ಬೆಂಗಳೂರು: ಮಾಜಿ ಕೇಂದ್ರ ಸಚಿವ, ದಿವಂಗತ ಆರ್.ಎಲ್. ಜಾಲಪ್ಪ ಪುತ್ರ ಜೆ.ನರಸಿಂಹಸ್ವಾಮಿಗೆ ಜೈಲು ಶಿಕ್ಷೆ ವಿಧಿಸಲಾಗಿದೆ. ಜಾಲಪ್ಪ ಪುತ್ರನಿಗೆ 6 ತಿಂಗಳು ಜೈಲು ಶಿಕ್ಷೆ ಹಾಗೂ 20 ಲಕ್ಷ ರೂ. ದಂಡ ವಿಧಿಸಿ ಕೋರ್ಟ್ ಆದೇಶಿಸಿದೆ.
ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಈ ಆದೇಶ ಹೊರಡಿಸಲಾಗಿದೆ. ಮೆಡಿಕಲ್ ಸೀಟ್ ಕೊಡಿಸುವುದಾಗಿ ವಂಚಸಿದ್ದ ಮಾಜಿ ಶಾಸಕ ನರಸಿಂಹಸ್ವಾಮಿಗೆ ನ್ಯಾಯಾದೀಶೆ ಪ್ರೀತ್.ಜೆ ಅವರು ದಂಡದ ಜೊತೆಗೆ ಶಿಕ್ಷೆ ಪ್ರಕಟಿಸಿದ್ದಾರೆ.
ಇದನ್ನೂ ಓದಿ: ಶಕ್ತಿ ಯೋಜನೆ ಹೊಡೆತ: ಆಟೋ ಮಾರಾಟಕ್ಕೆ ನಿಂತ ಆಟೋ ಚಾಲಕರು
ಪ್ರಕಾಶ್ ಕುಮಾರ್ ಯರಪ್ಪ ಪುತ್ರಿಗೆ ಮೆಡಿಕಲ್ ಸೀಟ್ ಕೊಡಿಸುವುದಾಗಿ ದೊಡ್ಡಬಳ್ಳಾಪುರದ ಮಾಜಿ ಶಾಸಕ ನರಸಿಂಹಸ್ವಾಮಿ ಹಣ ಪಡೆದಿದ್ದ. ಇದೀಗ ಪ್ರಕರಣದಲ್ಲಿ ಅವರು ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ.
ದೇವರಾಜು ಅರಸು ಮೆಡಿಕಲ್ ಕಾಲೇಜಿನಲ್ಲಿ ಸೀಟ್ ಕೊಡಿಸುವುದಾಗಿ ವಂಚನೆ ಮಾಡಲಾಗಿತ್ತು. ಪುತ್ರಿಯ ಮೆಡಿಕಲ್ ಸೀಟ್ಗಾಗಿ ಪ್ರಕಾಶ್ ಕುಮಾರ್ ಯರಪ್ಪ 45 ಲಕ್ಷ ರೂ. ನೀಡಿದ್ದರು.
ಇದನ್ನೂ ಓದಿ: Budget 2023: ರಾಜ್ಯ ಬಜೆಟ್ 2023: ಸರ್ಕಾರದ ತೆರಿಗೆ ಸಂಗ್ರಹ ಸ್ಥಿತಿಗತಿ ಹೇಗಿದೆ?
ಈ ಪ್ರಕರಣದಲ್ಲಿ ಮೇಲ್ಮನವಿ ಸಲ್ಲಿಸುವುದಾಗಿ ತಿಳಿಸಿ ನರಸಿಂಹಸ್ವಾಮಿ ಸಂಬಂಧಿಸಿದ ವಕೀಲರು ಜಾಮೀನು ಕೋರಿದ್ದರು. ಹೀಗಾಗಿ ಮಾಜಿ ಶಾಸಕ ನರಸಿಂಹಸ್ವಾಮಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.