Diabetics Tips: ಮಧುಮೇಹದಿಂದ ಬಳಲುತ್ತಿರುವವರು ನಿಯಮಿತ ವ್ಯಾಯಾಮ ಮಾಡಬೇಕು ಮತ್ತು ಜೀವನಶೈಲಿಯ ಬದಲಾವಣೆಗಳೊಂದಿಗೆ ಸಮತೋಲಿತ ಆಹಾರವನ್ನು ತೆಗೆದುಕೊಳ್ಳುವುದು ತುಂಬಾ ಮುಖ್ಯವಾಗಿದೆ.
Diabetics Tips: ಮಧುಮೇಹದಿಂದ ಬಳಲುತ್ತಿರುವವರು ನಿಯಮಿತ ವ್ಯಾಯಾಮ ಮಾಡಬೇಕು ಮತ್ತು ಜೀವನಶೈಲಿಯ ಬದಲಾವಣೆಗಳೊಂದಿಗೆ ಸಮತೋಲಿತ ಆಹಾರವನ್ನು ತೆಗೆದುಕೊಳ್ಳುವುದು ತುಂಬಾ ಮುಖ್ಯವಾಗಿದೆ. ಸಮತೋಲಿತ ಆಹಾರದ ವಿಷಯಕ್ಕೆ ಬಂದಾಗ, ಹಣ್ಣುಗಳು ಅದರ ಪ್ರಮುಖ ಭಾಗವಾಗಿದೆ. ಆದರೂ ಕೂಡ ಕೆಲವು ಹಣ್ಣುಗಳನ್ನು ಸೇವಿಸಿದಾಗ ಅವು ಮಧುಮೇಹ ರೋಗಿಗಳಿಗೆ 'ವಿಷ' ಆಗಿ ಪರಿಣಮಿಸಬಹುದು. ಭಾರತದ ಖ್ಯಾತ ಪೌಷ್ಟಿಕತಜ್ಞ ನಿಖಿಲ್ ವಾಟ್ಸ್ ಅವರು ಮಧುಮೇಹಿಗಳು ಸೇವಿಸಲೇಬಾರದ 5 ಹಣ್ಣುಗಳು ಯಾವುವು ಎಂಬುದನ್ನು ಹೇಳಿದ್ದಾರೆ.
ಇದನ್ನೂ ಓದಿ-Health Tips: ಸ್ಟೀಲ್ ಪಾತ್ರೆಯಲ್ಲಿ ಆಹಾರ ಬೇಯಿಸುವುದರಿಂದಾಗುವ ಈ ಅಡ್ಡ ಪರಿಣಾಮಗಳು ನಿಮಗೂ ಗೊತ್ತಿರಲಿ!
ಇದನ್ನೂ ನೋಡಿ-
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
1. ಮಾವಿನ ಹಣ್ಣು ಯಾರಿಗೆ ತಾನೇ ಇಷ್ಟ ಇಲ್ಲ ಹೇಳಿ ನೋಡೋಣ, ಭಾರತದಲ್ಲಿ ಮಾತ್ರವಲ್ಲದೆ ಇಡೀ ವಿಶ್ವಾದ್ಯಂತ ಅದರ ಟೇಸ್ಟ್ ಪ್ರಸಿದ್ಧವಾಗಿದೆ, ಜನರು ವಿಶೇಷವಾಗಿ ಬೇಸಿಗೆಯಲ್ಲಿ ಈ ಹಣ್ಣಿನ ರುಚಿಯನ್ನು ಸವಿಯಲು ಕಾಯುತ್ತಾರೆ, ಆದರೆ ಇದು ಮಧುಮೇಹ ರೋಗಿಗಳಿಗೆ ಒಳ್ಳೆಯದಲ್ಲ, ಇದು ಸಕ್ಕರೆಯ ಮಟ್ಟವನ್ನು ತ್ವರಿತವಾಗಿ ಹೆಚ್ಚಿಸುತ್ತದೆ.
