ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಮಾಹಿತಿ 

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2023-24ನೇ ಸಾಲಿಗೆ ಮೆಟ್ರಿಕ್ ನಂತರ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

Written by - Zee Kannada News Desk | Last Updated : Jun 22, 2023, 03:30 PM IST
  • ಈ ವಸತಿ ನಿಲಯಗಳಲ್ಲಿ ಪಿಯುಸಿ ಮತ್ತು ಪಿಯುಸಿ ಸಮನಾಂತರ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶವಿರುತ್ತದೆ.
  • ಪ್ರವೇಶ ಬಯಸುವ ಪ್ರವರ್ಗ-1, ಎಸ್ಸಿ ಮತ್ತು ಎಸ್ಟಿ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯ ಮಿತಿ ರೂ. 2.50 ಲಕ್ಷಕ್ಕೆ ಮೀರಿರಬಾರದು.
  • ಪ್ರವರ್ಗ-2ಎ, 2ಬಿ, 3ಎ, 3ಬಿ, ಇತರೆ ಹಿಂದುಳಿದ ವರ್ಗ ಹಾಗೂ ಇತರೆ ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ ರೂ. 1 ಲಕ್ಷದೊಳಗಿರಬೇಕು.
 ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಮಾಹಿತಿ  title=
ಸಾಂದರ್ಭಿಕ ಚಿತ್ರ

ಬೆಂಗಳೂರು : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2023-24ನೇ ಸಾಲಿಗೆ ಮೆಟ್ರಿಕ್ ನಂತರ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಇದನ್ನೂ ಓದಿ: ಬ್ಯಾಕ್ ಟು ಬ್ಯಾಕ್ 8 ವಿವಾದಕ್ಕೆ ಗುರಿಯಾದ ಸೌರವ್ ಗಂಗೂಲಿ! ಕ್ರಿಕೆಟ್ ಜಗತ್ತನ್ನೇ ಅಚ್ಚರಿಗೊಳಿಸಿದ ಕಾಂಟ್ರವರ್ಸಿ

ಮಾನದಂಡಗಳೇನು?

-ಈ ವಸತಿ ನಿಲಯಗಳಲ್ಲಿ ಪಿಯುಸಿ ಮತ್ತು ಪಿಯುಸಿ ಸಮನಾಂತರ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶವಿರುತ್ತದೆ.
-ಪ್ರವೇಶ ಬಯಸುವ ಪ್ರವರ್ಗ-1, ಎಸ್ಸಿ ಮತ್ತು ಎಸ್ಟಿ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯ ಮಿತಿ ರೂ. 2.50 ಲಕ್ಷಕ್ಕೆ ಮೀರಿರಬಾರದು.
-ಪ್ರವರ್ಗ-2ಎ, 2ಬಿ, 3ಎ, 3ಬಿ, ಇತರೆ ಹಿಂದುಳಿದ ವರ್ಗ ಹಾಗೂ ಇತರೆ ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ ರೂ. 1 ಲಕ್ಷದೊಳಗಿರಬೇಕು.

ಇದನ್ನೂ ಓದಿ: ಚಿಕ್ಕೋಡಿಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನ ಆಚರಣೆ

ವಿದ್ಯಾರ್ಥಿಗಳು ತಾಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಮತ್ತು ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ ಇಲಾಖೆ ವೆಬ್‌ಸೈಟ್ www.bcwd.karnataka.gov.in ನ್ನು ನೋಡಬಹುದು ಅಥವಾ ಜಿಲ್ಲಾ, ತಾಲೂಕು ಅಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರನ್ನು ಅಗತ್ಯ ದಾಖಲೆಗಳೊಂದಿಗೆ ನೇರವಾಗಿ ಸಂಪರ್ಕಿಸಬಹುದು.ಹೆಚ್ಚಿನ ಮಾಹಿತಿಗಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News