209 ರನ್ ಗಳ ಅಂತರದಿಂದ ಸೋಲನ್ನು ಅನುಭವಿಸುವ ಮೂಲಕ ಮತ್ತೊಮ್ಮೆ ನಿರಾಸೆಯನ್ನು ಅನುಭವಿಸಿದೆ.ಆಸ್ಟ್ರೇಲಿಯಾ ತಂಡವು ನೀಡಿದ 444 ರನ್ ಗಳ ಗೆಲುವಿನ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ತಂಡವು ಎರಡನೇ ಇನಿಂಗ್ಸ್ ನಲ್ಲಿ ಕೇವಲ 234 ರನ್ ಗಳಿಗೆ ಸರ್ವಪತನವನ್ನು ಕಂಡಿದೆ.
ಟಾಸ್ ಗೆದ್ದ ಟೀಮ್ ಇಂಡಿಯಾ ತಂಡವು ಆಸ್ಟ್ರೇಲಿಯಾ ತಂಡಕ್ಕೆ ಬ್ಯಾಟಿಂಗ್ ಅವಕಾಶವನ್ನು ನೀಡಿತು. ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡ ಆಸ್ಟ್ರೇಲಿಯಾ ಪಡೆ ಮೊದಲ ಇನಿಂಗ್ಸ್ ನಲ್ಲಿ 469 ರನ್ ಗಳ ಬೃಹತ್ ಮೊತ್ತವನ್ನು ಗಳಿಸಿತು. ಆಸಿಸ್ ಪರವಾಗಿ ಸ್ಟೀವನ್ ಸ್ಮಿತ್ 121 ಹಾಗೂ ಟ್ರಾವಿಸ್ ಹೆಡ್ 163 ರನ್ ಗಳಿಸುವ ಮೂಲಕ ತಂಡಕ್ಕೆ ನೆರವಾದರು.
The first team to win all the ICC Men's titles 👏#WTC23 | #AUSvIND pic.twitter.com/wo1Y6la2Lx
— ICC (@ICC) June 11, 2023
ಇದಕ್ಕೆ ಉತ್ತರವಾಗಿ ಮೊದಲ ಇನಿಂಗ್ಸ್ ನಲ್ಲಿ ಟೀಮ್ ಇಂಡಿಯಾ ತಂಡವು 296 ರನ್ ಗಳಿಗೆ ಸರ್ವಪತವನ್ನು ಕಂಡಿತು.ಟೀಮ್ ಇಂಡಿಯಾದ ಪರವಾಗಿ ಅಜಿಂಕ್ಯಾ ರಹಾನೆ 89, ಹಾಗೂ ಶಾರ್ದುಲ್ ಠಾಕೂರ್ 51 ಹಾಗೂ ರವಿಂದ್ರ ಜಡೇಜಾ 48 ರನ್ ಗಳನ್ನು ಗಳಿಸಿದರು.
ಇನ್ನೊಂದೆಡೆಗೆ ಎರಡನೇ ಇನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ತಂಡವು ಎಂಟು ವಿಕೆಟ್ ಕಳೆದುಕೊಂಡು 270 ರನ್ ಗಳಿಗೆ ಇನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿತು. ಆ ಮೂಲಕ ಟೀಮ್ ಇಂಡಿಯಾಗೆ 444 ರನ್ ಗಳ ಬೃಹತ್ ಗೆಲುವಿನ ಗುರಿಯನ್ನು ನೀಡಿತು.
ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ನಿರೀಕ್ಷಿತ ಪ್ರದರ್ಶನವನ್ನು ನೀಡುವಲ್ಲಿ ವಿಫಲವಾಯಿತು. ರೋಹಿತ್ ಶರ್ಮಾ 43,ವಿರಾಟ್ ಕೊಹ್ಲಿ 49 ಹಾಗೂ ಅಜಿಂಕ್ಯಾ ರಹಾನೆ 46 ರನ್ ಗಳಿಸಿದರೂ ಕೂಡ ತಂಡವನ್ನು ಗೆಲುವಿನ ದಡಕ್ಕೆ ಸೇರಿಸುವಲ್ಲಿ ವಿಫಲರಾದರು. ಅಂತಿಮವಾಗಿ ಟೀಮ್ ಇಂಡಿಯಾ 234 ರನ್ ಗಳಿಗೆ ಆಲೌಟ್ ಆಗುವ ಮೂಲಕ ಸೋಲನ್ನು ಅನುಭವಿಸಿತು. ಇನ್ನೊಂದೆಡೆಗೆ ಆಸಿಸ್ ತಂಡವು ಮೊದಲ ಬಾರಿಗೆ 209 ರನ್ ಗಳ ಅಂತರದಿಂದ ಫೈನಲ್ ಟೆಸ್ಟ್ ಪಂದ್ಯವನ್ನು ಗೆಲ್ಲುವ ಮೂಲಕ ವಿಶ್ವ ಚಾಂಪಿಯನ್ ಪಟ್ಟವನ್ನು ಅಲಂಕರಿಸಿತು.ಆ ಮೂಲಕ ಐಸಿಸಿ ಯ ಎಲ್ಲಾ ಟ್ರೋಪಿಗಳನ್ನು ತನ್ನದಾಗಿಸಿಕೊಂಡ ಮೊದಲ ತಂಡ ಎನ್ನುವ ಹೆಗ್ಗಳಿಕೆಗೆ ಆಸೀಸ್ ತಂಡವು ಪಾತ್ರವಾಗಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.