ಕಾನೂನು ಪದವೀಧರರಿಗೆ ನ್ಯಾಯಾಂಗ ಆಡಳಿತ ವೃತ್ತಿ ತರಬೇತಿಗೆ ಅರ್ಜಿ ಆಹ್ವಾನ

 ಸಮಾಜ ಕಲ್ಯಾಣ ಇಲಾಖೆಯಿಂದ 2023-24 ನೇ ಸಾಲಿಗಾಗಿ ಧಾರವಾಡ ಜಿಲ್ಲೆಯಲ್ಲಿರುವ ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಗೆ ನ್ಯಾಯಾಂಗ ಆಡಳಿತ ವೃತ್ತಿ ತರಬೇತಿ ಅವಧಿಯಲ್ಲಿ ಶಿಷ್ಯವೇತನ ಪಾವತಿಸುವ ಕಾರ್ಯಕ್ರಮದಡಿ ಅರ್ಹ ಕಾನೂನು ಪದವೀಧರರನ್ನು ಆಯ್ಕೆ ಮಾಡಲು ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

Written by - Zee Kannada News Desk | Last Updated : Jun 13, 2023, 06:44 PM IST
  • ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 10,000 ಗಳ ಶಿಷ್ಯವೇತನವನ್ನು 2 ವರ್ಷಗಳ ಕಾಲ ನೀಡಲಾಗುವುದು.
  • ಅರ್ಜಿ ಸಲ್ಲಿಸಲು ಜುಲೈ 15 ಕೂನೆಯ ದಿನವಾಗಿದೆ
  • ಹೆಚ್ಚಿನ ಮಾಹಿತಿಗಾಗಿ ದೂರವಾಣಿ: 0836-2447201 ಹಾಗೂ ಅಪರ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಡಿ.ಸಿ.ಕಂಪೌಂಡ, ಧಾರವಾಡ ಇವರ ಕಛೇರಿಗೆ ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಅಪರ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾನೂನು ಪದವೀಧರರಿಗೆ ನ್ಯಾಯಾಂಗ ಆಡಳಿತ ವೃತ್ತಿ ತರಬೇತಿಗೆ ಅರ್ಜಿ ಆಹ್ವಾನ title=
ಸಾಂದರ್ಭಿಕ ಚಿತ್ರ

ಧಾರವಾಡ : ಸಮಾಜ ಕಲ್ಯಾಣ ಇಲಾಖೆಯಿಂದ 2023-24 ನೇ ಸಾಲಿಗಾಗಿ ಧಾರವಾಡ ಜಿಲ್ಲೆಯಲ್ಲಿರುವ ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಗೆ ನ್ಯಾಯಾಂಗ ಆಡಳಿತ ವೃತ್ತಿ ತರಬೇತಿ ಅವಧಿಯಲ್ಲಿ ಶಿಷ್ಯವೇತನ ಪಾವತಿಸುವ ಕಾರ್ಯಕ್ರಮದಡಿ ಅರ್ಹ ಕಾನೂನು ಪದವೀಧರರನ್ನು ಆಯ್ಕೆ ಮಾಡಲು ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಇದನ್ನೂ ಓದಿ: ಹೊಂದಾಣಿಕೆ ರಾಜಕೀಯ ಎಂದಿರುವ ಪ್ರತಾಪ್ ಮಾತಿಗೆ ತೂಕ, ಮಾನ್ಯತೆ ಇಲ್ಲಾ: ಸಚಿವ ಎಚ್.ಸಿ‌‌‌.ಎಂ

 ಅಭ್ಯರ್ಥಿಯ ಕುಟುಂಬದ ವಾರ್ಷಿಕ ವರಮಾನ ರೂ. 2.50 ಲಕ್ಷ ಆದಾಯ ಮಿತಿ ಹೊಂದಿರುವ, 40 ವರ್ಷ ವಯೋಮಾನದೊಳಗಿರುವ ಮತ್ತು ಕಾನೂನು ಪದವಿ ಪಡೆದ 2 ವರ್ಷದೊಳಗಿನ ಅರ್ಹ ಮತ್ತು ಆಸಕ್ತಿಯುಳ್ಳ ಪರಿಶಿಷ್ಟ ಜಾತಿ ಕಾನೂನು ಪದವೀಧರರು www.sw.kar.nic.in ವೆಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: ಸರ್ಕಾರ ಬಂದು 20 ದಿನ ಆಗಿಲ್ಲ, ಯಾವ ಪರ್ಸೇಂಟೇಜ್ ತಗೋಳೋದು: ಎಚ್ ಡಿಕೆಗೆ ವೆಂಕಟೇಶ್ ಟಾಂಗ್

ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 10,000 ಗಳ ಶಿಷ್ಯವೇತನವನ್ನು 2 ವರ್ಷಗಳ ಕಾಲ ನೀಡಲಾಗುವುದು. ಅರ್ಜಿ ಸಲ್ಲಿಸಲು ಜುಲೈ 15 ಕೂನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ: 0836-2447201 ಹಾಗೂ ಅಪರ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಡಿ.ಸಿ.ಕಂಪೌಂಡ, ಧಾರವಾಡ ಇವರ ಕಛೇರಿಗೆ ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಅಪರ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

Trending News