2. ಬಾಳೆಹಣ್ಣು ವರ್ಷವಿಡೀ ಲಭ್ಯವಿರುವ ಒಂದು ಸಾಮಾನ್ಯವಾದ ಹಣ್ಣು ಮತ್ತು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ, ಆದರೆ ಇದು ಮಧುಮೇಹ ರೋಗಿಗಳಿಗೆ ವರ್ಜವಾಗಿದೆ, ಏಕೆಂದರೆ ಇದು ಗ್ಲೈಸೆಮಿಕ್ ಇಂಡೆಕ್ಸ್ ಸ್ಕೋರ್ (62) ಅನ್ನು ಹೊಂದಿರುವುದರಿಂದ ಮಧುಮೇಹಿಗಳ ಆರೋಗ್ಯಕ್ಕೆ ಒಳ್ಳೆಯದಲ್ಲ
3. ಬಿಹಾರದ ಮುಜಾಫರ್ಪುರ ಜಿಲ್ಲೆಯ ಲಿಚಿಯನ್ನು ಬಹಳಷ್ಟು ಜನರು ಇಷ್ಟಪಡುತ್ತಾರೆ, ಆದರೆ ಇದು 16 ಗ್ರಾಂ ಸಕ್ಕರೆಯನ್ನು ಹೊಂದಿರುತ್ತದೆ, ಆದ್ದರಿಂದ ಆರೋಗ್ಯ ತಜ್ಞರು ಮಧುಮೇಹ ರೋಗಿಗಳಿಗೆ ಇದರಿಂದ ದೂರವಿರಲು ಸಲಹೆ ನೀಡುತ್ತಾರೆ.
4. ಅನಾನಸ್ ಅಥವಾ ಪೈನಾಪಲ್ ಮಾಧುರ್ಯವು ಅನೇಕರನ್ನು ತನ್ನತ್ತ ಆಕರ್ಷಿಸುತ್ತದೆ, ಆದರೆ ಅದರಲ್ಲಿನ ಹೆಚ್ಚಿನ ಸಕ್ಕರೆ ಅಂಶವು ಮಧುಮೇಹ ರೋಗಿಗಳಿಗೆ ಶತ್ರುಗಳಿಗಿಂತ ಕಡಿಮೆಯಿಲ್ಲ. ಅದನ್ನು ಎಂದಿಗೂ ತಿನ್ನಬೇಡಿ, ಇಲ್ಲದಿದ್ದರೆ ರಕ್ತದಲ್ಲಿನ ಗ್ಲೂಕೋಸ್ ಮಟ್ಟವು ಇದ್ದಕ್ಕಿದ್ದಂತೆ ಹೆಚ್ಚಾಗಬಹುದು.
5. ರಸಭರಿತವಾದ ಮತ್ತು ಟೇಸ್ಟಿ ಕಲ್ಲಂಗಡಿ ಹಣ್ಣಿನಲ್ಲಿ ಹೆಚ್ಚಿನ ಸಕ್ಕರೆ ಅಂಶ ಹೆಚ್ಚಾಗಿರುತ್ತದೆ ಮತ್ತು ಹೆಚ್ಚಿನ ಗ್ಲೈಸೆಮಿಕ್ ಇಂಡೆಕ್ಸ್ ಸ್ಕೋರ್ (76) ಅನ್ನು ಇದು ಹೊಂದಿದೆ. ಆದ್ದರಿಂದ, ಮಧುಮೇಹ ರೋಗಿಗಳು ಕಲ್ಲಂಗಡಿ ಹಣ್ಣನ್ನು ಕನಿಷ್ಠ ಪ್ರಮಾಣದಲ್ಲಿ ಸೇವಿಸಬೇಕು ಎಂದು ಸಲಹೆ ನೀಡಲಾಗುತ್ತದೆ, ಇಲ್ಲದಿದ್ದರೆ ರಕ್ತದಲ್ಲಿನ ಸಕ್ಕರೆಯ ಮಟ್ಟವು ವೇಗವಾಗಿ ಹೆಚ್ಚಾಗುತ್ತದೆ. (ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿ ಸಾಮಾನ್ಯ ಜ್ಞಾನ ಹಾಗೂ ಮನೆಮದ್ದು ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಈ ಮಾಹಿತಿಯನ್ನು ಪುಷ್ಠಿಕರಿಸುವುದಿಲ್ಲ)