ಬೆಂಗಳೂರು: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ 2023-24ನೇ ಸಾಲಿಗೆ “ಅರಿವು ಶೈಕ್ಷಣಿಕ ಸಾಲ” ಯೋಜನೆಯಡಿ ವಿದ್ಯಾಭ್ಯಾಸಕ್ಕಾಗಿ ಸಾಲ ಪಡೆಯಲು ಮತೀಯ ಅಲ್ಪಸಂಖ್ಯಾತರ ವರ್ಗಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್ಖರು, ಬೌದ್ಧ, ಪಾರ್ಸಿ ಹಾಗೂ ಆಂಗ್ಲೋ ಇಂಡಿಯನ್ ಜನಾಂಗಕ್ಕೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಇದನ್ನೂ ಓದಿ: ಶಕ್ತಿ ಯೋಜನೆ ಪರಿಣಾಮ: ಬಸ್ ಇಲ್ಲದೇ ವಿದ್ಯಾರ್ಥಿಗಳ ಪರದಾಟ, ಹಲವೆಡೆ ಪ್ರತಿಭಟನೆ
ಸಿ.ಇ.ಟಿ./ ನೀಟ್ ಪರೀಕ್ಷೆಗೆ ಆಯ್ಕೆಯಾದ ವಿವಿಧ ವೃತ್ತಿಪರ ಕೋರ್ಸ್ಗಳಾದ ವೈದ್ಯಕೀಯ (ಎಮ್.ಬಿ.ಬಿ.ಎಸ್.) ಹಾಗೂ ಬಿ.ಡಿ.ಎಸ್., ಬಿ.ಇ., ಬಿ-ಟೆಕ್, ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್ ಹಾಗೂ ಆಯುಶ್ದಂತಹ ಪದವಿ ಕೋರ್ಸ್ಗಳಿಗೆ ಆಯ್ಕೆಯಾದ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ “ಅರಿವು ಶೈಕ್ಷಣಿಕ ಸಾಲ ಯೋಜನೆ ”ಯಡಿ ವಿದ್ಯಾಭ್ಯಾಸ ಸಾಲ ಪಡೆಯಲು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ: ಕೇಂದ್ರದ ದ್ವೇಷ ರಾಜಕಾರಣ, ಬಡವರ ವಿರೋಧಿ ನೀತಿ ವಿರುದ್ಧ ಜೂ. 20 ಪ್ರತಿಭಟನೆ
ಈಗಾಗಲೇ ಜೂನ್ 13 ರಿಂದ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅರ್ಹ ಅಭ್ಯರ್ಥಿಗಳು ನಿಗಮದ http//kmdconline.karnataka.gov.in ವೆಬ್ಸೈಟ್ದಲ್ಲಿ ಆನ್ಲೈನ್ ಮೂಲಕ 2023ರ ಜುಲೈ 10 ರೊಳಗಾಗಿ ಅರ್ಜಿ ಸಲ್ಲಿಸಬೇಕು. ನಂತರ ಸದರಿ ಅರ್ಜಿಯ ಜೊತೆಗೆ ಆನ್ಲೈನ್ದಲ್ಲಿ ನೋಂದಾಯಿಸಿರುವ ಎಲ್ಲಾ ದಾಖಲಾತಿಗಳನ್ನು ಲಗತ್ತಿಸಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ಕಚೇರಿಗೆ 2023ರ ಜುಲೈ 15 ರೊಳಗಾಗಿ ಅರ್ಜಿ ಸಲ್ಲಿಸಬೇಕು.ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಸಂಪರ್ಕಿಸಲು ಕೋರಲಾಗಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.