ಅಕ್ಕಿ ವಿತರಣೆಯಲ್ಲಿ ರಾಜಕೀಯ ಬೇಡ: ಕೇಂದ್ರ ಗೃಹ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಮನವಿ

CM Siddaramaiah: ಸೌಹಾರ್ದ ಭೇಟಿಯ ವೇಳೆ ಕೇಂದ್ರದ ಇತ್ತೀಚಿನ ನೀತಿ ಆಹಾರ ಭದ್ರತಾ ಕಾಯ್ದೆಗೆ ವಿರುದ್ಧವಾಗಿದೆ. ಇದು ನೇರವಾಗಿ ಬಡವರ ಎರಡು ಹೊತ್ತಿನ ಊಟಕ್ಕೂ ತೊಂದರೆ ಕೊಡುತ್ತದೆ. ಆದ್ದರಿಂದ ರಾಜ್ಯಗಳಿಗೆ ಆಹಾರ ಧಾನ್ಯಗಳನ್ನು ಕೊಡದಿರುವ ಧೋರಣೆ ಬದಲಾದರೆ ಒಳ್ಳೆಯದು ಎನ್ನುವ ಅಭಿಪ್ರಾಯವನ್ನು ಮುಖ್ಯಮಂತ್ರಿಗಳು ವ್ಯಕ್ತಪಡಿಸಿದ್ದಾರೆ.

Written by - Bhavishya Shetty | Last Updated : Jun 22, 2023, 10:24 AM IST
    • ಅಕ್ಕಿ ವಿತರಣೆ ಬಗ್ಗೆ ರಾಜಕೀಯ ಅಥವಾ ದ್ವೇಷದ ರಾಜಕಾರಣ ಮಾಡುವುದು ಬೇಡ
    • ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ
    • ಸೌಹಾರ್ದ ಭೇಟಿಯ ವೇಳೆ ಕೇಂದ್ರದ ಇತ್ತೀಚಿನ ನೀತಿ ಆಹಾರ ಭದ್ರತಾ ಕಾಯ್ದೆಗೆ ವಿರುದ್ಧವಾಗಿದೆ ಎಂದ ಸಿಎಂ
ಅಕ್ಕಿ ವಿತರಣೆಯಲ್ಲಿ ರಾಜಕೀಯ ಬೇಡ: ಕೇಂದ್ರ ಗೃಹ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಮನವಿ title=
Chief Minister Siddaramaiah

ನವದೆಹಲಿ: ಅಕ್ಕಿ ವಿತರಣೆ ಬಗ್ಗೆ ರಾಜಕೀಯ ಅಥವಾ ದ್ವೇಷದ ರಾಜಕಾರಣ ಮಾಡುವುದು ಬೇಡ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ತಿಳಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇದನ್ನೂ ಓದಿ: 30 ದಿನ ರಜೆ ಕೊಡಿ, ಇಲ್ಲಂದ್ರೆ ಒತ್ತಡದಲ್ಲಿ ಏನಾದ್ರು ಆದ್ರೆ ನೀವೇ ಜವಾಬ್ದಾರಿ!

ಅವರು ನವದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಈ ವಿಷಯ ಪ್ರಸ್ತಾಪಿಸಿದರು.

“ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ,  ಎಫ್.ಸಿ.ಐ  ಅಕ್ಕಿ ನೀಡುವ ವಿಚಾರದಲ್ಲಿ ಒಪ್ಪಿಗೆ ಪತ್ರವನ್ನು ನೀಡಿ  ಮರುದಿನವೇ ಅಕ್ಕಿ ವಿತರಣೆಯನ್ನು ರಾಜ್ಯಗಳಿಗೆ ಸ್ಥಗಿತಗೊಳಿಸಿಗಿರುವ  ವಿಚಾರವನ್ನು ಗಮನಕ್ಕೆ ತರಲಾಗಿದೆ.  ಅಮಿತ್ ಶಾ ಅವರು ಸಂಬಂಧಪಟ್ಟ ಮಂತ್ರಿಗಳ ಜೊತೆ ಮಾತನಾಡುತ್ತೇನೆ ಎಂದು ಭರವಸೆ ನೀಡಿದ್ದಾರೆ” ಎಂದರು.

“ರಾಜ್ಯಕ್ಕೆ ಎರಡು ಐ.ಆರ್.ಪಿ ಬಟಾಲಿಯನ್  ನ್ನು  ಒದಗಿಸಿದ್ದು, ಇನ್ನೆರಡು ಬಟಾಲಿಯನ್ ಒದಗಿಸಬೇಕೆಂದು ಮನವಿ ಮಾಡಲಾಗಿದೆ” ಎಂದು ತಿಳಿಸಿದರು.

ಸೌಹಾರ್ದ ಭೇಟಿ:

ಸೌಹಾರ್ದ ಭೇಟಿಯ ವೇಳೆ ಕೇಂದ್ರದ ಇತ್ತೀಚಿನ ನೀತಿ ಆಹಾರ ಭದ್ರತಾ ಕಾಯ್ದೆಗೆ ವಿರುದ್ಧವಾಗಿದೆ. ಇದು ನೇರವಾಗಿ ಬಡವರ ಎರಡು ಹೊತ್ತಿನ ಊಟಕ್ಕೂ ತೊಂದರೆ ಕೊಡುತ್ತದೆ. ಆದ್ದರಿಂದ ರಾಜ್ಯಗಳಿಗೆ ಆಹಾರ ಧಾನ್ಯಗಳನ್ನು ಕೊಡದಿರುವ ಧೋರಣೆ ಬದಲಾದರೆ ಒಳ್ಳೆಯದು ಎನ್ನುವ ಅಭಿಪ್ರಾಯವನ್ನು ಮುಖ್ಯಮಂತ್ರಿಗಳು ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: PM Modi US Visit: ಪ್ರಧಾನಿ ಮೋದಿ ಅಮೆರಿಕಾ ಭೇಟಿಯಾದಗಲೆಲ್ಲಾ ಮೊದಲು ಸ್ವಾಗತಿಸೋದು ಇವರೇ…

ಈ ಕುರಿತು ಇಂದು ಬೆಳಗ್ಗೆ ಕೇಂದ್ರ ಆಹಾರ ಸಚಿವ ಪಿಯೂಶ್ ಗೋಯಲ್ ಅವರ ಜತೆ ಚರ್ಚಿಸುವುದಾಗಿ ಅಮಿತ್ ಶಾ ಅವರು ಮುಖ್ಯಮಂತ್ರಿಗಳಿಗೆ ತಿಳಿಸಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News