ಬೆಂಗಳೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿ ವೇತನಕ್ಕಾಗಿ ಅರ್ಹ ವಿದ್ಯಾರ್ಥಿ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
2022-23ನೇ ಸಾಲಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ರಾಜ್ಯ ಸರ್ಕಾರದ ಕ್ರೀಡಾ ವಿದ್ಯಾರ್ಥಿ ವೇತನ ಯೋಜನೆ ಅಡಿ ಪ್ರತಿಭಾವಂತ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಮಾಧ್ಯಮಿಕ, ಪ್ರೌಢಶಾಲಾ ವಿದ್ಯಾರ್ಥಿಗಳಿಗೆ (6ನೇ ತರಗತಿಯಿಂದ 10ನೇ ತರಗತಿಯವರೆಗೆ)ಗಳಿಗೆ ವಾರ್ಷಿಕ ರೂ. 10,000 ಗಳಂತೆ ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿ ವೇತನವನ್ನು ನೀಡುವ ಯೋಜನೆ ಇಲಾಖೆಯಲ್ಲಿ ಜಾರಿಯಲ್ಲಿದ್ದು, ಈ ಯೋಜನೆಯನ್ವಯ ಪ್ರಸ್ತುತ ಮಾಧ್ಯಮಿಕ, ಪ್ರೌಢಶಾಲೆಯಲ್ಲಿ ಓದುತ್ತಿರುವ ಕ್ರೀಡಾಪಟುಗಳಿಗೆ ವಿದ್ಯಾರ್ಥಿ ವೇತನ ನೀಡಲಾಗುವುದು.
ಇದನ್ನೂ ಓದಿ: ಜ್ಞಾಪಕ ಶಕ್ತಿ & ಏಕಾಗ್ರತೆ ಹೆಚ್ಚಲು ಈ 5 ಯೋಗ ಭಂಗಿಗಳು ಸಹಾಯಕ...!
ಅರ್ಜಿದಾರರು 2022-23ನೇ ಸಾಲಿನಲ್ಲಿ ವಿದ್ಯಾರ್ಥಿಯಾಗಿದ್ದು, ಮಾಧ್ಯಮಿಕ, ಪ್ರೌಢಶಾಲೆ (6 ರಿಂದ 10ನೇ ತರಗತಿ)ಯಲ್ಲಿ ಓದುತ್ತಿರಬೇಕು. ಅರ್ಜಿದಾರರು ರಾಜ್ಯ ಕ್ರೀಡಾ ಪ್ರಾಧಿಕಾರದಲ್ಲಿ ನೋಂದಾಯಿತವಾದ ಕ್ರೀಡಾ ಸಂಸ್ಥೆಗಳು 2022ರ ಏಪ್ರಿಲ್ 01ರಿಂದ 2023ರ ಮಾರ್ಚ್ 31ರ ವರೆಗೆ ನಡೆಸಿದ ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿರಬೇಕು ಅಥವಾ ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಅಧಿಕೃತ ಕ್ರೀಡಾ ಸಂಸ್ಥೆಗಳು ಆಯೋಜಿಸುವ ರಾಷ್ಟç ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿರಬೇಕು. ಅಂದರೆ ಏಪ್ರಿಲ್ 01ರಿಂದ 2023ರ ಮಾರ್ಚ್ 31ರ ವರೆಗೆ ಅವಧಿಯಲ್ಲಿ ನಡೆದ ಕ್ರೀಡಾಕೂಟಗಳಲ್ಲಿನ ಸಾಧನೆಗಳನ್ನು ಮಾತ್ರ ಪರಿಗಣಿಸಲಾಗುವುದು.
ರಾಷ್ಟ್ರೀಯ ಖೇಲೋ ಇಂಡಿಯಾ ಕ್ರೀಡಾಕೂಟಗಳಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿ ಭಾಗವಹಿಸಿದ್ದಲ್ಲಿ ಅಂತಹ ಕ್ರೀಡಾಪಟುಗಳು ಹಾಗೂ ರಾಷ್ಟ್ರೀಯ ಶಾಲಾ ಕ್ರೀಡಾಕೂಟದಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿ ಭಾಗವಹಿಸಿದ್ದಲ್ಲಿ ಅಂತಹ ಕ್ರೀಡಾಪಟುಗಳು ಅರ್ಜಿ ಸಲ್ಲಿಸಬಹುದಾಗಿದೆ. ಒಬ್ಬ ಕ್ರೀಡಾಪಟು ಒಂದಕ್ಕಿಂತ ಹೆಚ್ಚು ಕ್ರೀಡೆಗಳಲ್ಲಿ ಭಾಗವಹಿಸಿದ್ದರೂ ಸಹ ವಾರ್ಷಿಕ ಒಂದೇ ವಿದ್ಯಾರ್ಥಿ ವೇತನದ ಮೊತ್ತಕ್ಕೆ ಮಾತ್ರ ಅರ್ಹರಿರುತ್ತಾರೆ. ವಿದ್ಯಾರ್ಥಿ ವೇತನದ ಮೊತ್ತವನ್ನು ವಾರ್ಷಿಕ ರೂ. 10,000 ಗಳನ್ನು ಮಾತ್ರ ಮಂಜೂರು ಮಾಡಲಾಗುವುದು.
ಇದನ್ನೂ ಓದಿ: ಹೊಟ್ಟೆನೋವು ಮತ್ತು ಭೇದಿಯಾಗುತ್ತಿದೆಯೇ? ಇಲ್ಲಿವೆ ಸೂಪರ್ ಮನೆಮದ್ದುಗಳು
ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸಲಿಚ್ಛೀಸುವ ಅರ್ಹ ಕ್ರೀಡಾಪಟುಗಳು ಇಲಾಖೆಯ ಅಧಿಕೃತ ಜಾಲತಾಣ http://sevasindhuservices.karnataka.gov.in ಮೂಲಕ ಜುಲೈ 31 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಇಲ್ಲಿಗೆ ಸಂಪರ್ಕಿಸಬಹುದಾಗಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.