ಬೆಂಗಳೂರು: ಬಿಜೆಪಿ ಸರ್ಕಾರದ ಆರ್ಥಿಕ ಅಶಿಸ್ತು ಮತ್ತು ಕಮಿಷನ್ ಹಾವಳಿಯಿಂದ ಗುತ್ತಿಗೆದಾರರಿಗೆ ಸಮಸ್ಯೆ ಆಗಿದೆ. ಬಿಜೆಪಿ ಹಳಿ ತಪ್ಪಿಸಿರುವ ಆರ್ಥಿಕತೆಯನ್ನು ಸರಿಯಾಗಿಸಲು ಸ್ವಲ್ಪ ಸಮಯಾವಕಾಶ ಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಕರ್ನಾಟಕ ರಾಜ್ಯ ಗುತ್ತಿಗೆಗಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಅವರ ನೇತೃತ್ವದ ನಿಯೋಗವು ಇಂದು ತಮ್ಮನ್ನು ಭೇಟಿ ಮಾಡಿ ಬಾಕಿ ಇರುವ ಬಿಲ್ಲುಗಳ ಪಾವತಿಗೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ರಾಜ್ಯದಲ್ಲಿ ಕಮಿಷನ್ ಹಾವಳಿಗೆ ಕಡಿವಾಣ ಹಾಕಿ, ಸ್ಥಳೀಯ ಗುತ್ತಿಗೆದಾರರ ಹಿತಕ್ಕೆ ಧಕ್ಕೆ ಆಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿದ್ದರಾಮಯ್ಯ ಭರವಸೆ ನೀಡಿದರು.
ಇದನ್ನೂ ಓದಿ: ಇನ್ನೊಂದು ವಾರದಲ್ಲಿ 3,500 ಪೊಲೀಸ್ ಕಾನ್ಸ್ಟೇಬಲ್ ನೇಮಕ: ಗೃಹ ಸಚಿವ ಡಾ.ಜಿ.ಪರಮೇಶ್ವರ್
ಬಜೆಟ್ ಮಂಡನೆಯಾಗಬೇಕಿದೆ. ಬಜೆಟ್ ಅಧಿವೇಶನದ ನಂತರ ಬಿಬಿಎಂಪಿ ಹಾಗೂ ಆರ್ಥಿಕ ಇಲಾಖೆ ಕಾರ್ಯದರ್ಶಿಗಳ ಸಭೆ ಕರೆದು ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಬಿಬಿಎಂಪಿಯಲ್ಲಿ 2000 ಕೋಟಿ ರೂ.ಗಳು ಹಾಗೂ ನಗರೋತ್ಥಾನ ಯೋಜನೆಯಡಿ 1500 ಕೋಟಿ ರೂ.ಗಳು ಬಾಕಿ ಇರುವುದಾಗಿ ತಿಳಿಸಿದ ಕೆಂಪಣ್ಣ ಅವರು ತಡೆಹಿಡಿದಿರುವ ಮೊತ್ತವನ್ನು ಪರಿಶೀಲಿಸಿ ಬಿಡುಗಡೆ ಮಾಡಬೇಕು ಹಾಗೂ ನಿರಾಕ್ಷೇಪಣಾ ಪತ್ರವನ್ನು ಬಿಡುಗಡೆ ಮಾಡಬೇಕೆಂದು ಕೆಂಪಣ್ಣ ಮನವಿ ಮಾಡಿದರು.
ಇದನ್ನೂ ಓದಿ: ಸಾವಿಗೆ ನ್ಯಾಯ ಸಿಗದ ಹಿನ್ನಲೆ ದಯಾಮರಣಕ್ಕೆ ಅನುಮತಿ ನೀಡಿ ಎಂದು ರಾಷ್ಟ್ರಪತಿಗೆ ಪತ್ರ
ಪದಾಧಿಕಾರಿಗಳಾದ ಆರ್.ಅಂಬಿಕಾಪತಿ, ಜಿ.ಎಂ.ರವೀಂದ್ರ, ಸಂಕಾಗೌಡ ಶಾನಿ, ನಾಗರಾಜ್, ಆರ್.ಮಂಜುನಾಥ್, ರಮೇಶ್ ಮೊದಲಾದವರು ಉಪಸ್ಥಿತರಿದ್ದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.